ಕರ್ನಾಟಕ

karnataka

ಎಂಟಿಬಿ ನಾಗರಾಜ್​​ ನಾಗರಹಾವು ಇದ್ದಂತೆ: ಶರತ್​​​​​​​​​​​ ಬಚ್ಚೇಗೌಡ ವಾಗ್ದಾಳಿ

By

Published : Nov 23, 2019, 11:55 AM IST

ಎಂಟಿಬಿ ನಾಗರಾಜ್‌ರನ್ನು ನಾಗರಹಾವಿಗೆ ಹೋಲಿಕೆ ಮಾಡಿ ಶರತ್‌ ಬಚ್ಚೇಗೌಡ ಹೊಸಕೋಟೆಯಲ್ಲಿ ಪ್ರಚಾರದ ವೇಳೆ ವಾಗ್ದಾಳಿ ನಡೆಸಿದ್ದಾರೆ.

ಶರತ್​ ಬಚ್ಚೇಗೌಡ ವಾಗ್ದಾಳಿ

ಹೊಸಕೋಟೆ/ಬೆಂಗಳೂರು:ಎಂಟಿಬಿ ನಾಗರಾಜ್‌ರನ್ನು ನಾಗರಹಾವಿಗೆ ಹೋಲಿಕೆ ಮಾಡಿ ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್‌ ಬಚ್ಚೇಗೌಡ ಶರತ್‌ ಬಚ್ಚೇಗೌಡ ವಾಗ್ದಾಳಿ ನಡೆಸಿದ್ದಾರೆ.

ಶರತ್​ ಬಚ್ಚೇಗೌಡ ವಾಗ್ದಾಳಿ


ಎರೆಹುಳು ಕಷ್ಟಪಟ್ಟು ಹುತ್ತ ಕಟ್ಟುತ್ತೆ. ಆದರೆ ನಾಗರಾಜನ ರೂಪದಲ್ಲಿ ಬಂದ ನಾಗರಹಾವು ಹುತ್ತ ಸೇರಿಕೊಳ್ಳುವಂತೆ ಎಂಟಿಬಿ ಸೇರಿಕೊಂಡು ನಮಗೆ ಜಾಗವಿಲ್ಲದಂತೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ಎತ್ತಕ್ಕಿ ಗ್ರಾಮದಲ್ಲಿ ಮಾತನಾಡಿದ ಅವರು, ಸಂಸತ್‌ ಅಧಿವೇಶನ ನಡೆಯುತ್ತಿರುವ ಕಾರಣ ನನ್ನ ತಂದೆ ಬಚ್ಚೇಗೌಡರು ದೆಹಲಿಯಲ್ಲಿದ್ದು, ನನ್ನ ಪರವಾಗಿ ಪ್ರಚಾರಕ್ಕೆ ಬರುವುದಿಲ್ಲ. ಬಿಜೆಪಿ ಪರ ಪ್ರಚಾರ ಮಾಡ್ತಾರಾ ಅಂತಾನು ನನಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದರು. ಎಂಟಿಬಿ ನಾಗರಾಜ್‌ ಕ್ಷೇತ್ರದ ಮತದಾರರನ್ನು ಕೇಳದೆ ಪಕ್ಷಾಂತರ ಮಾಡಿದ್ದಾರೆ. ಆ ಮೂಲಕ ಮತ ನೀಡಿದವರ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ಮತದಾರರಲ್ಲಿ ಸ್ವಾಭಿಮಾನದ ಪ್ರಶ್ನೆ ಎದ್ದಿದೆ. 92 ಸಾವಿರ ಮತ ಹಾಕಿ ನಾವು ಬಿಜೆಪಿಯನ್ನು ಕಟ್ಟಿದ್ದೆವು. ಆದರೆ, ನಮ್ಮ ಅಭಿಪ್ರಾಯ ಪಡೆಯದೆ ಬಿಜೆ​ಪಿಗೆ ನುಗ್ಗಿ, ನಮಗೆ ಒಂದು ಅವಕಾಶ ಮಾಡಿಕೊಟ್ಟಿಲ್ಲ ಎಂಬ ಅಸಮಾಧಾನ ಬಿಜೆಪಿ ಅಭಿಮಾನಿಗಳಲ್ಲಿ ಮೂಡಿದೆ. ಬಿಜೆಪಿಯಲ್ಲಿ ಇರುವವರೆಲ್ಲಾ ಸ್ವಾಭಿಮಾನಿಗಳಾಗಿದ್ದಾರೆ. ಶರತ್‌ ಬಚ್ಚೇಗೌಡ ಒಬ್ಬನೇ ಸ್ವಾಭಿಮಾನಿಯಲ್ಲ. ಕ್ಷೇತ್ರದಲ್ಲಿರುವ 2.5 ಲಕ್ಷ ಮತದಾರರು ಸ್ವಾಭಿಮಾನಿಗಳಾಗಿದ್ದಾರೆ ಎಂದು ಹೇಳಿದ್ರು.

