ಕರ್ನಾಟಕ

karnataka

ನಿವೃತ್ತಿ ಹೊಂದಿದ ಹೈಕೋರ್ಟ್ ನ್ಯಾ. ಬಿ.ಎ. ಪಾಟೀಲ್​​​​​ಗೆ ಬೀಳ್ಕೊಡುಗೆ

By

Published : Jan 20, 2021, 6:27 AM IST

ಹೈಕೋರ್ಟ್​​ನ ವಕೀಲರ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನ್ಯಾ. ಪಾಟೀಲರಿಗೆ ಸನ್ಮಾನಿಸಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಬೀಳ್ಕೊಟ್ಟರು.

farewell to retired high count judge B A Patil
ನಿವೃತ್ತಿ ಹೊಂದಿದ ಹೈಕೋರ್ಟ್ ನ್ಯಾ. ಬಿ.ಎ. ಪಾಟೀಲ್ ಅವರಿಗೆ ಬೀಳ್ಕೊಡುಗೆ

ಬೆಂಗಳೂರು: ಕಳೆದ ನಾಲ್ಕು ವರ್ಷಗಳ ಕಾಲ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಪಡೆದ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಅವರನ್ನು ನಿನ್ನೆ ಆತ್ಮೀಯವಾಗಿ ಬೀಳ್ಕೊಡಲಾಯಿತು.

ಹೈಕೋರ್ಟ್​​ನ ವಕೀಲರ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಬೆಂಗಳೂರು ವಕೀಲರ ಸಂಘದ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನ್ಯಾ. ಪಾಟೀಲರಿಗೆ ಸನ್ಮಾನಿಸಿ, ಸ್ಮರಣಿಕೆ ನೀಡಿ ಆತ್ಮೀಯವಾಗಿ ಬೀಳ್ಕೊಟ್ಟರು.

ಹಿನ್ನೆಲೆ:ನ್ಯಾ. ಬಿ.ಎ. ಪಾಟೀಲ್ 1983ರಲ್ಲಿ ಧಾರವಾಡ ಕಾನೂನು ವಿಶ್ವ ವಿದ್ಯಾಲಯದಿಂದ ಕಾನೂನು ಪದವಿ ಪಡೆದು, ವಕೀಲಿ ವೃತ್ತಿ ಆರಂಭಿಸಿದ್ದರು. 2002ರಲ್ಲಿ ನೇರವಾಗಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡಿದ್ದ ಇವರು 2016ರ ನ. 14ರಿಂದ ಹೈಕೋರ್ಟ್ ನ್ಯಾಯಾಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಈ ಸುದ್ದಿಯನ್ನೂ ಓದಿ:ಕೃಷಿ ಕಾಯ್ದೆ ಖಂಡಿಸಿ, ಕಾಂಗ್ರೆಸ್​ನಿಂದ ಇಂದು ರಾಜಭವನ ಚಲೋ!

ಶುಭ ಹಾರೈಕೆ:

ನ್ಯಾ. ಬಿ.ಎ. ಪಾಟೀಲ್ ಅವರ ನಿವೃತ್ತಿ ಜೀವನಕ್ಕೆ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಶ್ರೀನಿವಾಸ ಬಾಬು, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ. ರಂಗನಾಥ್, ಪ್ರಧಾನ ಕಾರ್ಯದರ್ಶಿ ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ ಸೇರಿದಂತೆ ಹಲವು ಗಣ್ಯರು ಶುಭಹಾರೈಸಿದರು.

ABOUT THE AUTHOR

...view details