ಕರ್ನಾಟಕ

karnataka

ಕೇಂದ್ರದಿಂದ ಶಹಬ್ಬಾಸ್​ಗಿರಿ ಪಡೆಯಲು ಕೋವಿಡ್ ಟೆಸ್ಟ್ ಕಡಿಮೆ ಮಾಡಲಾಗಿದೆ: ಹೆಚ್ ಕೆ ಕುಮಾರಸ್ವಾಮಿ ಆರೋಪ

By

Published : May 18, 2021, 9:28 PM IST

ದುಡಿಯುವ ವರ್ಗ ತೀವ್ರ ಸಂಕಷ್ಟಕ್ಕೆ ಒಳಗಾಗಿದೆ. ಕೋವಿಡ್ ಸೋಂಕಿತರಿಗೆ ಸರಿಯಾದ ಚಿಕಿತ್ಸೆಯೂ ದೊರೆಯುತ್ತಿಲ್ಲ. ತೀವ್ರವಾಗಿ ಹರಡುತ್ತಿರುವ ಸೋಂಕು ತಡೆಯಲು ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಹೆಚ್ ಕೆ ಕುಮಾರಸ್ವಾಮಿ
ಹೆಚ್ ಕೆ ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಸರ್ಕಾರವನ್ನು ಮೆಚ್ಚಿಸಲು ಮತ್ತು ಶಹಬ್ಬಾಸ್​ಗಿರಿ ಪಡೆಯಲು ಕೋವಿಡ್ ಟೆಸ್ಟ್ ಕಡಿಮೆ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇತ್ತೀಚಿಗೆ ಕೋವಿಡ್ ಪರೀಕ್ಷೆ ಪ್ರಮಾಣ ಕಡಿಮೆ ಮಾಡಿರುವುದರಿಂದ ಪಾಸಿಟಿವ್ ಸಂಖ್ಯೆಯೂ ಕಡಿಮೆ ಬರುತ್ತಿದೆ. ಪರೀಕ್ಷೆ ಇಲ್ಲದ ಸೋಂಕಿತರು ಜನರ ನಡುವೆ ಓಡಾಡುವುದರಿಂದ ಸೋಂಕು ಹೆಚ್ಚಾಗುವ ಅಪಾಯವಿದೆ. ರಾಜ್ಯ ಸರ್ಕಾರ ಈ ವಿಚಾರವನ್ನು ಲಘುವಾಗಿ ತೆಗೆದುಕೊಳ್ಳದೇ ಗಂಭೀರವಾಗಿ ಪರಿಗಣಿಸಬೇಕು. ಇದುವರೆಗೆ ಆಗಿರುವ ಅನಾಹುತಗಳ ಹೊಣೆ ಹೊರಬೇಕು ಎಂದಿದ್ದಾರೆ.

ಗ್ರಾಮೀಣ ಭಾಗದಲ್ಲೂ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ‌. ಸರ್ಕಾರ ಗ್ರಾಮೀಣ ಭಾಗದಲ್ಲಿ ಸೋಂಕು ಹರಡದಂತೆ ತಡೆಯಬೇಕೆಂದು ಆಗ್ರಹಿಸಿದ್ದಾರೆ.

ಬಡವರಿಗೆ ಪ್ಯಾಕೇಜ್ ಘೋಷಿಸಿ

ಕೋವಿಡ್​​ 2ನೇ ಅಲೆಯ ಲಾಕ್​ಡೌನ್​ನಿಂದ ಸಂಕಷ್ಟಕ್ಕೆ ಒಳಗಾಗಿರುವ ಕೂಲಿ ಕಾರ್ಮಿಕರಿಗೆ, ಬಡವರಿಗೆ ರಾಜ್ಯ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ. ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಎಲ್ಲ ವರ್ಗದವರಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದು ಸರ್ಕಾರದ ಕರ್ತವ್ಯ. ದುಡಿಯುವ ವರ್ಗ ತೀವ್ರ ಸಂಕಷ್ಟಕ್ಕೆ ಒಳಗಾಗಿದೆ. ಕೋವಿಡ್ ಸೋಂಕಿತರಿಗೆ ಸರಿಯಾದ ಚಿಕಿತ್ಸೆಯೂ ದೊರೆಯುತ್ತಿಲ್ಲ. ತೀವ್ರವಾಗಿ ಹರಡುತ್ತಿರುವ ಸೋಂಕು ತಡೆಯಲು ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ABOUT THE AUTHOR

...view details