ಕರ್ನಾಟಕ

karnataka

ಬೆಂಗಳೂರು ಅಭಿವೃದ್ಧಿ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ತುರ್ತು ಸಭೆ

By

Published : Nov 7, 2021, 7:05 PM IST

ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿದಂತೆ ತುರ್ತು ಸಭೆ ಕರೆದಿದ್ದಾರೆ. ಈ ಸಭೆ ಬಗ್ಗೆ ಯಾವುದೇ ಸಚಿವರಿಗೆ ಮಾಹಿತಿ ನೀಡಿಲ್ಲ.

CM Basavaraj bommai
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು:ಬೆಂಗಳೂರು ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ಕರೆದಿದ್ದಾರೆ.

ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಲ್ಲೇಶ್ವರಂ ಬಿಜೆಪಿ ಕಚೇರಿಯಿಂದ ತೆರಳಿದ ಸಿಎಂ, ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಅಭಿವೃದ್ಧಿ ಸಂಬಂಧ ಅಧಿಕಾರಿಗಳ ಜೊತೆ ಸಭೆ ಕರೆದಿರುವುದು ಕುತೂಹಲ ಮೂಡಿಸಿದೆ.

ಮಳೆ ಅನಾಹುತ ಸಂಬಂಧ ಚರ್ಚೆ ನಡೆಸಲೂ ಸಿಎಂ ಬೊಮ್ಮಾಯಿ ಯಾವುದೇ ಬೆಂಗಳೂರಿನ ಸಚಿವರಿಗೆ ಮಾಹಿತಿ ನೀಡದೆ ತುರ್ತು ಸಭೆ ನಡೆಸಿದ್ದರು. ಇಂದು ಕೂಡ ಸಚಿವರುಗಳಿಗೆ ಮಾಹಿತಿ ನೀಡದೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲು ತುರ್ತು ಸಭೆ ಕರೆದಿರುವುದು ಅಚ್ಚರಿ ಮೂಡಿಸಿದೆ.

ಈ ಬಗ್ಗೆ ಸಚಿವ ಆರ್.ಅಶೋಕ್​ ಅವರನ್ನು ಕೇಳಿದರೆ ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ಅಧಿಕಾರಿಗಳ ಜೊತೆ ಸಭೆ ಮಾಡುತ್ತಿರಬಹುದು ಎಂದು ತಿಳಿಸಿದರು.

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬೆಂಗಳೂರು ಸಚಿವರಾದ ಆರ್.ಅಶೋಕ್, ಅಶ್ವತ್ಥನಾರಾಯಣ ಉಪಸ್ಥಿತರಿದ್ದರೂ, ಸಿಎಂ ಬೊಮ್ಮಾಯಿ ಬೆಂಗಳೂರು ಅಭಿವೃದ್ಧಿ ಕುರಿತ ಸಭೆ ಬಗ್ಗೆ ಮಾಹಿತಿ ನೀಡಿಲ್ಲ.

ಬೆಂಗಳೂರಿಗೆ ವಿಶೇಷ ಪ್ಯಾಕೇಜ್ ಘೋಷಿಸುವ ಚಿಂತನೆ ಇದ್ದು, ಈ ಸಂಬಂಧ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ರಸ್ತೆ ಗುಂಡಿ, ವಿವಿಧ ಅಭಿವೃದ್ಧಿ ಕಾಮಗಾರಿ, ಮೆಟ್ರೋ ಕಾಮಗಾರಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

ಇದನ್ನೂ ಓದಿ: ನಾಳೆಯಿಂದಲೇ ಹೋಟೆಲ್​​ ಗ್ರಾಹಕರ ಜೇಬಿಗೆ ಕತ್ತರಿ: ಊಟ-ತಿಂಡಿ ಬೆಲೆ 10 ರೂ. ಹೆಚ್ಚಳ

ABOUT THE AUTHOR

...view details