ಕರ್ನಾಟಕ

karnataka

ಅಗ್ನಿಶಾಮಕ‌ ಇಲಾಖೆ ಸಿಬ್ಬಂದಿಗೂ ವಕ್ಕರಿಸಿದ ಕೊರೊನಾ ಸೋಂಕು

By

Published : Jun 21, 2020, 7:07 PM IST

ಬೆಂಗಳೂರಿನ ಅಗ್ನಿಶಾಮಕ ದಳದ ನಿಯಂತ್ರಣ ಕೇಂದ್ರದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಇಂದು ಸೋಂಕು ತಗುಲಿರುವುದು ದೃಢಪಟ್ಟಿದೆ.

Coronavirus
ಕೊರೊನಾ ಸೋಂಕು

ಬೆಂಗಳೂರು: ಉದ್ಯಾನ ನಗರಿಯಲ್ಲಿ ಎತ್ತ ನೋಡಿದರೂ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಇಷ್ಟು ದಿನ ಪೊಲೀಸ್, ಬಿಎಂಟಿಸಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗೆ ಶಾಕ್ ಕೊಟ್ಟಿದ್ದ ಕೊರೊನಾ ಈಗ ಅಗ್ನಿಶಾಮಕ ದಳದ ಸಿಬ್ಬಂದಿಗೂ ತಗುಲಿದೆ.

ಬೆಂಗಳೂರಿನ ಅಗ್ನಿಶಾಮಕ ದಳದ ನಿಯಂತ್ರಣ ಕೇಂದ್ರದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಇಂದು ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಅವರ ಜತೆ ಸಂಪರ್ಕ ಹೊಂದಿದ್ದ ಇತರೆ ಸಿಬ್ಬಂದಿಗೆ ಕ್ವಾಟ್ರಸ್​‌ನಲ್ಲೇ ಕ್ವಾರಂಟೈನ್ ಮಾಡಲು ಅಗ್ನಿಶಾಮಕ ಇಲಾಖೆ ಎಡಿಜಿಪಿ ಸುನೀಲ್ ಅಗರವಾಲ್ ಸೂಚನೆ ನೀಡಿದ್ದಾರೆ.

ಕೊರೊನಾ ಸೋಂಕು ತಗುಲಿರುವ ಅಗ್ನಿಶಾಮಕ ನಿಯಂತ್ರಣ ಕೇಂದ್ರಕ್ಕೆ ಸ್ಯಾನಿಟೈಸ್ ಮಾಡಲಾಗಿದೆ. ಆದರೆ, ಸೀಲ್‌ಡೌನ್ ಮಾಡಿಲ್ಲ. ಈಗ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಕ್ವಾರಂಟೈನ್‌ನಲ್ಲಿ ಉಳಿಯುವಂತೆ ಸೂಚಿಸಲಾಗಿದೆ. ಅವರ ಜಾಗಕ್ಕೆ ಬೇರೆ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಅಗರ್​ವಾಲ್​ ತಿಳಿಸಿದ್ದಾರೆ.

ABOUT THE AUTHOR

...view details