ಕರ್ನಾಟಕ

karnataka

ಹಿಂದೂಪರ ಸಂಘಟನೆಗಳ ವಿಚಾರವಾಗಿ ನಾನು ನೀಡಿದ್ದ ಹೇಳಿಕೆ ತಿರುಚಲಾಗಿದೆ: ಸಿದ್ದರಾಮಯ್ಯ

By

Published : Jul 27, 2022, 2:37 PM IST

ಸಾಮಾಜಿಕ ಜಾಲತಾಣದಲ್ಲಿ ಹಿಂದೂಪರ ಸಂಘಟನೆಗಳ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

KN_BNG_03_SIDDU_FACEBOOK_STATUS_SCRIPT_7208077
ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದೂಪರ ಸಂಘಟನೆಗಳ ವಿರುದ್ಧ ನಾನು ನೀಡಿದ ಹೇಳಿಕೆಯನ್ನು ತಿರುಚಲಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಶ್ರೀರಾಮಸೇನೆ, ಬಜರಂಗದಳ, ಆರ್​ಎಸ್​ಎಸ್ ಮೇಲೆ ಬುಲ್ಡೋಜರ್ ನುಗ್ಗಿಸಬೇಕು ಎಂದು ನಾನು ಕರೆಕೊಟ್ಟಿದ್ದೇನೆ ಎಂಬ ಅರ್ಥದಲ್ಲಿ ಪ್ರಕಟವಾಗಿದ್ದ ಪತ್ರಿಕಾ ವರದಿಯನ್ನು ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಮಾಜಿ ಸಿಎಂ ಸ್ಪಷ್ಟನೆ ಕೊಟ್ಟಿದ್ದಾರೆ.

ಪ್ರತಿ ಪಕ್ಷದವರು, ಅಲ್ಪಸಂಖ್ಯಾತರು, ಸೈದ್ದಾಂತಿಕ ವಿರೋಧಿಗಳ ಮನೆಮೇಲೆ ಬುಲ್ಡೋಜರ್​ ಹರಿಸುತ್ತೇವೆ ಎಂಬ ಹಿಂಸಾತ್ಮಕ ಹೇಳಿಕೆಗಳೇ ತಪ್ಪು, ಇಂತಹ ಹೇಳಿಕೆಗಳಿಂದ ಪ್ರಚೋದನೆಗೀಡಾಗಿ ಇನ್ನೊಂದು ಗುಂಪಿನವರು ಶ್ರೀರಾಮಸೇನೆ, ಬಜರಂಗದಳದವರ ಮನೆ ಮೇಲೆ ಬುಲ್ಡೋಜರ್ ಹರಿಸುತ್ತೇವೆ ಎಂದು ಹೇಳುತ್ತಾರೆ. ಇದಕ್ಕೆ ಯಾರೂ ಅವಕಾಶ ನೀಡಬಾರದು ಎಂದಷ್ಟೇ ನಾನು ಹೇಳಿದ್ದು ಎಂಬ ವಿವರಣೆ ನೀಡಿದ್ದಾರೆ.

ನನ್ನ ಹೇಳಿಕೆಯನ್ನ ತಿರುಚಿ ಪ್ರಕಟವಾದ ವರದಿಯನ್ನು ಇನ್ನಷ್ಟು ತಿರುಚಿ ಕೆಲವು ಸಮಾಜ ವಿರೋಧಿ ಶಕ್ತಿಗಳು ನನ್ನ ವಿರುದ್ದ ಅಪಪ್ರಚಾರ ನಡೆಸುತ್ತಿವೆ. ಈ ಪ್ರಚೋದನಕಾರಿ ಮತ್ತು ಕಾನೂನು ಬಾಹಿರ ನಡೆ - ನುಡಿಗಳನ್ನು ನಿಲ್ಲಿಸದೇ ಹೋದರೆ ಅಂತಹವರ ವಿರುದ್ದ ಕಾನೂನುಕ್ರಮಕ್ಕಾಗಿ ಪೊಲೀಸರಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಸಂತಾಪ ಸೂಚನೆ:ಬಜರಂಗದಳ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ - ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ, ಜಾತಿ, ಧರ್ಮವನ್ನು ಲೆಕ್ಕಿಸದೇ ಪೊಲೀಸರು ಮುಲಾಜಿಲ್ಲದೇ ಕ್ರಮಕೈಗೊಳ್ಳಬೇಕು ಎಂದಿದ್ದಾರೆ.

ಇದನ್ನೂ ಓದಿ:ರೋಡ್​ ರೋಲರ್​ ಹತ್ತಿಸಿ ₹2 ಕೋಟಿಗೂ ಹೆಚ್ಚು ಮೌಲ್ಯದ ಮದ್ಯ ನಾಶಪಡಿಸಿದ ಪೊಲೀಸರು!

ABOUT THE AUTHOR

...view details