ಕರ್ನಾಟಕ

karnataka

ಬೆಂಗಳೂರಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್: ಪರಿಚಯಸ್ಥ ಯುವಕರಿಂದಲೇ ಹೀನ ಕೃತ್ಯ

By

Published : Oct 9, 2022, 7:11 AM IST

Updated : Oct 9, 2022, 11:33 AM IST

ಬಾಲಕಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

bengaluru
ಬೆಂಗಳೂರು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 17 ವರ್ಷದ ಬಾಲಕಿ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬಾಲಕಿ ಪೋಷಕರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪರಿಚಯವಿರುವ ಯುವಕರೇ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು, ಬೇರೆ ಬೇರೆ ಸಮಯದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ದೂರಿದ್ದಾರೆ. ಅಷ್ಟೇ ಅಲ್ಲದೇ, ಆರೋಪಿಗಳು ಬಾಲಕಿಯ ಕೆಲ ಖಾಸಗಿ ಫೋಟೋ ಹಾಗೂ ವಿಡಿಯೋ ಇಟ್ಟುಕೊಂಡು ಬೆದರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ಆರೋಪ: ಪೋಷಕರಿಂದ ದೂರು

ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಸದ್ಯ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Last Updated :Oct 9, 2022, 11:33 AM IST

ABOUT THE AUTHOR

...view details