ಕರ್ನಾಟಕ

karnataka

ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

By

Published : Mar 9, 2023, 4:03 PM IST

Updated : Mar 9, 2023, 4:37 PM IST

ಕೆಎಸ್​ಡಿಎಲ್ ರಾಸಾಯನಿಕ ಖರೀದಿ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿದ್ದಾರೆ.

BJP MLA Madal Virupakshappa appeared  Virupakshappa appeared before Lokayukta police  BJP MLA Madal Virupakshappa case  KSDL bribe case  ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ  ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾದ ಬಿಜೆಪಿ ಶಾಸಕ  ಕೆಎಸ್​ಡಿಎಲ್ ರಾಸಾಯನಿಕ ಖರೀದಿ ಟೆಂಡರ್  ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ  ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ  ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್  ವಕೀಲ ಸಂದೀಪ್ ಪಾಟೀಲ್
ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್ ಡಿಎಲ್) ರಾಸಾಯನಿಕ ಖರೀದಿ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಅವರು ಲೋಕಾಯುಕ್ತ ಕಚೇರಿ ಮುಂದೆ ಹಾಜರಾಗಿದ್ದಾರೆ. ನಿರೀಕ್ಷಣಾ ಜಾಮೀನು ಪಡೆದು 48 ಗಂಟೆಯೊಳಗೆ‌ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕೆಂದು ನ್ಯಾಯಾಲಯ ಆದೇಶಿತ್ತು‌‌. ಅದರಂತೆ ದಾವಣಗೆರೆಯಿಂದ ಬೆಂಗಳೂರಿಗೆ ಬಂದಿದ್ದ ಮಾಡಾಳ್, ತಮ್ಮ ವಕೀಲ ಸಂದೀಪ್ ಪಾಟೀಲ್ ಅವರನ್ನು ಭೇಟಿ ಮಾಡಿ ಲೋಕಾಯುಕ್ತ ಕಚೇರಿಯತ್ತ ತೆರಳಿದ್ದರು.

ತಮ್ಮ ವಕೀಲ ಸಂದೀಪ್ ಪಾಟೀಲ್ ಅವರನ್ನು ಭೇಟಿ ಮಾಡಿರುವ ಮಾಡಾಳ್​ ವಿರೂಪಾಕ್ಷಪ್ಪ ಲೋಕಾಯುಕ್ತ ಪೊಲೀಸರ ಪ್ರಶ್ನೆಗಳಿಗೆ ಹೇಗೆ ಉತ್ತರ ನೀಡಬೇಕು ಎಂಬ ಸಲಹೆ ಪಡೆದುಕೊಂಡಿದ್ದಾರೆ‌. ಈ ವೇಳೆ ಮಾಧ್ಯಮಗಳೊಂದಿಗೆ ಚುಟುಕಾಗಿ ಪ್ರತಿಕ್ರಿಯಿಸಿದ ಮಾಡಾಳ್ ನಾನು ಹಾರ್ಟ್ ಪೇಶೆಂಟ್, ನನಗೆ ತೊಂದರೆ ಕೊಡಬೇಡಿ.. ಲೋಕಾಯುಕ್ತ ಕಚೇರಿಗೆ ಹಾಜರಾಗುತ್ತೇನೆ ಎಂದಷ್ಟೇ ಹೇಳಿ ನಿರ್ಗಮಿಸಿದರು.

