ಕರ್ನಾಟಕ

karnataka

ಅಭಿವೃದ್ಧಿಯತ್ತ ಕರ್ನಾಟಕ ಕೊಂಡೊಯ್ಯಲು ಸಂಕಲ್ಪ ಮಾಡಿದ ಬಸವರಾಜ ಬೊಮ್ಮಾಯಿ

By

Published : Jan 28, 2022, 10:46 AM IST

Updated : Jan 28, 2022, 11:15 AM IST

ನನ್ನ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಲ್ಲರಿಗೂ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದೇನೆ. ಎಲ್ಲರ ಶುಭಾಶಯಗಳು ರಾಜ್ಯವನ್ನು ಸುಭಿಕ್ಷತೆಯತ್ತ ತೆಗೆದುಕೊಂಡು ಹೋಗಲು, ರಾಜ್ಯದ ಸಮಗ್ರ ಅಭಿವೃದ್ಧಿ ಮಾಡಲು ವಿಶೇಷವಾಗಿ ರಾಜ್ಯದಲ್ಲಿ ಬಡವರು, ರೈತರು ಮತ್ತು ಹಿಂದುಳಿದವರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರು ಮತ್ತು ಯುವಕರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡಲು ದೊಡ್ಡ ಶಕ್ತಿ ಮತ್ತು ಪ್ರೇರಣೆಯನ್ನು ನೀಡಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವಾದರೂ ಎಲ್ಲರ ಹಾರೈಕೆಗಳು ಇನ್ನಷ್ಟು ಸ್ಫೂರ್ತಿಯಿಂದ ಮತ್ತು ಗಟ್ಟಿಯಾಗಿ ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆರ್‌ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಸಾಮಾನ್ಯ ಜನರಿಂದ ಹಿಡಿದು ಪಕ್ಷದ ಹಿರಿಯರು ಪದಾಧಿಕಾರಿಗಳು, ರಾಷ್ಟ್ರಪತಿಗಳು, ಪ್ರಧಾನಿ ನರೇಂದ್ರ ಮೋದಿಯವರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ. ಕ್ಷೇತ್ರದ ಜನ ಶುಭಾಶಯಗಳನ್ನು ಕೋರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ

ಅಮಿತ್ ಶಾ ಅವರು ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಅವರೆಲ್ಲರಿಗೂ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದ್ದೇನೆ. ಎಲ್ಲರ ಶುಭಾಶಯಗಳು ರಾಜ್ಯವನ್ನು ಸುಭಿಕ್ಷತೆಯತ್ತ ತೆಗೆದುಕೊಂಡು ಹೋಗಲು, ರಾಜ್ಯದ ಸಮಗ್ರ ಅಭಿವೃದ್ಧಿ ಮಾಡಲು ವಿಶೇಷವಾಗಿ ರಾಜ್ಯದಲ್ಲಿ ಬಡವರು, ರೈತರು ಮತ್ತು ಹಿಂದುಳಿದವರು, ಪರಿಶಿಷ್ಟ ಜಾತಿ ಮತ್ತು ಪಂಗಡ, ಮಹಿಳೆಯರು ಮತ್ತು ಯುವಕರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡಲು ದೊಡ್ಡ ಶಕ್ತಿ ಮತ್ತು ಪ್ರೇರಣೆಯನ್ನು ನೀಡಿದೆ ಎಂದು ಸಿಎಂ ಹೇಳಿದ್ದಾರೆ.

ರಾಜ್ಯದ ಅಭಿವೃದ್ಧಿಯ ಚಿತ್ರಣ ನೀಡುವ ಕಿರುಹೊತ್ತಿಗೆ: ಸರ್ಕಾರ ಇಂದು 6 ತಿಂಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕಿರು ಹೊತ್ತಿಗೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಬಿಡುಗಡೆ ಮಾಡಲಾಗುವುದು. ಕಳೆದ 6 ತಿಂಗಳಲ್ಲಿ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ, ರೈತರಿಗೆ, ಮಹಿಳೆಯರಿಗೆ ತೆಗೆದುಕೊಂಡಿರುವ ತೀರ್ಮಾನ ಹಾಗೂ ಅದರ ಪರಿಣಾಮಗಳ ಬಗ್ಗೆ ಪುಸ್ತಕದಲ್ಲಿ ವಿವರಿಸಲಾಗಿದೆ ಎಂದರು.


ಚುನಾವಣಾ ವರ್ಷದ ಬಜೆಟ್: ಮುಂಬರುವ ದಿನಗಳಲ್ಲಿ ಬಜೆಟ್ ಮಂಡನೆಯಾಗಲಿದೆ. ಚುನಾವಣೆ ವರ್ಷದ ಬಜೆಟ್ ಕೂಡಾ ಆಗಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಸಧೃಢ ಮಾಡುವುದು ಒಂದು ಕಡೆಯಾದರೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಎಲ್ಲ ವರ್ಗದ ಜನರಿಗೆ ಅಭಿವೃದ್ಧಿ ಮೂಲಕ ನ್ಯಾಯ ಒದಗಿಸುವ ಯೋಜನೆಗಳನ್ನು ರೂಪಿಸುವ ಉದ್ದೇಶವಿದೆ. ಎಲ್ಲ ಆಯಾಮಗಳು ನಮ್ಮ ಮುಂದಿದ್ದು, ಅವುಗಳಿಗೆ ದಿಕ್ಸೂಚಿಯನ್ನು, ವೇಗವನ್ನು ಹಾಗೂ ಗುರಿ ತಲುಪುವ ಗತಿಯನ್ನು ನೀಡಲು ಸಂಕಲ್ಪ ಮಾಡಿ ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 28, 2022, 11:15 AM IST

ABOUT THE AUTHOR

...view details