ಕರ್ನಾಟಕ

karnataka

ಅಂಧತ್ವಕ್ಕೆ ಸೆಡ್ಡು ಹೊಡೆದು ಯುಪಿಎಸ್​ಸಿ ಪಾಸಾದ ಮೇಘನಾ ನಿವಾಸಕ್ಕೆ ಸಚಿವ ಸುರೇಶ್ ಕುಮಾರ್ ಭೇಟಿ

By

Published : Aug 5, 2020, 8:18 PM IST

ಪ್ರಸ್ತುತ ಕರ್ನಾಟಕ ಖಜಾನೆ ನಿರ್ದೇಶನಾಲಯದಲ್ಲಿ ಬೆಂಗಳೂರು ಜಿಲ್ಲಾ ಖಜಾನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಮೇಘನಾ ಅವರು ಯುಪಿಎಸ್​ಸಿ ಪರೀಕ್ಷೆಯಲ್ಲಿ 465ನೇ ಶ್ರೇಣಿಯಲ್ಲಿ ಪಾಸಾಗಿದ್ದು ಅವರನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ಮಾಡಿ ಶುಭಾಶಯ ಕೋರಿದರು.

Minister Sureshkumar Visit Meghana House
ಮೇಘನಾ ನಿವಾಸಕ್ಕೆ ಭೇಟಿ ಕೊಟ್ಟ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಅಂಧತ್ವಕ್ಕೆ ಸೆಡ್ಡು ಹೊಡೆದು ಯುಪಿಎಸ್​ಸಿ ಪರೀಕ್ಷೆಯಲ್ಲಿ 465ನೇ ಶ್ರೇಣಿಯಲ್ಲಿ ಪಾಸಾದ ಮೇಘನಾ ಅವರನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ಮಾಡಿ‌ ಶುಭಾಶಯ ತಿಳಿಸಿದ್ದಾರೆ.

ಮೇಘನಾ ನಿವಾಸಕ್ಕೆ ಭೇಟಿ ಕೊಟ್ಟ ಸಚಿವ ಸುರೇಶ್ ಕುಮಾರ್

ಎಸ್​ಎಸ್​ಎಲ್​ಸಿ ಓದುತ್ತಿದ್ದಾಗ ತನ್ನ ದೃಷ್ಟಿ ಸಾಮರ್ಥ್ಯವನ್ನು ಕಳೆದುಕೊಂಡ ಮೇಘನಾ, ಯುಪಿಎಸ್​ಸಿ ಪರೀಕ್ಷೆಗಳಲ್ಲಿ ತನ್ನ ಸಾಮರ್ಥ್ಯ ತೋರಿರುವುದು ನಿಜಕ್ಕೂ ಶ್ಲಾಘನೀಯ. ಮೇಘಾನ ಅವರ ಸಾಧನೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಚಿವರು ಈ ವೇಳೆ ಅವರ ಸಾಧನೆಯನ್ನು ಬಣ್ಣಿಸಿದರು.

ಮೇಘನಾ ನಿವಾಸಕ್ಕೆ ಭೇಟಿ ಕೊಟ್ಟ ಸಚಿವ ಸುರೇಶ್ ಕುಮಾರ್

ಸದ್ಯ ಕೆ.ಟಿ. ಮೇಘನಾ ಕೆ.ಎ.ಎಸ್. ಅಧಿಕಾರಿಯಾಗಿದ್ದು, ಪ್ರಸ್ತುತ ಕರ್ನಾಟಕ ಖಜಾನೆ ನಿರ್ದೇಶನಾಲಯದಲ್ಲಿ ಬೆಂಗಳೂರು ಜಿಲ್ಲಾ ಖಜಾನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಯುಪಿಎಸ್​ಸಿ ಪರೀಕ್ಷೆಯಲ್ಲೂ ತೇರ್ಗಡೆಯಾಗಿರುವ ಮೇಘನಾ ಐಎಎಸ್ ಅಧಿಕಾರಿಯಾಗುವ ನಿರೀಕ್ಷೆಯಲ್ಲಿದ್ದಾರೆ.

ಮೇಘನಾ ನಿವಾಸಕ್ಕೆ ಭೇಟಿ ಕೊಟ್ಟ ಸಚಿವ ಸುರೇಶ್ ಕುಮಾರ್

ABOUT THE AUTHOR

...view details