Intro:ಹೊಸಕೋಟೆ:

ಎಂ.ಟಿ.ಬಿ.ನಾಗರಾಜ್‌ರನ್ನು ನಾಗರಹಾವಿಗೆ ಹೋಲಿಕೆ ಮಾಡಿದ: ಶರತ್‌ ಬಚ್ಚೇಗೌಡ


ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಎಂ.ಟಿ.ಬಿ.ನಾಗರಾಜ್‌ರನ್ನು ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್‌ ಬಚ್ಚೇಗೌಡ ನಾಗರಹಾವಿಗೆ ಹೋಲಿಕೆ ಮಾಡಿ ವಾಗ್ದಾಳಿ ನಡೆಸಿದ್ದಾರೆ. ಎರೆಹುಳು ಕಷ್ಟಪಟ್ಟು ಹುತ್ತ ಕಟ್ಟುತ್ತೆ. ಆದರೆ ನಾಗರಾಜನ ರೂಪದಲ್ಲಿ ಬಂದು ನಾಗರಹಾವು, ಹುತ್ತ ಸೇರಿಕೊಂಡು ನಮಗೆ ಜಾಗವಿಲ್ಲದಂತೆ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Body:ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ಎತ್ತಕ್ಕಿ ಗ್ರಾಮದಲ್ಲಿ ಮಾತನಾಡಿದ ಅವರು ಸಂಸತ್‌ ಅಧಿವೇಶನ ನಡೆಯುತ್ತಿರುವ ಕಾರಣ ನನ್ನ ತಂದೆ ಬಚ್ಚೇಗೌಡರು ದೆಹಲಿಯಲ್ಲಿದ್ದು, ನನ್ನ ಪರವಾಗಿ ಪ್ರಚಾರಕ್ಕೆ ಬರುವುದಿಲ್ಲ,ಬಿಜೆಪಿ ಪರ ಮಾಡುತ್ತಾರ ಅಂತನು ನನಗೆ ಗೊತ್ತಿಲ್ಲ ಅವರನ್ನೆ ಕೇಳಬೇಕು ಎಂದರು
Conclusion:ಎಂ.ಟಿ.ಬಿ.ನಾಗರಾಜ್‌ ಕ್ಷೇತ್ರದ ಮತದಾರರನ್ನು ಕೇಳದೆ ಪಕ್ಷಾಂತರ ಮಾಡಿದ್ದಾರೆ. ಮತ ನೀಡಿದ ಮತದಾರರ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ಮತದಾರರಲ್ಲಿ ಸ್ವಾಭಿಮಾನದ ಪ್ರಶ್ನೆ ಎದ್ದಿದೆ. 92 ಸಾವಿರ ಮತ ಹಾಕಿ ನಾವು ಬಿಜೆಪಿಯನ್ನು ಕಟ್ಟಿದ್ದೇವು. ಆದರೆ, ನಮ್ಮ ಅಭಿಪ್ರಾಯ ಪಡೆಯದೆ ಬಿಜೆ​ಪಿಗೆ ನುಗ್ಗಿ, ನಮಗೆ ಒಂದು ಅವಕಾಶ ಮಾಡಿಕೊಟ್ಟಿಲ್ಲ ಎಂಬ ಅಸಮಾಧಾನ ಬಿಜೆಪಿ ಅಭಿಮಾನಿಗಳಲ್ಲಿ ಮೂಡಿದೆ. ಬಿಜೆಪಿಯಲ್ಲಿ ಇರುವವರೆಲ್ಲಾ ಸ್ವಾಭಿಮಾನಿಗಳಾಗಿದ್ದಾರೆ. ಶರತ್‌ ಬಚ್ಚೇಗೌಡ ಒಬ್ಬನೇ ಸ್ವಾಭಿಮಾನಿಯಲ್ಲ, ಕ್ಷೇತ್ರದಲ್ಲಿರುವ 2.5 ಲಕ್ಷ ಮತದಾರರು ಸ್ವಾಭಿಮಾನಿಗಳಾಗಿದ್ದಾರೆ ಎಂದು ಹೇಳಿದರು.

TAGGED:

ABOUT THE AUTHOR

...view details