ಕರ್ನಾಟಕ

karnataka

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ಗೆ ಕೋವಿಡ್ ದೃಢ

By

Published : Oct 1, 2022, 9:38 PM IST

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಸದ್ಯ ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದೆ.

governor-thawar-chand-gehlot-tested-covid-positive
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ಗೆ ಕೋವಿಡ್ ದೃಢ

ಬೆಂಗಳೂರು:ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೋವಿಡ್ ಸೋಂಕು ತಗುಲಿದೆ. ಸ್ವಲ್ಪ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯಪಾಲರು ಕೋವಿಡ್ ಬಗ್ಗೆ ಇಂದು ತಪಾಸಣೆ ನಡೆಸಿದಾಗ ಕೊರೊನಾ ಪಾಸಿಟಿವ್ ಇರುವುದು ಖಚಿತವಾಗಿದೆ.

ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ರಾಜ್ಯಪಾಲರ ವಿಶೇಷ ಕರ್ತವ್ಯಾಧಿಕಾರಿ ಆರ್. ಪ್ರಭುಶಂಕರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಧ್ಯಮ ಪ್ರಕಟಣೆ

ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮುಖ್ಯಮಂತ್ರಿಗಳ ಜೊತೆ ಪಾಲ್ಗೊಂಡಿದ್ದರು. ಅಲ್ಲದೇ, ರಾಷ್ಟ್ರಪತಿಗಳ ರಾಜ್ಯ ಪ್ರವಾಸದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ರಾಜ್ಯಪಾಲರೂ ಕೂಡ ಅವರೊಂದಿಗೆ ಪಾಲ್ಗೊಂಡಿದ್ದರು.

ಇದನ್ನೂ ಓದಿ:ಕಲ್ಕಾ ಸಾಯಿನಗರ ಎಕ್ಸ್‌ಪ್ರೆಸ್‌ನಲ್ಲಿ ಕೊರೊನಾ ಪಾಸಿಟಿವ್ ಮೃತದೇಹ ಪತ್ತೆ

ABOUT THE AUTHOR

...view details