ಕರ್ನಾಟಕ

karnataka

Weather Report : ರಾಜ್ಯದಲ್ಲಿ ಈಶಾನ್ಯ ಹಿಂಗಾರು ಚುರುಕು, ಇನ್ನೆರಡು ದಿನ ಮಳೆ ಸಾಧ್ಯತೆ

By

Published : Nov 17, 2021, 8:52 PM IST

ಬಂಗಾಳಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ನಾಳೆಯವರೆಗೂ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ..

karnatka-weather-report
ರಾಜ್ಯ ಹವಾಮಾನ ವರದಿ

ಬೆಂಗಳೂರು :ಈಶಾನ್ಯ ಹಿಂಗಾರು ಮಳೆ ರಾಜ್ಯದಲ್ಲಿ ಚುರುಕಾಗಿದೆ. ನಿನ್ನೆಯಿಂದ ರಾಜ್ಯದ ಹಲವೆಡೆ ಸಾಧಾರಣ ಹಾಗೂ ಕೆಲವೆಡೆ ಭಾರೀ ಮಳೆಯಾದ ವರದಿಯಾಗಿದೆ. ಇನ್ನೂ ಎರಡು ದಿನ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.

ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ (karnataka Weather Report) ಇದೆ. ಮತ್ತೆ ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು-ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ (karnataka Meteorological Department Report) ತಿಳಿಸಿದೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದೆ.

ಚಿತ್ರದುರ್ಗ, ಬೆಳಗಾವಿ, ಹಾವೇರಿ, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗಿದೆ. ಆದರೆ, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾದ ವರದಿಯಾಗಿದೆ.

ಬಂಗಾಳಕೊಲ್ಲಿಯಲ್ಲಿ ಲಘು ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ(Karnataka rain update) ನಾಳೆಯವರೆಗೂ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.

ವಾಡಿಕೆಗಿಂತ ಹೆಚ್ಚು ಹಿಂಗಾರು ಮಳೆ :ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಹಿಂಗಾರು ಚುರುಕಾಗಿರುವುದರಿಂದ ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಮಿಂಚಿನಿಂದ ಕೂಡಿದ ಮಳೆ ಕೆಲವೆಡೆ ಆಗಲಿದೆ. ಈ ಬಾರಿ ಹಿಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗಿದೆ ಎಂದು ಹವಾಮಾನ ಇಲಾಖೆ(Meteorological Department) ಹೇಳಿದೆ.

ರಾಜಧಾನಿಯಲ್ಲಿ ಎರಡು ದಿನ ಬಿಡುವು :ಬೆಂಗಳೂರು(Bengaluru rain update) ಸೇರಿದಂತೆ ರಾಜ್ಯದ ಕೆಲವೆಡೆ ಎರಡು ದಿನಗಳ ಕಾಲ ಜಿಟಿಜಿಟಿ ಮಳೆ ಬಿಡುವು ಕೊಟ್ಟಿತ್ತು.

ಆದರೆ, ನಿನ್ನೆ ಸಂಜೆ ಗುಡುಗು ಮಿಂಚಿನ ಆರ್ಭಟದೊಂದಿಗೆ ಆರಂಭವಾಗಿ ನಿರಂತರವಾಗಿ ಮಳೆಯಾಗಿತ್ತು. ಇಂದು ಬೆಳಗ್ಗೆ ಕೂಡ ತುಂತುರು ಮಳೆಯಾಗಿದೆ. ಮತ್ತೆ ಜಿಟಿಜಿಟಿ ಮಳೆ ಆರಂಭವಾಗಲಿದೆಯೇ ಎಂಬ ಆತಂಕ ಜನರಲ್ಲಿ ಉಂಟಾಗಿತ್ತು.

ಇದನ್ನೂ ಓದಿ:ತಾವು ಕಲಿತ ಸರ್ಕಾರಿ ಶಾಲೆಗೆ ಮಗನನ್ನು ದಾಖಲಿಸಿದ ಕುಷ್ಟಗಿ ಮಾಜಿ ಶಾಸಕ

ABOUT THE AUTHOR

...view details