ಕರ್ನಾಟಕ

karnataka

ಪಿಎಸ್ಐ ಹಗರಣ: ಅಮೃತ್ ಪಾಲ್ ವಿರುದ್ಧ 1406 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ

By

Published : Sep 28, 2022, 4:52 PM IST

ಪಿಎಸ್ಐ ಪರೀಕ್ಷಾ ನೇಮಕ ಜಾಲದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ.ಶೇಖರ್ ನ್ಯಾಯಾಲಯಕ್ಕೆ ಅಮೃತ್ ಪಾಲ್ ವಿರುದ್ಧ 1,406 ಪುಟಗಳ‌ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

cid-submits-charge-sheet-against-adgp-amrit-paul
ಪಿಎಸ್ಐ ಹಗರಣ: ಅಮೃತ್ ಪಾಲ್ ವಿರುದ್ಧ 1406 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ

ಬೆಂಗಳೂರು: ಪಿಎಸ್ಐ ಪರೀಕ್ಷಾ ನೇಮಕಾತಿ ಹಗರಣ ಸಂಬಂಧ ಎಡಿಜಿಪಿ ಅಮೃತ್ ಪಾಲ್ ವಿರುದ್ಧ ಸಿಐಡಿ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು 1ನೇ‌ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪಿಎಸ್ಐ ಪರೀಕ್ಷಾ ನೇಮಕಾತಿ ಜಾಲದಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ತನಿಖಾಧಿಕಾರಿ ಡಿವೈಎಸ್ಪಿ ಬಿ.ಕೆ.ಶೇಖರ್ ಇಂದು ನ್ಯಾಯಾಲಯಕ್ಕೆ ಅಮೃತ್ ಪಾಲ್ ವಿರುದ್ಧ 1,406 ಪುಟಗಳ‌ ಚಾರ್ಜ್​ಶೀಟ್ ಸಲ್ಲಿಸಿದರು. ಈ ಮುನ್ನ ಸಿಐಡಿ ಸಲ್ಲಿಸಿದ್ದ ಚಾರ್ಜ್​ಶೀಟ್​​ನಲ್ಲಿ ಪ್ರಮುಖ ಆರೋಪಿಯಾಗಿರುವ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪಾಲ್ ಹೆಸರು ಉಲ್ಲೇಖಿಸಲಿರಲಿಲ್ಲ.

ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 35ನೇ ಆರೋಪಿಯಾಗಿರುವ ಪಾಲ್ ವಿರುದ್ಧ‌ 78 ದಾಖಲೆಗಳು, 38 ಸಾಕ್ಷಿಗಳು ಒಳಗೊಂಡ 1,406 ಪುಟಗಳ ಚಾರ್ಜ್​ಶೀಟ್​​ನಲ್ಲಿ ಉಲ್ಲೇಖಿಸಲಾಗಿದೆ‌. ನೇಮಕಾತಿ ಪ್ರಕರಣದಲ್ಲಿ ಪಾಲ್ ಕೈವಾಡ, ಅಕ್ರಮ ಎಸಗಲು ಯಾವ ರೀತಿ ಸಂಚು ರೂಪಿಸಿದ್ದರು? ಅಭ್ಯರ್ಥಿಗಳಿಂದ ಪಡೆದ ಹಣ ಸೇರಿದಂತೆ ಹಲವು ಅಂಶಗಳ ಬಗ್ಗೆ ಉಲ್ಲೇಖಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ನಂಬಿಕೆಯಿಂದ ಸ್ಟ್ರಾಂಗ್ ರೂಮ್ ಕೀ ಕೊಟ್ಟಿದ್ದೆ: ಸಿಐಡಿ ಮುಂದೆ ಅಮೃತ್ ಪಾಲ್‌‌ ಹೇಳಿಕೆ

ABOUT THE AUTHOR

...view details