ಕರ್ನಾಟಕ

karnataka

ಪ್ರಿಯಾಂಕ್ ಖರ್ಗೆಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ: ಬಿಜೆಪಿ ಟ್ವೀಟ್

By

Published : Aug 13, 2022, 3:07 PM IST

Updated : Aug 13, 2022, 3:29 PM IST

ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದು ಬಿಜೆಪಿ ಟ್ವೀಟ್​ ಮಾಡಿದೆ.

bjp-slams-congress-mla-priyank-kharge
ಪ್ರಿಯಾಂಕ್ ಖರ್ಗೆಯವರಿಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ: ಬಿಜೆಪಿ ಟ್ವೀಟ್

ಬೆಂಗಳೂರು: ಲಂಚ- ಮಂಚದ ಸರ್ಕಾರ ಎಂಬ ಕಾಂಗ್ರೆಸ್​ ಶಾಸಕ ಪ್ರಿಯಾಂಕ್​ ಖರ್ಗೆ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಪ್ರಿಯಾಂಕ್​ ಖರ್ಗೆಯವರಿಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ ಎಂದು ಟೀಕಿಸಿದೆ.

ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿದ್ದು, ಇವರು‌ ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು?. ಪ್ರಿಯಾಂಕ್ ಖರ್ಗೆ ಅವರೇ, ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಮಹಿಳೆಯೋರ್ವರ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ ಎಂದು ಪ್ರಶ್ನಿಸಿದೆ.‘

ಇದನ್ನೂ ಓದಿ:ಯುವತಿಯರು ಉದ್ಯೋಗ ಬೇಕಾದ್ರೆ ಮಂಚ ಹತ್ತಬೇಕು: ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ

ಅಲ್ಲದೇ, ಯುಪಿಎ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದ ಕಾಂಗ್ರೆಸ್ ‌ನಾಯಕರು ಮಹಿಳೆಯರ ಮೇಲೆ ನಡೆಸಿದ 'ದಿಗ್ವಿಜಯ', 'ಅಭಿಷೇಕ'ಗಳ ಸಿಡಿ ನಿಮ್ಮ ಮಂಚದ ಸರ್ಕಾರದ ಫಲವಲ್ಲವೇ?. ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ ಎಂದು ತಿರುಗೇಟು ಕೊಟ್ಟಿದೆ.

ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು. ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ?. ಕೂಡಲೇ ಕ್ಷಮೆಯಾಚಿಸಿ ಎಂದು ಬಿಜೆಪಿ ಆಗ್ರಹಿಸಿದೆ.

ಇದನ್ನೂ ಓದಿ:ಪ್ರಿಯಾಂಕ ಖರ್ಗೆ ತಂದೆಯಂತೆ ಸಂಸ್ಕಾರವಂತ ಅಂದುಕೊಂಡಿದ್ದೆ.. ಸಚಿವ ಶ್ರೀರಾಮುಲು

Last Updated : Aug 13, 2022, 3:29 PM IST

ABOUT THE AUTHOR

...view details