ಬೆಂಗಳೂರು:ರಾಜ್ಯದಲ್ಲಿಂದು 1,17,827 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 388 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,85,986ಕ್ಕೆ ಏರಿಕೆಯಾಗಿದೆ.
ಈ ದಿನ 586 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 29,39,239 ಸೋಂಕಿತರು ಗುಣಮುಖರಾಗಿದ್ದಾರೆ. ಕೋವಿಡ್ಗೆ ಇಂದು 05 ಜನರು ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 38,007ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 8,711 ಪ್ರಕರಣಗಳು ಸಕ್ರಿಯವಾಗಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.32 ರಷ್ಟಿದ್ದು, ಸಾವಿನ ಪ್ರಮಾಣ ಶೇ.1.28 ರಷ್ಟಿದೆ.