ಕರ್ನಾಟಕ

karnataka

ಪಕ್ಷ ಹೇಳಿದ ಕೆಲಸ ಮಾಡಬೇಕಾಗುತ್ತದೆ, ನಮ್ಮ ಮುಂದೆ ಬೇರೆ ಆಯ್ಕೆಗಳಿಲ್ಲ: ಡಿಸಿಎಂ ಡಿಕೆಶಿ

By ETV Bharat Karnataka Team

Published : Dec 1, 2023, 3:52 PM IST

Updated : Dec 1, 2023, 4:54 PM IST

DK Shivakumar reaction on Exit Polls: ಚುನಾವಣೋತ್ತರ ಸಮೀಕ್ಷೆಯಲ್ಲಿ ತೆಗೆದುಕೊಳ್ಳುವ ಮಾದರಿಗಳು ಅಲ್ಪ ಪ್ರಮಾಣದ್ದಾಗಿರುತ್ತದೆ. ಅದು ಇಡೀ ರಾಜ್ಯದ ಚಿತ್ರಣವನ್ನು ನಿರ್ಧರಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

dcm-dk-shivakumar-reacts-on-five-state-election-results
ಪಕ್ಷ ಹೇಳಿದ ಕೆಲಸ ಮಾಡಬೇಕಾಗುತ್ತದೆ, ನಮ್ಮ ಮುಂದೆ ಬೇರೆ ಆಯ್ಕೆಗಳಿಲ್ಲ: ಡಿಸಿಎಂ ಡಿಕೆಶಿ

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಬೆಂಗಳೂರು: ಪಕ್ಷ ಹೇಳಿದ ಕೆಲಸ ಮಾಡಬೇಕಾಗುತ್ತದೆ. ನಮ್ಮ ಮುಂದೆ ಬೇರೆ ಆಯ್ಕೆಗಳಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು ಪಂಚರಾಜ್ಯ ಚುನಾವಣೆ ಫಲಿತಾಂಶದ ಕುರಿತಂತೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.

ಕೆಲ ರಾಜ್ಯಗಳಲ್ಲಿ ನೇರ ಹಣಾಹಣಿ ಇದ್ದು, ಆ ರಾಜ್ಯಗಳ ಶಾಸಕರನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, ಈ ಬಗ್ಗೆ ಗೊತ್ತಿಲ್ಲ. ರಾಜಸ್ಥಾನ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ನಾನು ಪಕ್ಷ ಹೇಳಿದ ಕೆಲಸ ಮಾಡಬೇಕಾಗುತ್ತದೆ. ನಮ್ಮ ಮುಂದೆ ಬೇರೆ ಆಯ್ಕೆಗಳಿಲ್ಲ ಎಂದು ತಿಳಿಸಿದರು.

ಎಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ಶಾಸಕರು ಎಲ್ಲೂ ಹೋಗುವುದಿಲ್ಲ. ಅವರನ್ನು ರಕ್ಷಣೆ ಮಾಡುವ ಅಗತ್ಯವಿಲ್ಲ. ಆ ಬಗ್ಗೆ ನನಗೆ ಇದುವರೆಗೂ ಯಾವುದೇ ಜವಾಬ್ದಾರಿ ನೀಡಿಲ್ಲ. ತೆಲಂಗಾಣ ಸೇರಿದಂತೆ ಕೆಲವು ಕಡೆ ಬೇರೆ ಪಕ್ಷದವರು ನಮ್ಮ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ನಮ್ಮ ಪಕ್ಷದವರು ಸ್ಥಳೀಯ ಮಟ್ಟದಲ್ಲೇ ಇದನ್ನು ನಿಭಾಯಿಸುತ್ತಾರೆ ಎಂದು ಹೇಳಿದರು.

