ಕರ್ನಾಟಕ

karnataka

ಆಯನೂರು ಮಂಜುನಾಥ್​ಗೆ ಕೆಪಿಸಿಸಿ ಮಾಧ್ಯಮ ವಕ್ತಾರ ಹೊಣೆ

By ETV Bharat Karnataka Team

Published : Oct 12, 2023, 10:59 PM IST

ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ್ ಅವರಿಗೆ ಪಕ್ಷದ ಮಾಧ್ಯಮ ವಕ್ತಾರ ಜವಾಬ್ದಾರಿ ನೀಡಲಾಗಿದೆ.

ayanur-manjunath-appointed-as-kpcc-media-spokesperson
ಆಯನೂರು ಮಂಜುನಾಥ್​ಗೆ ಕೆಪಿಸಿಸಿ ಮಾಧ್ಯಮ ವಕ್ತಾರ ಹೊಣೆ

ಬೆಂಗಳೂರು:ಜೆಡಿಎಸ್ ತೊರೆದು ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ್ ಅವರನ್ನು ಪಕ್ಷದ ಮಾಧ್ಯಮ ವಕ್ತಾರರನ್ನಾಗಿ ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.

ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಹಾಗೂ ಸಾಮಾಜಿಕ ವಿಷಯಗಳ ಬಗ್ಗೆ, ಚರ್ಚೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವುದನ್ನು ಗಮನಿಸಿ, ಕಾಂಗ್ರೆಸ್‌ ಪಕ್ಷದ ವಿಚಾರಧಾರೆಗಳನ್ನು ಹಾಗೂ ಸರ್ಕಾರದ ಯೋಜನೆಗಳನ್ನು ಮಾಧ್ಯಮಗಳಲ್ಲಿ ಪರಿಣಾಮಕಾರಿಯಾಗಿ ಬಿಂಬಿಸುವ ಹಿನ್ನೆಲೆಯಲ್ಲಿ ಆಯನೂರು ಮಂಜುನಾಥ್ ಇವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ.

ಇತ್ತೀಚೆಗಷ್ಟೇ ಆಯನೂರು ಮಂಜುನಾಥ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದಕ್ಕೂ ಮುನ್ನ ಬಿಜೆಪಿಯಲ್ಲಿದ್ದ ಆಯನೂರು ಮಂಜುನಾಥ್, ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಜೆಡಿಎಸ್​​ನಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ಎದುರು ಸೋಲು ಕಾಣಬೇಕಾಯಿತು‌. ಬಳಿಕ ಅವರು ಕಾಂಗ್ರೆಸ್​​ಗೆ ಸೇರ್ಪಡೆಯಾದರು.

ಆಯನೂರು ಮಂಜುನಾಥ್ ಇದೀಗ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರನ್ನು ಕೆಪಿಸಿಸಿ ಮಾಧ್ಯಮ ವಕ್ತಾರರನ್ನಾಗಿ ನೇಮಿಸಿದ್ದಾರೆ. ಕೆಪಿಸಿಸಿಯ ಸಂವಹನ ಮತ್ತು ಮಾಧ್ಯಮ ಮುಖ್ಯಸ್ಥರು ನೀಡುವ ಸಲಹೆ ಹಾಗೂ ಮಾರ್ಗದರ್ಶನಗಳ ಅನ್ವಯ ಕಾರ್ಯ ಪ್ರವೃತ್ತರಾಗಿ ಪಕ್ಷ ಬಲವರ್ಧನೆಗೆ ಸಹಕಾರಿಯಾಗಬೇಕಾಗಿ ಕೋರಿದ್ದಾರೆ.

ಇದನ್ನೂ ಓದಿ:ಕೆಲ್ಸ ಮಾಡ್ಬೇಕು ಅಂದ್ರೆ ಮತ ಹಾಕ್ಬೇಕು ಅಂತ ಹೇಳೋದ್ರಲ್ಲಿ ತಪ್ಪೇನಿದೆ?: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ

ABOUT THE AUTHOR

...view details