ಕರ್ನಾಟಕ

karnataka

ಎಸಿಬಿ ರಚನೆ ರದ್ದುಪಡಿಸಿ ಹೈಕೋರ್ಟ್ ಆದೇಶ

By

Published : Aug 11, 2022, 4:27 PM IST

Updated : Aug 11, 2022, 5:05 PM IST

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ನೀಡಿದೆ. ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಸ್ವತಂತ್ರವಾಗಿ ಎಸಿಬಿ ತನಿಖೆ ನಡೆಸುವುದಕ್ಕೆ ನ್ಯಾಯಾಲಯ ಕಡಿವಾಣ ಹಾಕಿದೆ.

Etv Bharathigh-court-canceled-acb
Etv Bharatಭ್ರಷ್ಟಾಚಾರ ನಿಗ್ರಹ ದಳ ರಚನೆ ರದ್ದುಪಡಿಸಿ ಹೈಕೋರ್ಟ್ ಆದೇಶ

ಬೆಂಗಳೂರು:ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚನೆಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ನೀಡಿದೆ. ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಸ್ವತಂತ್ರವಾಗಿ ಎಸಿಬಿ ತನಿಖೆ ನಡೆಸುವುದಕ್ಕೆ ನ್ಯಾಯಾಲಯ ಕಡಿವಾಣ ಹಾಕಿದ್ದು, ಲೋಕಾಯುಕ್ತ ಸಂಸ್ಥೆ ಅಡಿಯಲ್ಲಿಯೇ ಎಸಿಬಿ ಕಾರ್ಯನಿರ್ವಹಿಸಬೇಕೆಂದು ಆದೇಶದಲ್ಲಿ ತಿಳಿಸಿದೆ.

ಎಸಿಬಿ ರಚನೆ ಪ್ರಶ್ನಿಸಿ ಬೆಂಗಳೂರು ವಕೀಲರ ಸಂಘ, ಸಮಾಜ ಪರಿವರ್ತನ ಸಮುದಾಯ ಸೇರಿದಂತೆ ಹಲವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ನ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಭ್ರಷ್ಟಾಚಾರ ನಿಗ್ರಹ ದಳಕ್ಕೆ ರಾಜ್ಯ ಸರ್ಕಾರ ನೀಡಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನೂ ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿಗಳಾದ ಬಿ. ವೀರಪ್ಪ ನೇತೃತ್ವದ ವಿಭಾಗೀಯ ಪೀಠದ ಈ ಆದೇಶ ನೀಡಿದೆ. ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯತೆ ಇದೆ ಎಂದು ಹೇಳಿದೆ.

ಲೋಕಾಯುಕ್ತಕ್ಕೆ ಪೊಲೀಸ್ ಠಾಣೆ ಸ್ಥಾನಮಾನವನ್ನು ನ್ಯಾಯಾಲಯ ಮರುಸ್ಥಾಪಿಸಿದ್ದು, ಎಸಿಬಿಯು ಲೋಕಾಯುಕ್ತ ಸಂಸ್ಥೆಯ ವ್ಯಾಪ್ತಿಯಲ್ಲಿಯೇ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದೆ. ಲೋಕಾಯುಕ್ತರು ಮತ್ತು ಉಪ ಲೋಕಾಯುಕ್ತರನ್ನು ಅರ್ಹತೆ ಮೇಲೆ ನೇಮಕ ಮಾಡಬೇಕು ಜಾತಿ ಆಧರಿಸಿ ನೇನಕಕ್ಕೆ ಪರಿಗಣಿಸಬಾರದೆಂದೂ ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ:ಕೆಎಂಎಫ್ ನೌಕರರಿಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆಅನ್ವಯ: ಹೈಕೋರ್ಟ್

Last Updated : Aug 11, 2022, 5:05 PM IST

ABOUT THE AUTHOR

...view details