ಕರ್ನಾಟಕ

karnataka

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವು

By

Published : Mar 9, 2022, 4:05 PM IST

ಮಾರ್ಚ್​ 7ರಂದು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾಗ ಏಳುಮಲೈ ಆಯತಪ್ಪಿ ಎರಡನೇ ಮಹಡಿಯಿಂದ ಕೆಳಗೆ ಬಿದ್ದಿದ್ದಾನೆ.

Labor death
ಮೃತ ಕಾರ್ಮಿಕ ಏಳುಮಲೈ

ಬೆಂಗಳೂರು: ಗಾರೆ ಕೆಲಸ‌ ಮಾಡುವಾಗ ನಿರ್ಮಾಣ ಹಂತದ ಕಟ್ಟಡದ ಎರಡನೇ ಮಹಡಿಯಿಂದ ಬಿದ್ದು ತಮಿಳುನಾಡು ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಈ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ ನಾಗರಭಾವಿಯಲ್ಲಿ ನಡೆದಿದೆ.

ಸಾವನ್ನಪ್ಪಿದ ಕಾರ್ಮಿಕನನ್ನು ಏಳುಮಲೈ ಎಂದು ಗುರುತಿಸಲಾಗಿದೆ. ಈತ ಹಲವು ವರ್ಷಗಳಿಂದ ನಗರದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ. ಮಾರ್ಚ್ 7ರಂದು ಕೆಲಸ ಮಾಡುವಾಗ ಎರಡನೇ ಮಹಡಿಯಿಂದ ಕೆಳಗೆಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣ ಸ್ಥಳೀಯರು ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಿದ್ದರಾದರೂ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.

ಕಾರ್ಮಿಕನ ಸಾವಿಗೆ ಕಟ್ಟಡದ ಮಾಲೀಕ ಮುನಿರಾಜು ಬಾಬು ಹಾಗು ಶಿವಶಂಕರ್ ಚೌಧರಿ, ಶಕ್ತಿವೇಲು ಹಾಗೂ ವಡಿವೇಲು ನಿರ್ಲಕ್ಷ್ಯವೇ ಕಾರಣವೆಂದು ದೂರಲಾಗಿದೆ. ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಇದನ್ನೂ ಓದಿ:ನಂಜನಗೂಡು: ಹಿಂದಿ ಶಿಕ್ಷಕಿ ಅನುಮಾನಾಸ್ಪದ ಸಾವು

ABOUT THE AUTHOR

...view details