ಕರ್ನಾಟಕ

karnataka

ಮೂರುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ, ಹತ್ಯೆ: ಆರೋಪಿ ಅಂದರ್

By

Published : Feb 1, 2023, 10:02 AM IST

ಕಾಮುಕನೊಬ್ಬ ಮೂರೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಹೇಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ.

representative image
ಪ್ರಾತಿನಿಧಿಕ ಚಿತ್ರ

ಬೆಂಗಳೂರು:ಮೂರೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪದಡಿ ಕಾಮುಕನನ್ನ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ ಮಹಿಳೆ ಕಾಮಾಕ್ಷಿಪಾಳ್ಯದ ಕಾವೇರಿ ನಗರದಲ್ಲಿ ತನ್ನ ಮಗುವಿನೊಂದಿಗೆ ವಾಸವಾಗಿದ್ದಳು. ನಿನ್ನೆ ಸಂಜೆ ಮಹಿಳೆ ಕೆಲಸಕ್ಕೆ ಹೋಗಿದ್ದಾಗ ಮಗು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಕೃತ್ಯವೆಸಗಿ‌ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಪ್ರಕರಣದ ವಿವರ:ಕೌಟುಂಬಿಕ ಕಲಹದಿಂದ ಗಂಡನಿಂದ ದೂರವಾಗಿದ್ದ ಮಹಿಳೆ ಕಾವೇರಿ ನಗರದಲ್ಲಿ ನೆಲೆಸಿದ್ದಳು. ಜೀವನಕ್ಕಾಗಿ ಗಾರ್ಮೆಂಟ್ಸ್ ವೊಂದರಲ್ಲಿ ಕೆಲಸ‌ ಮಾಡುತ್ತಿದ್ದರು. ಈ ಮಧ್ಯೆ ಆರೋಪಿಯ ಪರಿಚಯವಾಗಿದೆ. ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧ ಏರ್ಪಟ್ಟಿತ್ತು. ಹೀಗಾಗಿ ಆರೋಪಿ ಮಹಿಳೆ ಮನೆಯಲ್ಲಿ ಉಳಿದುಕೊಂಡಿದ್ದ. ನಿರ್ದಿಷ್ಟ ಕೆಲಸವಿಲ್ಲದೇ ತಿರುಗಾಡುತ್ತಿದ್ದ ಆರೋಪಿಯು ಕುಡಿತದ ದಾಸನಾಗಿದ್ದ.

ನಿನ್ನೆ(ಮಂಗಳವಾರ) ಮನೆಯಲ್ಲಿ ಯಾರು ಇಲ್ಲದಿರುವಾಗ ನಶೆಯಲ್ಲಿ ಆರೋಪಿ ಮಗುವಿನ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ‌ ಎನ್ನಲಾಗಿದೆ.‌ ಎಂದಿನಂತೆ ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ತಾಯಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡು ಗಾಬರಿಯಾಗಿದ್ದಾರೆ. ತಕ್ಷಣ ಸಮೀಪದ ಆಸ್ಪತ್ರೆಗೆ ಹೋಗಿದ್ದಾರೆ. ವೈದ್ಯರು ಪರೀಕ್ಷಿಸಿ ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಇಷ್ಟಾದರೂ ಆರೋಪಿ ತನಗೂ ಇದಕ್ಕೂ ಸಂಬಂಧ ಇಲ್ಲ ಎಂಬಂತೆ ನಟಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ‌ ಆರೋಪಿ ಮಹಿಳೆ ಮೇಲೆ ಹಲ್ಲೆ‌‌ ಮಾಡಿದ್ದಾನೆ. ಮಗುವಿನ ಮುಖದ‌ ಮೇಲೆ ಗಾಯಗಳಿರುವುದನ್ನು ಕಂಡು ಮಹಿಳೆ ಸ್ಥಳೀಯರ ಸಹಾಯದಿಂದ ಪೊಲೀಸರಿಗೆ ವಿಷಯ‌ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ: ಇತ್ತೀಚೆಗೆ ಮಹಾರಾಷ್ಟ್ರದ ಡೊಂಬಿವಿಲಿ ನಗರದ ಠಾಕುರ್ಲಿಯ ಖಾದಿ ಕಿನಾರಾ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಇಬ್ಬರು ಹಂತಕರು ಪೊಲೀಸರೆಂದು ಹೆದರಿಸಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿತ್ತು. ಈ ಸಂಬಂಧ ವಿಷ್ಣುನಗರ ಠಾಣೆ ಪೊಲೀಸರು ಅತ್ಯಾಚಾರ ಸಹಿತ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಬ್ಬರಿಗಾಗಿ ಹುಡುಕಾಟ ನಡೆಸಿದ್ದಾರೆ.

ಆರೋಪಿಗಳಿಬ್ಬರೂ ತಲೆಮರೆಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ಜ.28 ರಂದು ಮಧ್ಯಾಹ್ನ ಸುಮಾರಿಗೆ ಸಂತ್ರಸ್ತೆ ಅಪ್ರಾಪ್ತ ವಿದ್ಯಾರ್ಥಿನಿ ಠಾಕುರ್ಲಿ ಖಾದಿ ಬೀಚ್ ಪ್ರದೇಶದಲ್ಲಿ ಸ್ನೇಹಿತನೊಂದಿಗೆ ವಾಕಿಂಗ್ ಹೋಗಿದ್ದರು. ಇಬ್ಬರೂ ನಡೆದುಕೊಂಡು ಹೋಗುತ್ತಿರುವಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಆ ಜಾಗಕ್ಕೆ ಬಂದಿದ್ದಾರೆ. ನಿಮ್ಮಿಬ್ಬರ ಬಗ್ಗೆ ನಿಮ್ಮ ಪೋಷಕರಿಗೆ ತಿಳಿಸುತ್ತೇವೆ, ನಾವು ಪೊಲೀಸರು ಎಂದು ಸುಳ್ಳು ಹೇಳಿ ಇಬ್ಬರಿಗೂ ಬೆದರಿಕೆ ಹಾಕಿದ್ದಾರೆ ಎನ್ನಲಾಗಿತ್ತು.

ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನಿಗೆ ಆರೋಪಿಗಳು ಕಪಾಳಕ್ಕೆ ಹೊಡೆದು ಬೆದರಿಸಿದ್ದಾರೆ. ಬಳಿಕ ಆರೋಪಿಯೊಬ್ಬ ವಿದ್ಯಾರ್ಥಿನಿಯನ್ನು ಸ್ವಲ್ಪ ದೂರದ ಪೊದೆಯಂತಿದ್ದ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾನೆ. ಆ ನಿರ್ಜನ ಸ್ಥಳದಲ್ಲಿ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ವರದಿಯಾಗಿತ್ತು.

ಇದನ್ನೂ ಓದಿ:ಪೊಲೀಸರೆಂದು ಹೆದರಿಸಿ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ABOUT THE AUTHOR

...view details