ಕರ್ನಾಟಕ

karnataka

ಬಸವಕಲ್ಯಾಣ ಟಿಕೆಟ್ ಆಕಾಂಕ್ಷಿಗಳು, ಮುಖಂಡರೊಂದಿಗೆ ಡಿಸಿಎಂ ಸವದಿ ಸಭೆ

By

Published : Feb 24, 2021, 5:31 PM IST

Updated : Feb 24, 2021, 6:37 PM IST

ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಭಾರೀ ಬಹುಮತದಿಂದ ಗೆಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಆದ್ದರಿಂದ ಯಾವುದೇ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಳ್ಳದೇ ಪಕ್ಷದ ಹಿತದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡುವಂತೆ ಸವದಿ ಸ್ಥಳೀಯ ಮುಖಂಡರಿಗೆ ಕರೆಕೊಟ್ಟರು.

DCM Savadi meeting with Basavakalana ticket aspirants
ಡಿಸಿಎಂ ಸವದಿ ಸಭೆ

ಬೆಂಗಳೂರು:ಬಸವಕಲ್ಯಾಣವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಹಿನ್ನೆಲೆ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆ ಗರಿಗೆದರಿವೆ. ಕ್ಷೇತ್ರದ ಚುನಾವಣಾ ಉಸ್ತುವಾರಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳ ಮತ್ತು ಬಿಜೆಪಿ ಮುಖಂಡರ ಸಭೆ ನಡೆಯಿತು.

ಬಿಜೆಪಿ ಟಿಕೆಟ್ ಬಯಸಿದ 18ಕ್ಕೂ ಹೆಚ್ಚಿನ ಆಕಾಂಕ್ಷಿಗಳು ಸಭೆಯಲ್ಲಿ ಭಾಗವಹಿಸಿ ಅಭಿಪ್ರಾಯ ಹಂಚಿಕೊಂಡರು. ಈ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಕುರಿತು ರಣತಂತ್ರವನ್ನು ರೂಪಿಸಲಾಯಿತು.

ಉಪ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಹಲವಾರು ಮುಖಂಡರು ಟಿಕೆಟ್‍ಗೆ ಮನವಿ ಮಾಡಿಕೊಂಡಿರುವುದು ಸಹಜ. ಆದರೆ ಈ ಎಲ್ಲಾ ಆಕಾಂಕ್ಷಿಗಳ ವಿವರಗಳನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು ಮತ್ತು ಅಂತಿಮ ತೀರ್ಮಾನವನ್ನು ಪಕ್ಷದ ವರಿಷ್ಠರೇ ಕೈಗೊಳ್ಳುತ್ತಾರೆ. ಅವರು ಯಾವುದೇ ತೀರ್ಮಾನ ಕೈಗೊಂಡರೂ ಸಹ ಎಲ್ಲರೂ ಸಹಮತದಿಂದ ಮತ್ತು ಒಗ್ಗಟ್ಟಿನಿಂದ ವರಿಷ್ಠರು ಸೂಚಿಸುವ ಅಭ್ಯರ್ಥಿಯ ಗೆಲುವಿಗೆ ಸಮರೋಪಾದಿಯಲ್ಲಿ ಶ್ರಮಿಸುವುದು ಅಗತ್ಯ ಎಂದು ಲಕ್ಷ್ಮಣ ಸವದಿ ಸಭೆಯಲ್ಲಿ ತಿಳಿಸಿದರು.

ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಭಾರೀ ಬಹುಮತದಿಂದ ಗೆಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಆದ್ದರಿಂದ ಯಾವುದೇ ಭಿನ್ನಾಭಿಪ್ರಾಯಗಳನ್ನು ಇಟ್ಟುಕೊಳ್ಳದೇ ಪಕ್ಷದ ಹಿತದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡುವಂತೆ ಸವದಿ ಸ್ಥಳೀಯ ಮುಖಂಡರಿಗೆ ಕರೆಕೊಟ್ಟರು.

ಈ ಚುನಾವಣೆಯಲ್ಲಿ ಮತದಾರರ ಮನ ಮತ್ತು ಮನೆಯನ್ನು ತಲುಪುವಲ್ಲಿ ಬಿಜೆಪಿ ಕಾರ್ಯಕರ್ತರು ಮುಂದಿರಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಸ್ಥಳೀಯರಿಗೆ ಮನದಟ್ಟು ಮಾಡಿಕೊಡಬೇಕು ಎಂದರು.

ಬೆಂಗಳೂರಿನ ಸವದಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಪ್ರಭು ಚೌವ್ಹಾಣ್, ವಿ. ಸೋಮಣ್ಣ, ಬೀದರ್ ಕ್ಷೇತ್ರದ ಸಂಸದ ಭಗವಂತ ಖೂಬಾ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ್, ವಿಭಾಗ ಸಹ ಪ್ರಭಾರಿ ಈಶ್ವರ ಸಿಂಗ್ ಠಾಕೂರ್, ಮಾಜಿ ಶಾಸಕ ಅಮರನಾಥ ಪಾಟೀಲ, ಬಿಜೆಪಿ ಬೀದರ ಜಿಲ್ಯಾಧ್ಯಕ್ಷ ಶಿವಾನಂದ ಮಂಟಾಲ್ಕರ್ ಹಾಗೂ ಜಿಲ್ಲೆಯ ಇತರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ:ಬಸವಕಲ್ಯಾಣದಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಹೋಟೆಲ್ ಮತ್ತು ಟಯರ್ ಅಂಗಡಿ

Last Updated : Feb 24, 2021, 6:37 PM IST

ABOUT THE AUTHOR

...view details