ನಿನ್ನೆಯಷ್ಟೇ ಇನ್ಸ್​ಪೆಕ್ಟರ್​ ಮಹದೇವಯ್ಯ ನೇತೃತ್ವದ ಅಧಿಕಾರಿಗಳ ತಂಡವು ಮಾಡಾಳ್ ವಿರುಪಾಕ್ಷಪ್ಪ ನಿವಾಸಕ್ಕೆ ಬಂದು ಪರಿಶೀಲನೆ ನಡೆಸುತಿತ್ತು. ಲಂಚ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾತಿಗಳ ಬಗ್ಗೆ ಶೋಧಕಾರ್ಯ ಕೈಗೊಂಡಿದ್ದರು. ದಾಳಿ ವೇಳೆ ಸಿಕ್ಕಿದ್ದ ದಾಖಲಾತಿಗಳ ಸಂಬಂಧಿಸಿದಂತೆ ಪೂರಕ ಹೆಚ್ಚುವರಿ ದಾಖಲಾತಿ ಹಾಗೂ ಸಾಕ್ಷ್ಯಾಧಾರಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಮತ್ತೊಂದೆಡೆ‌ ಕೆಎಸ್​ಡಿಎಲ್​ಗೂ ಭೇಟಿ ನೀಡಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಓದಿ:ಬಿಜೆಪಿ ಶಾಸಕ ಮಾಡಾಳ್ ವಿರುದ್ಧ ಶಿಸ್ತು ಕ್ರಮ.. ಹೈಕಮಾಂಡ್​ನಿಂದ ಕಾದು ನೋಡುವ ತಂತ್ರ

ಹೈಕೋರ್ಟ್​ಗೆ ಮೊರೆ ಹೋಗಿದ್ದ ಶಾಸಕ:ಕೆಎಸ್‌ಡಿಎಲ್‌ನ ಗುತ್ತಿಗೆಗೂ ಲಂಚ ಸ್ವೀಕರಿಸಿರುವವರಿಗೂ ಸಂಬಂಧ ಇಲ್ಲ. ಅಲ್ಲದೆ, ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ಆದರೂ ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಲೊಕಾಯುಕ್ತ ಪೊಲೀಸರು ಬಂಧಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಮಾಡಾಳ್​ ವಿರೂಪಾಕ್ಷಪ್ಪ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಿದ್ದರು.

ಹೈಕೋರ್ಟ್​ ಆದೇಶವೇನು?:ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್) ರಾಸಾಯನಿಕಗಳ ಪೂರೈಕೆಗೆ ಗುತ್ತಿಗೆ ಪಡೆದವರಿಗೆ ಕಾರ್ಯಾದೇಶ ನೀಡಲು ಲಂಚ ಸ್ವೀಕರಿಸಿದ ಗಂಭೀರ ಆರೋಪದಲ್ಲಿ ಸಿಲುಕಿದ್ದ ಕೆಎಸ್‌ಡಿಎಲ್‌ ಅಧ್ಯಕ್ಷ ಮಾಡಾಳ್ ವಿರುಪಾಕ್ಷಪ್ಪಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ವಿರುಪಾಕ್ಷಪ್ಪ ಅವರು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಕೆ.ನಟರಾಜನ್, ಆದೇಶದ ಪ್ರತಿ ಸಿಕ್ಕ 48 ಗಂಟೆಗಳಲ್ಲಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಅಧಿಕಾರಿಗಳ ತನಿಖೆಗೆ ಸಹಕರಿಸ ಬೇಕು. 5 ಲಕ್ಷ ಬೆಲೆಯ ಎರಡು ಬಾಂಡ್​ಗಳನ್ನು ನೀಡಬೇಕು ಎಂದು ತಿಳಿಸಿದ್ದರು. ಹೈಕೋರ್ಟ್​ ಆದೇಶದಂತೆ ಶಾಸಕ ಮಾಡಳ್​ ವಿರೂಪಾಕ್ಷಪ್ಪ ಈಗ ಲೋಕಾಯುಕ್ತರ ಕಚೇರಿಗೆ ಭೇಟಿ ನೀಡಿದ್ದಾರೆ. ಲೋಕಾಯುಕ್ತ ಪೊಲೀಸರು ಎಷ್ಟು ಗಂಟೆಗಳ ಕಾಲ ವಿಚಾರಣೆ ನಡೆಸುತ್ತಾರೆ ಎಂಬುದನ್ನು ನೋಡಬೇಕಾಗಿದೆ.

ಓದಿ:ಬಿಜೆಪಿ ಶಾಸಕ ಮಾಡಾಳ್ ವಿರುದ್ಧ ಶಿಸ್ತು ಕ್ರಮ.. ಹೈಕಮಾಂಡ್​ನಿಂದ ಕಾದು ನೋಡುವ ತಂತ್ರ

Last Updated :Mar 9, 2023, 4:37 PM IST

ABOUT THE AUTHOR

...view details