ಕರ್ನಾಟಕ

karnataka

ಕಾರ್ಮಿಕರಿಗೆ ಉಚಿತ ಸಂಚಾರ ಕಲ್ಪಿಸಿದ ಸಿಎಂಗೆ ಅಭಿನಂದನೆ ಸಲ್ಲಿಸಿದ ಡಿಕೆಶಿ

By

Published : May 22, 2020, 6:22 PM IST

ಶ್ರಮಿಕ ರೈಲಲ್ಲಿ ಕಾರ್ಮಿಕರ ಉಚಿತ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

DK Shivakumar tweet about CM BSY decision
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಶ್ರಮಿಕ್ ವಿಶೇಷ ರೈಲಿನಲ್ಲಿ ಪ್ರಯಾಣಿಸುವ ಕಾರ್ಮಿಕರ ಸಂಚಾರ ಭತ್ಯೆ ಭರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಶ್ರಮಿಕ್ ರೈಲಿನ ಟಿಕೆಟ್ ದರವನ್ನು ಸರ್ಕಾರವೇ ಭರಿಸಲಿದೆ: ಸಿಎಂ ಯಡಿಯೂರಪ್ಪ

ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಶ್ರಮಿಕ್ ರೈಲುಗಳ ಮೂಲಕ ತಮ್ಮ ತಮ್ಮ ಊರಿಗೆ ಮರಳುತ್ತಿರುವ ವಲಸೆ ಕಾರ್ಮಿಕರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಕ್ಕೆ ಧನ್ಯವಾದಗಳು. ಕಾಂಗ್ರೆಸ್​ ಪಕ್ಷದ ಬೇಡಿಕೆಗೆ ಸ್ಪಂದಿಸಿದಕ್ಕೆ ಡಿಕೆಶಿ ಅಭಿನಂದಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಟ್ವಿಟ್​

ತಮ್ಮೂರಿಗೆ ತೆರಳುವ ಕಾರ್ಮಿಕರನ್ನು ಉಚಿತವಾಗಿ ಅವರ ತವರಿಗೆ ಕಳಿಸಿಕೊಡಬೇಕೆಂದು ನಿರಂತರವಾಗಿ ಡಿಕೆಶಿ ಆಗ್ರಹಿಸುತ್ತಾ ಬಂದಿದ್ದರು. ಈ ನಿಟ್ಟಿನಲ್ಲಿ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತೆರಳಿ ಪ್ರತಿಭಟನೆ ಕೂಡ ನಡೆಸಿದ್ದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)

ಸಿಎಂ ಭೇಟಿ ಮಾಡಿ ಮನವಿ ಕೂಡ ಮಾಡಿಕೊಂಡಿದ್ದರು. ಕಾರ್ಮಿಕರ ಉಚಿತ ಸಂಚಾರಕ್ಕೆ ಅವಕಾಶವಾಗಲಿ ಎಂಬ ಕಾರಣಕ್ಕೆ ಸರ್ಕಾರಕ್ಕೆ ಒಂದು ಕೋಟಿ ರೂ. ನೀಡಲು ಮುಂದಾಗಿದ್ದರು. ಇದೀಗ ರಾಜ್ಯ ಸರ್ಕಾರ ಶ್ರಮಿಕ ರೈಲು ಮೂಲಕ ತೆರಳುವ ಕಾರ್ಮಿಕರ ಉಚಿತ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಕ್ಕೆ ಡಿಕೆಶಿ ಅಭಿನಂದನೆ ಸಲ್ಲಿಸಿದ್ದಾರೆ.

ABOUT THE AUTHOR

...view details