ಕರ್ನಾಟಕ

karnataka

ವಿನಯ್ ಕುಲಕರ್ಣಿ ಧಾರಾವಾಡ ಪ್ರವೇಶಕ್ಕೆ ಅನುಮತಿ ಕೋರಿ ಅರ್ಜಿ: ಸರ್ಕಾರ, ಸಿಬಿಐಗೆ ನೋಟಿಸ್ ನೀಡಿದ ಹೈಕೋರ್ಟ್​​​

By

Published : Apr 20, 2023, 7:40 PM IST

ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಕಾಂಗ್ರೆಸ್​ ಅಭ್ಯರ್ಥಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್​ ನೋಟಿಸ್​ ಜಾರಿ ಮಾಡಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ಹೈಕೋರ್ಟ್
ಹೈಕೋರ್ಟ್

ಬೆಂಗಳೂರು : ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರು 30 ದಿನಗಳ ಕಾಲ ಧಾರವಾಡದಲ್ಲಿರಲು ಅನುಮತಿ ನೀಡುವಂತೆ ಕೋರಿರುವ ಅರ್ಜಿ ಮತ್ತು ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠವು ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದನ್ನೂ ಓದಿ :ವಿನಯ್​ ಕುಲಕರ್ಣಿ ಶಿಗ್ಗಾಂವಿ ಸ್ಪರ್ಧೆ ವಿಚಾರ: ಪತ್ನಿ ಶಿವಲೀಲಾ ಕುಲಕರ್ಣಿ ಹೇಳಿದ್ದೇನು?

ಇದಕ್ಕೆ ಪ್ರತಿಕ್ರಿಯಿಸಿದ ಪೀಠವು (ಧಾರವಾಡ) ಪ್ರವೇಶ ನಿರ್ಬಂಧಿಸಿರುವವರು ಯಾರು? ಎಂದಿತು. ಆಗ ವಕೀಲರು, ಸುಪ್ರೀಂಕೋರ್ಟ್ ಎಂದು ತಿಳಿಸಿದರು. ಇದಕ್ಕೆ ಪೀಠವು ಸುಪ್ರೀಂಕೋರ್ಟ್ ತಾನೆ, ಅಲ್ಲಿಗೆ ಹೋಗಿ. ವಿಚಾರಣಾಧೀನ ನ್ಯಾಯಾಲಯಕ್ಕೆ ಸುಪ್ರೀಂಕೋರ್ಟ್ ಆದೇಶ ಮಾಡಿದೆ. ನಮಗಲ್ಲ (ಹೈಕೋರ್ಟ್). ಈ ಮಧ್ಯೆ, ನಾವೇನೂ ಮಾಡಲಾಗದು. ನೀವುಂಟು, ಸುಪ್ರೀಂ ಕೋರ್ಟ್ ಉಂಟು ಮತ್ತು ವಿಚಾರಣಾಧೀನ ನ್ಯಾಯಾಲಯ ಉಂಟು. ಸುಪ್ರೀಂಕೋರ್ಟ್ ಆದೇಶ ಮಾಡಿರುವುದರಿಂದ ನೀವು ಅಲ್ಲಿಯೇ ಪ್ರಶ್ನಿಸಬೇಕು ಎಂದು ಮೌಖಿಕವಾಗಿ ಹೇಳಿತು. ಅಲ್ಲದೇ, ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತು.

ಇದನ್ನೂ ಓದಿ:ನಾನು ಶಿಗ್ಗಾಂವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಲ್ಲ : ವಿನಯ್​ ಕುಲಕರ್ಣಿ

ಪ್ರಕರಣದ ಹಿನ್ನೆಲೆ ಏನು ? : ಜೆ ಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿನಯ್ ಕುಲಕರ್ಣಿ ಸೇರಿ ಎಂಟು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಮೊದಲ ಆರೋಪಿ ವಿನಯ್ ಕುಲಕರ್ಣಿಯಾಗಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಲಯದ ಅನುಮತಿ ಪಡಯದೇ ಧಾರವಾಡ ಜಿಲ್ಲೆ ಪ್ರವೇಶಿಸುವಂತಿಲ್ಲ ಎಂಬುದು ಸೇರಿ ನಾಲ್ಕು ಷರತ್ತುಗಳನ್ನು ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡುವಾಗ ವೇಳೆ ಸುಪ್ರೀಂ ಕೋರ್ಟ್ ಷರತ್ತುಗಳನ್ನು ವಿಧಿಸಿತ್ತು.

ಇದನ್ನೂ ಓದಿ :ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಕೇಸ್: ವಿನಯ ಕುಲಕರ್ಣಿಗೆ ಸುಪ್ರೀಂನಲ್ಲಿ ಭಾರೀ ಹಿನ್ನಡೆ

ಈಗ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಯಾಗಿರುವುದರಿಂದ ಧಾರವಾಡ ಪ್ರವೇಶಿಸಲು ವಿನಯ್ ಕುಲಕರ್ಣಿ ನ್ಯಾಯಾಲಯದ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಧಾರವಾಡದಲ್ಲಿರಲು 50 ದಿನ ಅನುಮತಿ ಕೋರಿದ್ದ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ತಿರಸ್ಕರಿಸಿತ್ತು. ಹೀಗಾಗಿ, ವಿನಯ್ ಕುಲಕರ್ಣಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ :ಧಾರವಾಡ ಪ್ರವೇಶಿಸದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್ ಆದೇಶ

ABOUT THE AUTHOR

...view details