ಕರ್ನಾಟಕ

karnataka

ಅಡುಗೆ ಅನಿಲ ದರ ಏರಿಕೆ ಖಂಡಿಸಿ ನಡು ರಸ್ತೆಯಲ್ಲೇ ಅಡುಗೆ ತಯಾರಿಸಿ ಕಾಂಗ್ರೆಸ್ ಪ್ರತಿಭಟನೆ

By

Published : Feb 9, 2021, 4:41 PM IST

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ರಸ್ತೆಯಲ್ಲೇ ಅಡುಗೆ ಸಿದ್ಧಪಡಿಸಿ ಉಣಬಡಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ತಯಾರಿಸಿದ ಆಹಾರವನ್ನು ಅಲ್ಲಿಯೇ ಇದ್ದ ಬಡವರಿಗೆ ಹಾಗೂ ಹಸಿದವರಿಗೆ ನೀಡುವ ಮೂಲಕ ಮಾನವೀಯತೆ ಮೆರೆದರು.

congress-protest
ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ ಹಮ್ಮಿಕೊಂಡಿತ್ತು. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಒಲೆ ಹೊತ್ತಿಸಿ ಅಡುಗೆ ಮಾಡುವ ಮೂಲಕ ಕಾಂಗ್ರೆಸ್ ಕಾರ್ಯಕರ್ತಯರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಕುರಿತು ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ರಸ್ತೆಯಲ್ಲೇ ಅಡುಗೆ ಸಿದ್ಧಪಡಿಸಿ ಉಣಬಡಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ತಯಾರಿಸಿದ ಆಹಾರವನ್ನು ಅಲ್ಲಿಯೇ ಇದ್ದ ಬಡವರಿಗೆ ಹಾಗೂ ಹಸಿದವರಿಗೆ ನೀಡುವ ಮೂಲಕ ಮಾನವೀಯತೆ ಮೆರೆದರು. ಪ್ರತಿಭಟನೆಯ ಭಾಗವಾಗಿ 3-4 ಕಡೆ ಒಲೆ ಹೊತ್ತಿಸಿ ರೈಸ್ ಬಾತ್, ಅನ್ನ-ಸಾಂಬಾರ್, ಇತರೆ ಆಹಾರ ಸಿದ್ಧಪಡಿಸಿದ್ದರು.

ರಸ್ತೆಯಲ್ಲೇ ಅಡುಗೆ ತಯಾರಿಸಿ ಕಾಂಗ್ರೆಸ್ ಪ್ರತಿಭಟನೆ

ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದಿನಗೂಲಿ ಹಾಗೂ ಸಾರ್ವಜನಿಕರು ಜೀವನ ನಡೆಸುವುದು ಕಷ್ಟಕರವಾಗಿದೆ. ಮನೆ ಮನೆಗೆ ತೆರಳಿ ಕೆಲಸ ಮಾಡಿ ಜೀವನ ಸಾಗಿಸುವವರು ಇದ್ದಾರೆ. ಇಂಥವರು ಇಂದು ತಾವು ಬೀದಿಯಲ್ಲಿ ಕುಳಿತು ಊಟ ಮಾಡುವ ಸ್ಥಿತಿಯನ್ನು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ತಂದಿದ್ದಾರೆ ಎಂದು ಪ್ರತಿಭಟನಾನಿರತರು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ:ಡಿವೈಡರ್​​ಗೆ ಮರಳು ತುಂಬಿದ ಟ್ರಕ್ ಡಿಕ್ಕಿ: ಬೆಂಗಳೂರು-ಹೆಬ್ಬಾಳ ಮಾರ್ಗದಲ್ಲಿ ಟ್ರಾಫಿಕ್ ಜಾಮ್

ABOUT THE AUTHOR

...view details