ಕರ್ನಾಟಕ

karnataka

ಕೊರೊನಾ ಎಫೆಕ್ಟ್ : ಸಾರ್ವಜನಿಕ ಭೇಟಿ ಮುಂದೂಡಿದ ಡಿಕೆಶಿ

By

Published : Mar 21, 2020, 4:17 PM IST

ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಸದ್ಯದ ಮಟ್ಟಿಗೆ ಸಾರ್ವಜನಿಕ ಭೇಟಿಯನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿ. ಕೆ. ಶಿವಕುಮಾರ್​ ತಿಳಿಸಿದ್ದಾರೆ. ​

D.K Shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು : ಮಾರಣಾಂತಿಕ ಕೊರೊನಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಬಂದು ಹೋಗುವವರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಭೇಟಿಯನ್ನು ಕೆಲವು ದಿನಗಳ ಕಾಲ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆ ತಿಳಿವಳಿಕೆ ಪ್ರಕಾರ ಕೊರೊನಾ ಕಾಯಿಲೆಯು ದೈಹಿಕ ಸ್ಪರ್ಶ ಹಾಗೂ ಪರಸ್ಪರ ಉಸಿರಾಟದ ಸೋಂಕಿನಿಂದ ಅತಿ ವೇಗವಾಗಿ ಹರಡುತ್ತಿದೆ. ಕೇಂದ್ರ ಹಾಗೂ ರಾಜ್ಯದ ಆಡಳಿತ ರೂಢ ಸರ್ಕಾರಗಳು ಈ ಕುರಿತು ಕೆಲವು ಸೂಚನೆಗಳನ್ನು ನೀಡಿವೆ. ಈ ಎಲ್ಲದರ ಹಿನ್ನೆಲೆಯಲ್ಲಿ ತಮ್ಮ ಸದಾಶಿವನಗರ ನಿವಾಸದಲ್ಲಾಗಲಿ ಅಥವಾ ಕೆಪಿಸಿಸಿ ಕಚೇರಿಯಲ್ಲಾಗಲಿ ಸಾರ್ವಜನಿಕರು ಹಾಗೂ ಕಾರ್ಯಕರ್ತರ ಭೇಟಿಯನ್ನು ಮುಂದೂಡಿರುವುದಾಗಿ ಅವರು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಪಕ್ಷ ಸಂಘಟನೆ ಸಂಬಂಧ ಮಾಜಿ ಸಚಿವರು, ಶಾಸಕರು ಹಾಗೂ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಜೊತೆ ಮಾತುಕತೆ ನಡೆಸಬೇಕಾಗಿದೆ, ಕೊರೊನಾ ನಿಯಂತ್ರಣಕ್ಕೆ ಬಂದ ನಂತರ ಕರೆಸಿ ಮಾತಮಾಡುತ್ತೇನೆ. ಮುಂದಿನ ದಿನಗಳಲ್ಲಿ ಜಿಲ್ಲಾ ಪ್ರವಾಸ ಮಾಡುತ್ತೇನೆ, ಇದು ನನ್ನ ಕರ್ತವ್ಯವೂ ಆಗಿದೆ. ಕೊರೊನಾ ಪರಿಸ್ಥಿತಿ ನೋಡಿಕೊಂಡರು ಹೈಕಮಾಂಡ್ ನಾಯಕರನ್ನು ಕೂಡ ಭೇಟಿ ಮಾಡುತ್ತೇನೆ ಎಂದರು.

ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದ ನಂತರ ಭೇಟಿ ಕಾರ್ಯಕ್ರಮ ಮುಂದುವರಿಯುತ್ತದೆ. ಸಾರ್ವಜನಿಕರ ಹಿತದೃಷ್ಟಿಯಿಂದ ತಾವು ತೆಗೆದುಕೊಂಡಿರುವ ಈ ಕ್ರಮವನ್ನು ಯಾರೂ ತಪ್ಪಾಗಿ ಭಾವಿಸಬಾರದು ಎಂದು ಡಿಕೆಶಿ ಮನವಿ ಮಾಡಿದರು.

ABOUT THE AUTHOR

...view details