ಕರ್ನಾಟಕ

karnataka

ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಬಗ್ಗೆ ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳು..!

By

Published : Dec 9, 2022, 12:34 PM IST

ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯನ್ನು ದನಗಳ ಚರ್ಮಗಂಟು ರೋಗದ ಹಿನ್ನೆಲೆ ರದ್ದು ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು.

spread-fake-news-about-ghati-subrahmanya-cattle-fair
ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಬಗ್ಗೆ ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿಗಳು..!

ದೊಡ್ಡಬಳ್ಳಾಪುರ: ಚರ್ಮಗಂಟು ರೋಗದ ಹಿನ್ನೆಲೆ ಸುಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ರದ್ದು ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಆದರೆ, ಕೆಲ ಕಿಡಿಗೇಡಿಗಳು ದನಗಳ ಜಾತ್ರೆ ನಡೆಯುತ್ತಿದೆ ಎಂಬ ಸುಳ್ಳು ಸುದ್ದಿ ಹರಿ ಬಿಟ್ಟಿದ್ದಾರೆ. ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಲು ಮುಜರಾಯಿ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಚರ್ಮಗಂಟು ರೋಗದಿಂದ ಹಸುಗಳು ಸಾವನ್ನಪ್ಪಿದ ಹಿನ್ನೆಲೆ, ಚರ್ಮಗಂಟು ರೋಗದ ನಿಯಂತ್ರಣಕ್ಕಾಗಿ ಎರಡು ತಿಂಗಳ ಕಾಲ ಜಾನುವಾರುಗಳ ಜಾತ್ರೆ ಮತ್ತು ಸಾಗಾಣಿಕೆಗೆ ನಿರ್ಬಂಧ ಹಾಕಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಆದರೆ, ಕೆಲವು ಕಿಡಿಗೇಡಿಗಳು ಚರ್ಮಗಂಟು ರೋಗ ಕಡಿಮೆಯಾದ ಹಿನ್ನೆಲೆ ಡಿಸೆಂಬರ್ 15 ರಿಂದ ಡಿಸೆಂಬರ್ 22ರವರೆಗೂ ಘಾಟಿ ಕ್ಷೇತ್ರದಲ್ಲಿ ರಾಸುಗಳ ಜಾತ್ರೆ ನಡೆಯುತ್ತದೆ ಎಂಬ ಕರಪತ್ರ ಹಂಚಿದ್ದಾರೆ.

ಕಿಡಿಗೇಡಿಗಳು ಹರಡುತ್ತಿರುವ ಸುಳ್ಳು ಸುದ್ದಿಗೆ ಬ್ರೇಕ್ ಹಾಕಲು ದೇವಸ್ಥಾನ ಆಡಳಿತ ಮಂಡಳಿ ಮತ್ತು ಮುಜರಾಯಿ ಇಲಾಖೆ ಅಧಿಕಾರಿಗಳು ದೊಡ್ಡಬಳ್ಳಾಪುರದ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಿದ್ದಾರೆ.

ಇದನ್ನೂ ಓದಿ:ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ABOUT THE AUTHOR

...view details