ಕರ್ನಾಟಕ

karnataka

ಮೋದಿ ದೂರದೃಷ್ಟಿ ನಾಯಕ, ಅಮಿತ್ ಶಾ ದಕ್ಷ ನಾಯಕ: ಸಿಎಂ ಬೊಮ್ಮಾಯಿ‌ ಬಣ್ಣನೆ

By

Published : Aug 4, 2022, 1:51 PM IST

cm-bommai-praised-modi-and-amit-shah

ಬೆಂಗಳೂರಿನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯದಿಂದ ಆಯೋಜಿಸಲಾಗಿದ್ದ ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ ಮೋದಿ ಮತ್ತು ಅಮಿತ್ ಶಾ ಅವರನ್ನು ಹೊಗಳಿದ್ದಾರೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದೂರದೃಷ್ಟಿಯ ನಾಯಕರಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ದಕ್ಷ ನಾಯಕರಾಗಿದ್ದಾರೆ. ಹಾಗಾಗಿ ದೇಶಕ್ಕೆ ದೂರದೃಷ್ಟಿ ಮತ್ತು ದಕ್ಷ ನಾಯಕತ್ವ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕೇಂದ್ರದ ನಾಯಕತ್ವವನ್ನು ಮುಕ್ತಕಂಠದಿಂದ ಹಾಡಿ ಹೊಗಳಿದ್ದಾರೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಸಿಐಐ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಬಿಜೆಪಿ ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ‌ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹೊಗಳಿದರು‌. ಯಾವುದೇ ದೇಶ ಅಭಿವೃದ್ಧಿಯಾಗಲು ದೂರದೃಷ್ಟಿಯುಳ್ಳ, ದಕ್ಷತೆಯಿಂದ ಕೂಡಿರುವ ಗಟ್ಟಿ ನಾಯಕತ್ವ ಬೇಕು. ಅಂತಹ ನಾಯಕತ್ವ ಈಗ ನಮ್ಮ ದೇಶಕ್ಕೆ ಸಿಕ್ಕಿದೆ ಎಂದು ಹೇಳಿದರು.

ನಂತರ ರಾಜ್ಯದ ಆದ್ಯತೆ ಮತ್ತು ಯೋಜನೆಗಳ ವಿಚಾರಗಳ ಮೇಲೆ ಬೆಳಕು ಚೆಲ್ಲಿದ ಸಿಎಂ, ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಉಲ್ಲೇಖಿಸಿದರು. ಉದ್ಯೋಗ ನೀತಿ, ಆರ್ ಆ್ಯಂಡ್ ಡಿ ನೀತಿ, ವಿದ್ಯುತ್‌ ಚಾಲಿತ ವಾಹನಗಳ ನೀತಿ, ಕೈಗಾರಿಕಾ ನೀತಿ, ಸೆಮಿ ಕಂಡಕ್ಟರ್ ನೀತಿಗಳನ್ನು ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ಬಗ್ಗೆ ಪ್ರಸ್ತಾಪಿಸಿದರು. ಉದ್ಯೋಗ ಸೃಷ್ಟಿ ಮತ್ತು ಆರ್ಥಿಕತೆ ಸದೃಢಗೊಳ್ಳಲು ರಾಜ್ಯ ಮುಂದಾಗುತ್ತಿರುವುದಾಗಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ದೇಶದ ಆರ್ಥಿಕತೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಅಪೇಕ್ಷೆ ಇರಿಸಿಕೊಂಡಿದ್ದಾರೆ. ಹಾಗಾಗಿ ಮೋದಿಯವರ ಐದು ಟ್ರಿಲಿಯನ್ ಆರ್ಥಿಕತೆ ಸೃಷ್ಟಿಯ ಕನಸಿಗೆ ರಾಜ್ಯದಿಂದಲೂ ಬೆಂಬಲ ಸಿಗಲಿದೆ. ರಾಜ್ಯದಿಂದ 1 ಟ್ರಿಲಿಯನ್ ಆರ್ಥಿಕತೆ ಸೃಷ್ಟಿಯಾಗಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ಓದಿ :ರಾಜ್ಯ ಬಿಜೆಪಿ ಕಾರ್ಯಕರ್ತರ ಅಸಮಾಧಾನ ಶಮನಗೊಳಿಸಿ ಚುನಾವಣೆಗೆ ಪಕ್ಷ ಸಜ್ಜುಗೊಳಿಸಿ: ಅಮಿತ್ ಶಾ ಸೂಚನೆ

ABOUT THE AUTHOR

...view details