ಕರ್ನಾಟಕ

karnataka

ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲದ ಕಾಂಗ್ರೆಸ್, ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ವರ್ತಿಸಿದೆ : ಹೆಚ್​ಡಿಕೆ ಟೀಕೆ

By

Published : Jul 19, 2023, 10:22 PM IST

ಅಸಂವಿಧಾನಿಕ ನಡೆ ಪ್ರಶ್ನಿಸಿದ ಪ್ರತಿಪಕ್ಷ ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

former-cm-kumaraswamy-reaction-on-congress-government
ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲದ ಕಾಂಗ್ರೆಸ್, ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ವರ್ತಿಸಿದೆ : ಹೆಚ್​ಡಿಕೆ ಟೀಕೆ

ಬೆಂಗಳೂರು:ಜಿಲ್ಲೆಯಲ್ಲಿ ಮಳೆಯ ಅಬ್ಬರ ಒಂದು ದಿನದ ಹಿಂದೆ ಇಂಡಿಯಾ ಎಂದು ಬೆಂಗಳೂರಿನಲ್ಲಿ ಜಪ ಮಾಡಿದ್ದ ಕಾಂಗ್ರೆಸ್, 24 ಗಂಟೆ ಒಳಗಾಗಿ ಇದೇ ನಗರದಲ್ಲಿ ಇಂಡಿಯಾ ಎನ್ನುವ ಇಡಿಯಾದ ಆದರ್ಶ ಪರಿಕಲ್ಪನೆಗೆ ಎಳ್ಳುನೀರು ಬಿಟ್ಟಿದೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲದ ಕಾಂಗ್ರೆಸ್, ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎನ್ನುವಂತೆ ವರ್ತಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಪಂಚತಾರಾ ಹೋಟೆಲ್​​ನಲ್ಲಿ ನಡೆದ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳ ಸಭೆಗೆ ಬಂದಿದ್ದ ಶಿಷ್ಟಾಚಾರಕ್ಕೆ ಅರ್ಹರಲ್ಲದ, ಹೊರರಾಜ್ಯಗಳ ರಾಜಕಾರಣಿಗಳಿಗೆ ಚಾಕರಿ ಮಾಡಲು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದ ನಿರ್ಲಜ್ಜ ಕ್ರಮ ಪ್ರಶ್ನಿಸಿದ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಹೇಯ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಕಿಡಿಕಾರಿದರು.

ಈ ಅಸಂವಿಧಾನಿಕ ನಡೆಯನ್ನು ಪ್ರಶ್ನಿಸಿದ ಪ್ರತಿಪಕ್ಷ ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಬರೀ ನಾಲಿಗೆಯ ಮೇಲೆ ಪ್ರಜಾಪ್ರಭುತ್ವ ಉಳಿಸುತ್ತೇನೆ ಎನ್ನುವ ಕಾಂಗ್ರೆಸ್, ತನ್ನದೇ ಹಸ್ತದಿಂದ ಅದೇ ಪ್ರಜಾಪ್ರಭುತ್ವವನ್ನು ಅಡ್ಡಡ್ಡ ಸಿಗಿದು ನಿರ್ನಾಮ ಮಾಡುತ್ತಿದೆ. ಇದೇನಾ ಕರ್ನಾಟಕ ಮಾಡೆಲ್? ಎಂದು ಪ್ರಶ್ನಿಸಿದರು.

ಪ್ರತಿಪಕ್ಷಗಳು ಕೇಳುವ ಪ್ರಶ್ನೆಗಳನ್ನು ಸಮಾಧಾನದಿಂದ ಆಲಿಸಿ, ಉತ್ತರ ನೀಡುವುದು ನಾಗರಿಕ ಸರ್ಕಾರದ ಕರ್ತವ್ಯ. ಆದರೆ, ಅನಾಗರಿಕತೆಯನ್ನೇ ಅರೆದು ಕುಡಿದಷ್ಟು, ಅನಾಗರಿಕತೆಯೇ ನಾಚಿ ನಿಟ್ಟುಸಿರು ಬಿಡುವಷ್ಟು ಹೀನಾಯವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ವರ್ತಿಸಿದೆ ಎಂದು ದೂರಿದರು.
ಶತಮಾನಕ್ಕೂ ಹೆಚ್ಚಿನ ಇತಿಹಾಸ ನನ್ನದು ಎಂದು ಕೊಚ್ಚಿಕೊಳ್ಳುವ ಕಾಂಗ್ರೆಸ್ ಪ್ರಜಾಸತ್ತೆಗೆ ಶಾಪ. ಜನತಂತ್ರದ ಮೇಲೆ ದರ್ಪ ತೋರಿಸಿದ ಆ ಪಕ್ಷಕ್ಕೆ ತಿಳಿದಿರಲಿ. ಇಂಡಿಯಾ ಎಂದರೆ ಇದಲ್ಲವೇ ಅಲ್ಲ, ಇಂಡಿಯಾ ಎಂದರೆ ಪ್ರಜಾಪ್ರಭುತ್ವ. ಇಂಡಿಯಾ ಎಂದರೆ ಇವರಷ್ಟೇ ಅಲ್ಲ, ನಾವೆಲ್ಲರೂ ಎಂದರು.

ಇದನ್ನೂ ಓದಿ:ವಿಧಾನಸೌಧದಲ್ಲಿ ಶಾಸಕ ಯತ್ನಾಳ್ ಅಸ್ವಸ್ಥ: ಆಸ್ಪತ್ರೆಗೆ ದೌಡಾಯಿಸಿದ ಬಿಎಸ್​ವೈ, ಸಿಎಂ, ಸ್ಪೀಕರ್​

ಬಿಜೆಪಿ ಪ್ರತಿಭಟನೆಗೆ ಹೆಚ್​ಡಿಕೆ ಬೆಂಬಲ: ಇನ್ನು ವಿಧಾನಸೌಧದ ಕೆಂಗಲ್ ಗೇಟ್​ನ ಪಶ್ಚಿಮ ದ್ವಾರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಸದಸ್ಯರನ್ನು ಅಮಾನತು ಖಂಡಿಸಿ ಪ್ರತಿಭಟನೆ ನಡೆಸಿದ ಶಾಸಕರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಷ್ಟರಲ್ಲೇ ಸ್ಥಳಕ್ಕೆ ಬಂದ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕರು, ಬಿಜೆಪಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯ ಸರ್ಕಾರ ಸರ್ವಾಧಿಕಾರಿ, ಹಿಟ್ಲರ್ ರೀತಿ ವರ್ತಿಸುತ್ತಿದ್ದು, ಸ್ಪೀಕರ್ ಕುರ್ಚಿಯನ್ನೂ ದುರ್ಬಳಕೆ ಮಾಡಿಕೊಂಡು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇದೊಂದು ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಜಾಪ್ರಭುತ್ವ ಕಗ್ಗೊಲೆ ಆಗಿದೆ. ಸ್ಫೀಕರ್​ ಸ್ಥಾನ ದುರುಪಯೋಗ ಆಗಿದೆ. ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿದ್ದಾರೆ. ನಾವು ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ನಮ್ಮ ಸದಸ್ಯರಿಗೆ ಊಟಕ್ಕೂ ಬಿಡದೇ ಸದನ ನಡೆಸಲು ನಿರ್ಧರಿಸಿದ್ದಾರೆ ಎಂದು ಆರೋಪ ಮಾಡಿದರು.

ABOUT THE AUTHOR

...view details