ಕರ್ನಾಟಕ

karnataka

ನೆರೆ ಹಾನಿ: ಮನೆ ಕಳೆದುಕೊಂಡವರಿಗೆ ಸರ್ಕಾರದಿಂದ ಪರಿಹಾರ ಘೋಷಣೆ

By

Published : Aug 8, 2020, 6:30 PM IST

Updated : Aug 8, 2020, 6:43 PM IST

ಕರ್ನಾಟಕದಲ್ಲಿ ಪ್ರವಾಹಕ್ಕೆ ಹಾನಿಗೊಳಗಾದ ಮನೆಗಳಿಗೆ ಪರಿಹಾರ ಮೊತ್ತ ಕೊಡಲು ಮತ್ತು ದುರಸ್ತಿ ಕಾರ್ಯಕ್ಕೆ ಪರಿಹಾರ ಘೋಷಿಸಿ ಸರ್ಕಾರದಿಂದ ಮಂಜೂರಾತಿ ನೀಡಲಾಗಿದೆ.

Vidhanasoudha
ವಿಧಾನಸೌಧ

ಬೆಂಗಳೂರು:ನೆರೆಗೆ ಹಾನಿಗೊಳಗಾದ ಮನೆಗಳ ದುರಸ್ತಿ ಕಾರ್ಯ, ಮರು ನಿರ್ಮಾಣಕ್ಕೆ ಪರಿಹಾರ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರವಾಹಕ್ಕೆ ಹಾನಿಗೊಳಗಾದ ಮನೆಗಳಿಗೆ ಪರಿಹಾರ ಮೊತ್ತ ಕೊಡಲು ಸರ್ಕಾರದಿಂದ ಮಂಜೂರಾತಿ ನೀಡಲಾಗಿದೆ. ಅದರಂತೆ ಗೃಹೋಪಯೋಗಿ‌ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ 10 ಸಾವಿರ ಪರಿಹಾರ ನೀಡಲು ನಿರ್ಧರಿಸಲಾಗಿದೆ.

ಸರ್ಕಾರದ ಆದೇಶ

ಇನ್ನು ಶೇ.75ಕ್ಕಿಂತ ಹೆಚ್ಚು ಹಾನಿಯಾದ ಮನೆಗಳಿಗೆ 5 ಲಕ್ಷ ರೂ. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದೆ. ಶೇ.25 ರಿಂದ ಶೇ.75ರವರೆಗೆ ಹಾನಿಯಾದ ಮನೆಗಳನ್ನು ಹೊಸದಾಗಿ ಕೆಡವಿ ಕಟ್ಟಲು 5 ಲಕ್ಷ ರೂ. ಪರಿಹಾರ‌ ನೀಡಲು ತೀರ್ಮಾನಿಸಲಾಗಿದೆ.

ಅದೇ ರೀತಿ ಶೇ.25 ರಿಂದ ಶೇ.75 ರಷ್ಟು ಹಾನಿಯಾದ ಮನೆಗಳ ದುರಸ್ತಿಗೆ 3 ಲಕ್ಷ ಹಾಗೂ ಶೇ.15 ರಿಂದ ಶೇ.25ರಷ್ಟು ಅಲ್ಪ ಹಾನಿಯಾದ ಮನೆಗಳ ದುರಸ್ತಿಗೆ 50 ಸಾವಿರ ರೂ. ಪರಿಹಾರ ಕೊಡಲು ನಿರ್ಧರಿಸಲಾಗಿದೆ.

Last Updated : Aug 8, 2020, 6:43 PM IST

ABOUT THE AUTHOR

...view details