ಕರ್ನಾಟಕ

karnataka

ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೇ ಸಾವು : ತಲಾ 15 ಲಕ್ಷ ಪರಿಹಾರ ಕೋರಿ ಹೈಕೋರ್ಟ್​​ಗೆ ಅರ್ಜಿ

By

Published : May 7, 2021, 11:03 PM IST

ಚಾಮರಾಜನಗರದ ವಕೀಲ ಕೆ.ಎಂ.ಶ್ರೀನಿವಾಸಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಸರ್ಕಾರದಿಂದ ನೇಮಿಸಿರುವ ಅಧಿಕಾರಿ ಅಥವಾ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ನಿಯೋಜಿಸಿರುವ ಸಮಿತಿಯಿಂದ ಪ್ರಾಥಮಿಕ ತನಿಖಾ ವರದಿ ಬಂದ ನಂತರ ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆ್ಯಕ್ಸಿಜನ್ ಲಭ್ಯವಾಗದೇ 24 ರೋಗಿಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಮೃತರ ಕುಟಂಬಗಳಿಗೆ ತಲಾ 15 ಲಕ್ಷ ರೂ.ಪರಿಹಾರ ನೀಡುವಂತೆ ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಚಾಮರಾಜನಗರದ ವಕೀಲ ಕೆ.ಎಂ.ಶ್ರೀನಿವಾಸಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಸರ್ಕಾರದಿಂದ ನೇಮಿಸಿರುವ ಅಧಿಕಾರಿ ಅಥವಾ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ನಿಯೋಜಿಸಿರುವ ಸಮಿತಿಯಿಂದ ಪ್ರಾಥಮಿಕ ತನಿಖಾ ವರದಿ ಬಂದ ನಂತರ ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿದೆ.

ಇದೇ ವೇಳೆ ಸಾವನ್ನಪ್ಪಿದ ಎಲ್ಲ ಕೋವಿಡ್ ಸೋಂಕಿತರ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂಬ ಕೋರಿಕೆಯನ್ನು ಈ ಹಂತದಲ್ಲಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಅರ್ಜಿದಾರರ ಕೋರಿಕೆ : ಅರ್ಜಿದಾರರು, ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವ ಎಲ್ಲರ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಬೇಕು, ಆಕ್ಸಿಜನ್ ಲಭ್ಯವಾಗದೇ ಸಾವನ್ನಪ್ಪಿರುವ ಕುರಿತು ಖಚಿತಪಡಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಮೃತರ ಕುಟುಂಬಗಳಿಗೆ ತಲಾ 15ಲಕ್ಷ ಪರಿಹಾರ ಕೊಡಿಸಬೇಕು ಎಂದು ಕೋರಿದ್ದಾರೆ.

ABOUT THE AUTHOR

...view details