ಕರ್ನಾಟಕ

karnataka

ಸುಪ್ರೀಂಕೋರ್ಟ್ ಆದೇಶ : ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ ಜರುಗುವ ಸಾಧ್ಯತೆ

By

Published : May 20, 2022, 5:27 PM IST

ಬಿಬಿಎಂಪಿ

ಚುನಾವಣೆ ಸಂಬಂಧ ಸಮಿತಿ ರಚನೆ ಮಾಡಲಾಗಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಎಲ್ಲ ಮಾಹಿತಿ ಪಡೆದು ಶೀಘ್ರವೇ ಸಭೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು..

ಬೆಂಗಳೂರು/ನವದೆಹಲಿ :ಬಿಬಿಎಂಪಿ ಚುನಾವಣೆ ಸಂಬಂಧ ಕ್ಷೇತ್ರ ಮರು ವಿಂಗಡಣೆ, ಮೀಸಲಾತಿ ಹಂಚಿಕೆ ಪ್ರಕ್ರಿಯೆ ಪೂರ್ಣಗೊಳಿಸಲು 8 ವಾರ ಕಾಲಾವಕಾಶ ನೀಡಿ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಮೂಲಕ ಶೀಘ್ರದಲ್ಲೇ ಚುನಾವಣೆ ಜರುಗುವ ಸಾಧ್ಯತೆ ದಟ್ಟವಾಗಿದೆ.

ಚುನಾವಣೆ ನಡೆಸುವಂತೆ ಬಿಬಿಎಂಪಿ ಮಾಜಿ ಸದಸ್ಯರಾದ ಶಿವರಾಜ್ ಹಾಗೂ ಈ ವಾಜೀದ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, 8 ವಾರದಲ್ಲಿ ಈ ಎಲ್ಲ ಪ್ರಕ್ರಿಯೆ ಮುಗಿಸಬೇಕು ಎಂದು ರಾಜ್ಯ ಸರ್ಕಾರ ರಚನೆ ಮಾಡಿದ ಮರುವಿಂಗಡನಾ ಆಯೋಗಕ್ಕೆ ಸೂಚಿಸಿದೆ ಎಂದು ತಿಳಿದು ಬಂದಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿರುವುದು..

ಈ ಕುರಿತು ಪ್ರತಿಕ್ರಿಯಿಸಿರುವ ಅರ್ಜಿದಾರ ಅಬ್ದುಲ್ ವಾಜೀದ್, ಚುನಾವಣೆ ನಡೆಸುವ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗ ಶುರು ಮಾಡಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

ಒಬಿಸಿ ಮೀಸಲಾತಿ ಪ್ರಕ್ರಿಯೆ 8 ವಾರಗಳಲ್ಲಿ ಪೂರ್ಣಗೊಳ್ಳಬೇಕು : ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ತಿದ್ದುಪಡಿ ಕಾಯ್ದೆ ಅನುಸಾರ ರಚನೆಗೊಂಡಿದ್ದ ಮರು ವಿಂಗಡನಾ ಆಯೋಗ ಒಬಿಸಿ ಮೀಸಲಾತಿ ಪ್ರಕ್ರಿಯೆ ಕೂಡ 8 ವಾರಗಳಲ್ಲಿ ಪೂರ್ಣಗೊಳ್ಳಬೇಕು. ನಂತರ ರಾಜ್ಯ ಸರ್ಕಾರ ಈ ಪ್ರಕ್ರಿಯೆ ಪೂರ್ಣಗೊಳಿಸಿದ ಬಗ್ಗೆ ಅಧಿಸೂಚನೆ ಹೊರಡಿಸಬೇಕು ಎಂದು ಸೂಚನೆ ನೀಡಿದೆ ಎಂದು ತಿಳಿಸಿದರು.

ಚುನಾವಣೆ ಆಯೋಗ ಕ್ರಮ ಕೈಗೊಳ್ಳಬೇಕು :ರಾಜ್ಯ ಸರ್ಕಾರದ ಪರ ಪ್ರಕ್ರಿಯೆ ಪೂರ್ಣಗೊಳಿಸುವ ಬಗ್ಗೆ ಭರವಸೆ ನೀಡಿದ ಕೇಂದ್ರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅಧಿಸೂಚನೆ ಜಾರಿಯಾಗಿ ಬಿಬಿಎಂಪಿ ಚುನಾವಣೆ ನಡೆಸಲು ಚುನಾವಣೆ ಆಯೋಗ ಕ್ರಮಕೈಗೊಳ್ಳಬೇಕು ಎಂದರು.

ಚುನಾವಣಾ ಆಯೋಗದ ಸೂಕ್ತ ನಿರ್ಧಾರ :ಚುನಾವಣಾ ಆಯೋಗ ಸಾಂವಿಧಾನಿಕ ಸಂಸ್ಥೆಯಾಗಿದೆ. ಎಲ್ಲಾ ಪರಿಸ್ಥಿತಿಗಳನ್ನು ಅವಲೋಕಿಸಿ ಚುನಾವಣೆ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕೋರ್ಟ್ ಹೇಳಿದೆ ಎಂದು ವಿವರಿಸಿದರು.

ಸುಪ್ರೀಂ ತೀರ್ಪಿನ ಎಲ್ಲ ಮಾಹಿತಿ ಪಡೆದು ಶೀಘ್ರ ಸಭೆ : ತುಷಾರ್ ಗಿರಿನಾಥ್

ಬೆಂಗಳೂರು : ಚುನಾವಣೆ ಸಂಬಂಧ ಸಮಿತಿ ರಚನೆ ಮಾಡಲಾಗಿದೆ. ಸುಪ್ರೀಂಕೋರ್ಟ್ ತೀರ್ಪಿನ ಎಲ್ಲ ಮಾಹಿತಿ ಪಡೆದು ಶೀಘ್ರವೇ ಸಭೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ನಮ್ಮ ವಕೀಲರ ಬಳಿ ಮಾಹಿತಿ ಪಡೆದುಕೊಂಡಿದ್ದೇವೆ.

ನಮಗೆ ವಾರ್ಡ್ ಮರುವಿಂಗಡನೆ ಮಾತ್ರ ಮಾಡುವ ಕೆಲಸ ಇದೆ. ಹಾಗಾಗಿ, ಮೀಸಲಾತಿ ಸರ್ಕಾರದ ಹಂತದಲ್ಲಾಗುತ್ತೆ. ಈಗ ಸುಪ್ರೀಂ 8 ವಾರ ಸಮಯ ಕೊಟ್ಟಿದೆ. ಆ ಸಮಯದಲ್ಲಿ ನಾವು ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದರು. ಸರ್ಕಾರದ ಹಂತದಲ್ಲಿ ಸಾಕಷ್ಟುನಿರ್ಧಾರ ಕೈಗೊಳ್ಳಬೇಕಿದೆ. ವಾರ್ಡ್ ಮರು ವಿಂಗಡಣೆ ಬಹುತೇಕ ಪೂರ್ಣಗೊಂಡಿದೆ. ಎಲ್ಲವು ಮಾನದಂಡಗಳ ಪ್ರಕಾರವೇ ಆಗಲಿದೆ ಎಂದರು.

ಓದಿ:ಚಿಕ್ಕಬಳ್ಳಾಪುರ : ನೂತನ ಗ್ರಾಪಂ ಕಟ್ಟಡಕ್ಕೆ ಬೀಗ ಹಾಕಿಸಿದ ಹೈಕೋರ್ಟ್.. ಕಾರಣ ಏನಂದ್ರೆ..

ABOUT THE AUTHOR

...view details