ಕರ್ನಾಟಕ

karnataka

ಪೆರಿಶಬಲ್ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೊದಲ ಸ್ಥಾನ

By

Published : Oct 8, 2021, 7:25 PM IST

ಕೋಳಿ, ಹೂಗಳ ರಫ್ತಿನಲ್ಲೂ ಕೆಂಪೇಗೌಡ ವಿಮಾನ ನಿಲ್ದಾಣವೇ ಮುಂಚೂಣಿಯಲ್ಲಿದ್ದು, 28,182 ಮೆಟ್ರಿಕ್​ ಟನ್​​​ ಕೋಳಿ ಹಾಗೂ 1,296 ಮೆಟ್ರಿಕ್​​ ಟನ್​ ಹೂವುಗಳನ್ನು ರಫ್ತು ಮಾಡಲಾಗಿದೆ. 24 ವಿಮಾನಯಾನ ಸಂಸ್ಥೆಗಳು 46 ವಿದೇಶಗಳಲ್ಲಿ ಪೆರಿಶಬಲ್ ಉತ್ಪನ್ನಗಳನ್ನು ರಫ್ತು ಮಾಡುತ್ತಿವೆ.

Kempegowda Airport is the first in export of perishable products
ಪೆರಿಷಬಲ್ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೊದಲ ಸ್ಥಾನ

ದೇವನಹಳ್ಳಿ: ಅತಿ ಹೆಚ್ಚು ಪೆರಿಶಬಲ್ ಪದಾರ್ಥಗಳ ಸರಕು ಸಾಗಣೆ ಮಾಡಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.

ಕೃಷಿ ಮತ್ತು ಸಂಸ್ಕರಿಸಿದ ಉತ್ಪನ್ನಗಳ ರಫ್ತು ಅಭಿವೃದ್ಧಿ ಮಂಡಳಿ (ಎಪಿಇಡಿಎ) ಅವರ ಮಾಹಿತಿ ಪ್ರಕಾರ 2020-21ರ ಹಣಕಾಸು ವರ್ಷದಲ್ಲಿ 41,130 ಮೆಟ್ರಿಕ್ ಟನ್‌ನಷ್ಟು ಕಡಿಮೆ ಬಾಳಿಕೆ ಅವಧಿಯ ಹಣ್ಣು, ತರಕಾರಿಯಂತಹ (ಪೆರಿಶಬಲ್) ಉತ್ಪನ್ನಗಳನ್ನು ರಫ್ತು ಮಾಡಲಾಗಿದ್ದು, ಇದು ದೇಶದ ಪೆರಿಶಬಲ್ ಉತ್ಪನ್ನಗಳ ಪೈಕಿ ಶೇ.31ರಷ್ಟು ಕೆಂಪೇಗೌಡ ವಿಮಾನ ನಿಲ್ದಾಣದಿಂದಲೇ ಹೋಗಿದೆ.

ಕೋಳಿ, ಹೂಗಳ ರಫ್ತಿನಲ್ಲೂ ಕೆಂಪೇಗೌಡ ವಿಮಾನ ನಿಲ್ದಾಣವೇ ಮುಂಚೂಣಿಯಲ್ಲಿದ್ದು, 28,182 ಮೆಟ್ರಿಕ್‌ಟನ್‌ನಷ್ಟು ಕೋಳಿ ಹಾಗೂ 1,296 ಮೆ.ಟ ಹೂವುಗಳನ್ನು ರಫ್ತು ಮಾಡಲಾಗಿದೆ. 24 ವಿಮಾನಯಾನ ಸಂಸ್ಥೆಗಳು 46 ವಿದೇಶಗಳಲ್ಲಿ ಪೆರಿಶಬಲ್ ಉತ್ಪನ್ನಗಳನ್ನು ರಫ್ತು ಮಾಡುತ್ತಿವೆ.

ಪೆರಿಶಬಲ್ ಉತ್ಪನ್ನಗಳನ್ನು ಅತ್ಯಾಧುನಿಕ ತಂತ್ರಜ್ಞಾನದಿಂದ ಕೆಡದಂತೆ ಸಂಸ್ಕರಿಸಿ ವೇಗವಾಗಿ ರಫ್ತು ಮಾಡಲಾಗುತ್ತಿದೆ. ಇದರಿಂದ ರಫ್ತು ಬೇಡಿಕೆಯೂ ಸಹ ದಿನೇ ದಿನೆ ಹೆಚ್ಚುತ್ತಲೇ ಇದೆ ಎಂದು ಬಿಐಎಎಲ್ ಸ್ಟಾರ್ಟಜಿ ಅಂಡ್​ ಡೆವಲಪ್‌ಮೆಂಟ್ ಮುಖ್ಯಾಧಿಕಾರಿ ಸಾತ್ಯಕಿ ರಘುನಾಥ್ ಹೇಳಿದ್ದಾರೆ.

ಪ್ರಧಾನಿ ಅವರ ಆಶಯದಂತೆ ರೈತರ ಉತ್ಪನ್ನಗಳಿಗೆ ಆದಾಯ ಕೊಡಿಸುವ ನಿಟ್ಟಿನಲ್ಲಿ ಉತ್ಪನ್ನಗಳ ರಫ್ತು ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ವಿಮಾನ ನಿಲ್ದಾಣ, ರಫ್ತು ಹಾಗೂ ಪಾಲುದಾರರ ಸಹಯೋಗದಲ್ಲಿ ಕೋಲ್ಡ್ ಸ್ಟೋರೇಜ್‌ನ ಇನ್ನಷ್ಟು ಮೇಲ್ದರ್ಜೆಗೇರಿಸಲು ಸಹ ಯೊಜಿಸಿದ್ದೇವೆ ಎಂದು ಎಪಿಇಡಿಎ ಅಧ್ಯಕ್ಷ ಡಾ.ಎಂ. ಅಂಗಮುತ್ತು ತಿಳಿಸಿದ್ದಾರೆ.

ABOUT THE AUTHOR

...view details