ಕರ್ನಾಟಕ

karnataka

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ

By

Published : Sep 28, 2022, 8:40 PM IST

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ಸಮೀಪದ ದೊಡ್ಡಾಲಳ್ಳಿ ನಿವಾಸದ ಮೆಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

cbi-raid-on-dk-shivakumar-residence
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ

ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕನಕಪುರ ಸಮೀಪದ ದೊಡ್ಡಾಲಳ್ಳಿ ನಿವಾಸದ ಮೆಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಅಧಿಕಾರಿಗಳ ತಂಡವು ನಿವಾಸದ ಮೇಲೆ ದಿಢೀರ್ ದಾಳಿ ನಡೆಸಿರುವ ಬಗ್ಗೆ ಡಿಕೆಶಿ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ದಾಳಿ ವೇಳೆ ಸಿಬಿಐ ಅಧಿಕಾರಿಗಳು ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಭೇಟಿ ನೀಡಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ಡಿಕೆ ಶಿವಕುಮಾರ್ ವಿವರಣೆ ನೀಡಿದ್ದಾರೆ. ಸಿಬಿಐ ಅಧಿಕಾರಿಗಳ ದಾಳಿಗೆ ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರು ಸಾಥ್ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ 11 ಗಂಟೆ ಸುಮಾರು ದಾಳಿ ಆರಂಭಿಸಿದ ಸಿಬಿಐ ಅಧಿಕಾರಿಗಳು ಮಧ್ಯಾಹ್ನ 3 ಗಂಟೆ ತನಕ ನಿವಾಸಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೆಲ ಆಸ್ತಿಪಾಸ್ತಿ ಬಗ್ಗೆ ದಾಖಲೆ ಸಂಗ್ರಹಿಸಿದ್ದಾರೆ ಎಂದು ಹೇಳಲಾಗಿದೆ.

ಡಿಕೆ ಶಿವಕುಮಾರ್ ಅವರು ಈ ತಿಂಗಳ 30ರಂದು ರಾಜ್ಯ ಪ್ರವೇಶಿಸಲಿರುವ ಕಾಂಗ್ರೆಸ್ ಹೈಕಮಾಂಡ್ ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಸಿದ್ಧತೆ ನಡೆಸುತ್ತಿರುವಾಗಲೇ ಸಿಬಿಐ ದಾಳಿ ನಡೆದಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ:ಅಕ್ರಮ ಹಣ ಗಳಿಕೆ ಪ್ರಕರಣ: ದೆಹಲಿ ಇಡಿ ಕಚೇರಿಗೆ ಹಾಜರಾದ ಡಿ.ಕೆ.ಶಿವಕುಮಾರ್

ABOUT THE AUTHOR

...view details