ಕರ್ನಾಟಕ

karnataka

ಮಾಜಿ ಸಿಎಂ ಬೊಮ್ಮಾಯಿ ಮಾರ್ಗದರ್ಶನ ಕೋರಿದ ಬಿ ವೈ ವಿಜಯೇಂದ್ರ

By ETV Bharat Karnataka Team

Published : Nov 13, 2023, 1:35 PM IST

Updated : Nov 13, 2023, 3:09 PM IST

Basavaraj Bommai congratulates B Y Vijayendra: ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಬಂದು ಆಶೀರ್ವದಿಸುವಂತೆ ಬೊಮ್ಮಾಯಿ ಅವರಿಗೆ ಬಿ ವೈ ವಿಜಯೇಂದ್ರ ಆಹ್ವಾನ ನೀಡಿದ್ದಾರೆ.

Basavaraja Bommai congratulated B Y Vijayendra
ಬಿ.ವೈ.ವಿಜಯೇಂದ್ರ ಅವರನ್ನು ಅಭಿನಂದಿಸಿ ಶುಭ ಹಾರೈಸಿದ ಬಸವರಾಜ ಬೊಮ್ಮಾಯಿ

ಬಿ.ವೈ.ವಿಜಯೇಂದ್ರ ಅವರನ್ನು ಅಭಿನಂದಿಸಿ ಶುಭ ಹಾರೈಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ನಮ್ಮೆಲ್ಲರ ಹಿರಿಯರಾದ ಬಸವರಾಜ ಬೊಮ್ಮಾಯಿ ಅವರನ್ನು ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಭೇಟಿ ಮಾಡಿ ಅವರ ಆಶೀರ್ವಾದ ಪಡೆದಿದ್ದೇನೆ. ಅಲ್ಲದೆ ಮಾರ್ಗದರ್ಶನವನ್ನು ಕೋರಿದ್ದೇನೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಆರ್.ಟಿ. ನಗರದಲ್ಲಿರುವ ಮಾಜಿ ಸಿಎಂ ಬೊಮ್ಮಾಯಿ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿ ಮಾತುಕತೆ ನಡೆಸಿದ ನಂತರ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಬಹಳ ಸಂತೋಷಪಟ್ಟಿದ್ದಾರೆ. ರಾಜ್ಯಾಧ್ಯಕ್ಷರಾಗಿ ನಿನ್ನನ್ನು ನೇಮಕ ಮಾಡುವ ಮೂಲಕ ರಾಷ್ಟ್ರೀಯ ನಾಯಕರು ಅತ್ಯುತ್ತಮ ನಿರ್ಣಯ ಮಾಡಿದ್ದಾಗಿ ಹೇಳಿದ್ದಾರೆ. ಈ ನೇಮಕದಿಂದ ರಾಜ್ಯಕ್ಕೆ, ರಾಜ್ಯ ಬಿಜೆಪಿಗೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಹುರಿದುಂಬಿಸಿದ್ದಾರೆ ಎಂದು ತಿಳಿಸಿದರು.

ನಾನಷ್ಟೇ ಅಲ್ಲ; ಹಿರಿಯರೆಲ್ಲರೂ ನಿನ್ನ ಜೊತೆ ಇರಲಿದ್ದೇವೆ. ಸಹಕಾರ ನೀಡುವ ಮತ್ತು ಮಾರ್ಗದರ್ಶನ ನೀಡುವ ಬಗ್ಗೆ ಮಾತನಾಡಿದ್ದಾರೆ. ದೇಶದ ಭವಿಷ್ಯ ರೂಪಿಸುವ ಮುಂಬರುವ ಲೋಕಸಭಾ ಚುನಾವಣೆಯನ್ನು ನಾವೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸವನ್ನು ನಿನ್ನ ನೇತೃತ್ವದಲ್ಲಿ ಮಾಡೋಣ ಎಂದು ಬೆಂಬಲ ನೀಡಿದ್ದಾರೆ. ಇದೇ 15ರಂದು ಬುಧವಾರ ಜವಾಬ್ದಾರಿ ಸ್ವೀಕರಿಸುವ ಸಂದರ್ಭದಲ್ಲಿ ತಾವು ಬಂದು ಆಶೀರ್ವಾದ ಮಾಡಬೇಕೆಂದು ಕೋರಿದ್ದೇನೆ. ಬರಲೆತ್ನಿಸುವುದಾಗಿ ತಿಳಿಸಿದ್ದಾರೆ ಎಂದರು.

ಬಿ ವೈ ವಿಜಯೇಂದ್ರ ಅವರನ್ನು ಬಸವರಾಜ ಬೊಮ್ಮಾಯಿ ಅವರು ಅಭಿನಂದಿಸಿ ಶುಭ ಹಾರೈಸಿದರು. ಶಾಸಕ ಕೃಷ್ಣಪ್ಪ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಅವೃ ಆಶೀರ್ವಾದ ಪಡೆದ ಬಿ ವೈ ವಿಜಯೇಂದ್ರ:ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಆದ ಬಳಿಕ ಬಿ ವೈ ವಿಜಯೇಂದ್ರ ಅವರು ಪದ್ಮನಾಭ ನಗರದಲ್ಲಿರುವ ನಿವಾಸದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಹೆಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಸಂಸದ ಪ್ರಜ್ವಲ್​ ರೇವಣ್ಣ ಕೂಡ ಜೊತೆಗಿದ್ದರು.

ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿ, ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯಗಳನ್ನು ಕೋರಿ, ಅವರಿಂದ ಆಶೀರ್ವಾದ ಪಡೆದಿದ್ದೇನೆ. ಇಷ್ಟು ಚಿಕ್ಕವಯಸ್ಸಿಗೆ ಇಷ್ಟು ದೊಡ್ಡ ರಾಷ್ಟ್ರೀಯ ಪಕ್ಷದಲ್ಲಿ ದೊಡ್ಡ ಜವಾಬ್ದಾರಿ ಕೊಟ್ಟಿರುವ ಬಗ್ಗೆ ಹೆಮ್ಮೆ ಪಟ್ಟಿದ್ದಾರೆ. ತಂದೆ ಯಡಿಯೂರಪ್ಪ ಅವರಂತೇ ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬಿದ ಮಾದರಿಯಲ್ಲಿ ನಾನು ಕೂಡ ಯಶಸ್ವಿಯಾಗುವಂತೆ ದೇವೇಗೌಡರು ಹಾರೈಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತದಿಂದ ಗೆಲ್ಲುವುದು ಖಚಿತ: ಪ್ರಹ್ಲಾದ್ ಜೋಶಿ ವಿಶ್ವಾಸ

Last Updated :Nov 13, 2023, 3:09 PM IST

ABOUT THE AUTHOR

...view details