ಕರ್ನಾಟಕ

karnataka

ಕೋವಿಡ್ ಲಸಿಕಾ ಅಮೃತ ಮಹೋತ್ಸವ ಅಭಿಯಾನ ಇಂದಿನಿಂದ ಆರಂಭ : ಸಚಿವ ಡಾ. ಕೆ ಸುಧಾಕರ್

By

Published : Jul 15, 2022, 9:13 PM IST

ರಾಜ್ಯದಲ್ಲಿ ಸದ್ಯಕ್ಕೆ 8. 84 ಲಕ್ಷ ಡೋಸ್ ಕೋವಿಶೀಲ್ಡ್ ಹಾಗೂ 31.55 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕಾ ದಾಸ್ತಾನು ಹೊಂದಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ ಲಸಿಕಾ ಅಮೃತ ಮಹೋತ್ಸವ
ಕೋವಿಡ್ ಲಸಿಕಾ ಅಮೃತ ಮಹೋತ್ಸವ

ಬೆಂಗಳೂರು: 75 ದಿನಗಳ ವಿಶೇಷ 'ಕೋವಿಡ್ ಲಸಿಕಾ ಅಮೃತ ಮಹೋತ್ಸವ' ಅಭಿಯಾನ ರಾಜ್ಯಾದ್ಯಂತ ಇಂದಿನಿಂದ (ಶುಕ್ರವಾರ) ಆರಂಭವಾಗಿದೆ. 2ನೇ ಡೋಸ್ ಪಡೆದುಕೊಂಡ ನಂತರ 6 ತಿಂಗಳು ಅಥವಾ 26 ವಾರ ಪೂರ್ಣಗೊಳಿಸಿರುವ 18 ವರ್ಷ ಮೇಲ್ಪಟ್ಟ ಎಲ್ಲರೂ ಜುಲೈ 15ರಿಂದ ಸೆಪ್ಟೆಂಬರ್ 30ರವರೆಗೆ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ಮುಂದಿನ 75 ದಿನಗಳಲ್ಲಿ ಕರ್ನಾಟಕದಾದ್ಯಂತ 8,000 ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಸುಮಾರು 4.34 ಕೋಟಿ ಅರ್ಹ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ವಿತರಿಸುವ ಯೋಜನೆ ರೂಪಿಸಲಾಗಿದೆ ಎಂದರು.

ರಾಜ್ಯದಲ್ಲಿ ಸದ್ಯಕ್ಕೆ 8.84 ಲಕ್ಷ ಡೋಸ್ ಕೋವಿಶೀಲ್ಡ್ ಹಾಗೂ 31.55 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕಾ ದಾಸ್ತಾನು ಹೊಂದಲಾಗಿದೆ. ಮನೆ ಮನೆಗೆ ಲಸಿಕಾ ಮಿತ್ರ, ಬುಧವಾರದ ಲಸಿಕಾ ಮೇಳದ ಜೊತೆಗೆ ಐಟಿ ಕಂಪನಿ, ಕಾರ್ಖಾನೆ, ಸರ್ಕಾರಿ ಕಚೇರಿಗಳ ಸ್ಥಳದಲ್ಲೇ ಲಸಿಕೆ ನೀಡುವ ಜಿಲ್ಲಾ ಮಟ್ಟದ ಸೂಕ್ಷ್ಮ ಕ್ರಿಯಾ ಯೋಜನೆ ರೂಪಿಸಲಾಗಿದೆ. ಎಲ್ಲ ಅರ್ಹ ನಾಗರೀಕರು ಮುನ್ನೆಚ್ಚರಿಕೆ ಡೋಸ್ ಪಡೆಯುವ ಮೂಲಕ ಕೊರೊನಾ ಮುಕ್ತ ಕರ್ನಾಟಕ ನಿರ್ಮಿಸಲು ಕೈಜೋಡಿಸಬೇಕೆಂದು ಟ್ವೀಟ್ ಮೂಲಕ ಸಚಿವರು ಕೋರಿದ್ದಾರೆ.

ಓದಿ:ಡ್ರೋನ್​ ನೋಟ​ : ಮತ್ತೆ ಮತ್ತೆ ನೋಡಬೇಕೆನ್ನುವ ಹೊಗೆನಕಲ್ ದೃಶ್ಯಕಾವ್ಯ..

TAGGED:

ABOUT THE AUTHOR

...view details