ಕರ್ನಾಟಕ

karnataka

ಸಾರಿಗೆ ನೌಕರರ ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಳ ಮಾಡಿ ಸರ್ಕಾರದ ಆದೇಶ

By

Published : Mar 30, 2023, 5:27 PM IST

ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಶೇ.15ರಷ್ಟು ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

government-order-to-increase-the-pay-scale-of-transport-employees
ಸಾರಿಗೆ ನೌಕರರ ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ

ಬೆಂಗಳೂರು:ರಾಜ್ಯ ಸಾರಿಗೆ ನೌಕರರ ವೇತನ ಶ್ರೇಣಿ ಶೇ.15ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಮಾರ್ಚ್​ನಿಂದಲೇ ನೂತನ ವೇತನ ಜಾರಿಗೆ ಬರುವಂತೆ ಆದೇಶಿಸಲಾಗಿದೆ.

ರಾಜ್ಯ ಸಾರಿಗೆಯ ನಾಲ್ಕು ನಿಗಮಗಳ ಸಾರಿಗೆ (ಕೆಎಸ್​ಆರ್​ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ನೌಕರರಿಗೆ ವೇತನ ಹೆಚ್ಚಳವಾಗಿದೆ. ಸಾರಿಗೆ ನೌಕರರು ಮಾರ್ಚ್ 21ರಿಂದ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಮುಷ್ಕರ ನಡೆಸಿದ್ದರು. ಆದರೆ, ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿತ್ತು.

ಸಾರಿಗೆ ಸಚಿವ ಶ್ರೀರಾಮುಲು ಅವರು ಸಾರಿಗೆ ನೌಕರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಸಭೆ ನಡೆಸಿ ಶೇ.8 ರಿಂದ 10ರಷ್ಟು ವೇತನ ಏರಿಕೆ ಮಾಡುವ ಭರವಸೆ ನೀಡಿದ್ದರೂ ನೌಕರರು ಒಪ್ಪಿರಲಿಲ್ಲ. ಕೊನೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಶೇ.15ರಷ್ಟು ಹೆಚ್ಚಿಸುವುದಾಗಿ ಹೇಳಿ ಮನವೊಲಿಸಿದ್ದರು. ಹಾಗಾಗಿ, ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದರು. ಇದೀಗ ಶೇ.15ರಷ್ಟು ಹೆಚ್ಚಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ:ರಾಜ್ಯ ಕಾಂಗ್ರೆಸ್ ನಾಯಕರ ಮನೆ ಮುಂದೆ ಮುಖಂಡರು ಕಾರ್ಯಕರ್ತರ ಹೈಡ್ರಾಮ: ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ABOUT THE AUTHOR

...view details