ಕರ್ನಾಟಕ

karnataka

ಸುಳ್ಳು ಪ್ರಮಾಣಪತ್ರ ಸಲ್ಲಿಸಿದ ಆರೋಪ: ಹೈಕೋರ್ಟ್​ನಲ್ಲಿ ವಿಚಾರಣೆ ಎದುರಿಸಿದ ಸಂಸದ ಪ್ರಜ್ವಲ್ ರೇವಣ್ಣ

By

Published : Oct 12, 2022, 8:50 AM IST

Updated : Oct 12, 2022, 9:03 AM IST

ಪ್ರಜ್ವಲ್ ರೇವಣ್ಣ ವಿರುದ್ಧ ಸೋತಿದ್ದ ಎ.ಮಂಜು ಅವರು ಪ್ರಜ್ವಲ್ ರೇವಣ್ಣ ಅವರ ಗೆಲುವನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

Mp Prajwal Revanna In High Court
ಹೈಕೋರ್ಟ್​ನಲ್ಲಿ ವಿಚಾರಣೆ ಎದುರಿಸಿದ ಸಂಸದ ಪ್ರಜ್ವಲ್ ರೇವಣ್ಣ

ಬೆಂಗಳೂರು:ಚುನಾವಣಾ ಸಂದರ್ಭದಲ್ಲಿ ಆದಾಯದ ಕುರಿತು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ ಆರೋಪ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೈಕೋರ್ಟ್​ನಲ್ಲಿ ವಿಚಾರಣೆ ಎದುರಿಸಿದರು.

ಪ್ರಜ್ವಲ್‌ ರೇವಣ್ಣ ವಿರುದ್ಧ ಸೋತಿದ್ದ ಎ.ಮಂಜು ಅವರು ಪ್ರಜ್ವಲ್ ರೇವಣ್ಣ ಅವರ ಗೆಲುವನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ, ಕಟಕಟೆಯಲ್ಲಿ ನಿಂತಿದ್ದ ಪ್ರಜ್ವಲ್ ಅವರನ್ನು ಹಿರಿಯ ವಕೀಲ ಉದಯ್ ಹೊಳ್ಳ ಮತ್ತು ಕೇಶವ ರೆಡ್ಡಿ ಅವರು ವಿಚಾರಣೆಗೊಳಪಡಿಸಿದರು. ಮಾಹಿತಿ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿದೆ.

ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಿರುವ ಆದಾಯ ವಿವರಗಳಿಗೂ ಚುನಾವಣೆಗೆ ಸಲ್ಲಿಸಿರುವ ವಿವರಗಳಿಗೆ ವ್ಯತ್ಯಾಸವಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ.

ಇದನ್ನೂ ಓದಿ:ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಕೋರಿ ಅರ್ಜಿ : ನೋಟಿಸ್ ಜಾರಿಗೆ ಆದೇಶಿಸಿದ ಹೈಕೋರ್ಟ್

Last Updated : Oct 12, 2022, 9:03 AM IST

ABOUT THE AUTHOR

...view details