ನನಗೆ ನನ್ನದೇ ಆದ ಅಭಿಪ್ರಾಯವಿದೆ. ಮತಯಂತ್ರದಲ್ಲಿರುವ ಮತದ ಮಾಹಿತಿ ನಿಮಗೂ ಗೊತ್ತಿಲ್ಲ, ನಮಗೂ ಗೊತ್ತಿಲ್ಲ. 48 ತಾಸುಗಳ ನಂತರ ಎಲ್ಲವೂ ಹೊರಬೀಳಲಿದೆ. ಈ ಸಮೀಕ್ಷೆಗಳು ಸುಮಾರು 10 ಸಾವಿರ ಮತದಾರರನ್ನು ಸಂಪರ್ಕಿಸಿ ಸಮೀಕ್ಷೆ ಮಾಡಲಾಗಿದೆ. ನಾವು ನಮ್ಮ ರಾಜ್ಯದಲ್ಲಿ ಪ್ರತಿ ಕ್ಷೇತ್ರದಲ್ಲಿ ಟಿಕೆಟ್ ನೀಡುವಾಗ 1 ಲಕ್ಷದಷ್ಟು ಜನರನ್ನು ಸಮೀಕ್ಷೆ ಮಾಡಿದ್ದೆವು. ತೆಲಂಗಾಣದಲ್ಲಿ ನಾನು 20 ಕ್ಷೇತ್ರ ಓಡಾಡಿದ್ದೇನೆ. ಬೇರೆ ಕ್ಷೇತ್ರಗಳಲ್ಲೂ ವರದಿ ಬಹಳ ಉತ್ತಮವಾಗಿದೆ ಎಂದರು.

ನಾರಾಯಣಮೂರ್ತಿ ಹೇಳಿಕೆಗೆ ಪ್ರತಿಕ್ರಿಯೆ:ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರು ಉಚಿತ ಕೊಡುಗೆಗಳನ್ನು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, ''ನಾರಾಯಣ ಮೂರ್ತಿ ಅವರ ಸಲಹೆ ಜನರ ಅಭಿವೃದ್ಧಿಯ ಭಾಗವಾಗಿದೆ. ಅಂತಿಮವಾಗಿ ಸರ್ಕಾರದ ನಿರ್ಧಾರ ಅಂತಿಮ. ಸರ್ಕಾರ ರೈತರು, ಬಡವರಿಗೆ ನೆರವಾಗಬೇಕು. ಬೆಲೆ ಏರಿಕೆ ಸಮಸ್ಯೆಯನ್ನು ಜನಸಾಮಾನ್ಯರು ಹೇಗೆ ಎದುರಿಸಬೇಕು. 70 ರೂ. ಇದ್ದ ಪೆಟ್ರೋಲ್ ಬೆಲೆ 110 ರೂ. ಆಗಿದೆ ಇಂತಹ ಸಮಸ್ಯೆಗಳನ್ನು ಹೇಗೆ ನಿವಾರಣೆ ಮಾಡಬೇಕು ಎಂದು ಡಿಕೆಶಿ ಪ್ರಶ್ನಿಸಿದರು.

ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಅಧ್ಯಕ್ಷರ ಹೊರತಾಗಿ ವೈಯಕ್ತಿಕವಾಗಿ ನನಗೆ ಎಕ್ಸಿಟ್ ಪೋಲ್​ಗಳ ಮೇಲೆ ನಂಬಿಕೆ ಇಲ್ಲ. ನಮ್ಮ ರಾಜ್ಯದಲ್ಲಿ ನಾನು ಏನು ಮಾಡಿದ್ದೆ, ಯಾವ ರೀತಿ ಎಕ್ಸಿಟ್ ಪೋಲ್​ಗಳು ಬಂದವು ಎಂಬುದು ನನಗೆ ಗೊತ್ತಿದೆ. ಯಾರು ಕ್ಷೇತ್ರಗಳಲ್ಲಿ ಸುತ್ತಾಡಿರುತ್ತಾರೋ ಅವರಿಗೆ ಮಾತ್ರ ವಾಸ್ತವಾಂಶ ತಿಳಿದಿರುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ:ತೆಲಂಗಾಣ ಚುನಾವಣೋತ್ತರ ಸಮೀಕ್ಷೆ: 'ಕೈ' ಗೆ ಸಿಹಿ​, ಬಿಆರ್​ಎಸ್​ ಹ್ಯಾಟ್ರಿಕ್​ ಕನಸಿಗೆ ಹಿನ್ನಡೆ, ಬಿಜೆಪಿಗೆ ಎಷ್ಟು ಸ್ಥಾನ?

Last Updated : Dec 1, 2023, 4:54 PM IST

ABOUT THE AUTHOR

...view details