ಕರ್ನಾಟಕ

karnataka

ಮೈಸೂರು ಮೇಯರ್ ಚುನಾವಣೆ ಗಲಾಟೆ: ವರದಿ ಕೇಳಿದ ಡಿ.ಕೆ.ಶಿವಕುಮಾರ್

By

Published : Mar 14, 2021, 6:58 PM IST

ಕೆಲ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಮುಜುಗರ ಉಂಟುಮಾಡಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ವರದಿ ನೀಡುವಂತೆ ಸೂಚನೆ ಕೊಟ್ಟಿದ್ದಾರೆ.

mysuru mayar election Uproar issue
ಮೈಸೂರು ಮೇಯರ್ ಚುನಾವಣೆ ಗಲಾಟೆ

ಬೆಂಗಳೂರು: ಮೈಸೂರು ಮೇಯರ್ ಚುನಾವಣೆ ಸಂದರ್ಭ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಪ್ರಕರಣದ ವರದಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣದಲ್ಲಿ ಯುವತಿ ಸೇರಿ ಮೂವರು ವಶಕ್ಕೆ?

ಫೆಬ್ರವರಿ 24 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದೆ. ಆದರೆ ನಿರೀಕ್ಷೆಯಂತೆ ಈ ಸಾರಿ ಮೇಯರ್ ಪಟ್ಟವನ್ನು ಕಾಂಗ್ರೆಸ್​​ಗೆ ಬಿಟ್ಟು ಕೊಡುವ ಬದಲು ಜೆಡಿಎಸ್ ತನ್ನ ಬಳಿಯೇ ಉಳಿಸಿಕೊಂಡಿದೆ. ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆಯುವ ಉದ್ದೇಶದಿಂದ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡಿತ್ತು. ಆದರೆ ಈ ಘಟನೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಾಲಿಗೆ ತೀವ್ರ ಮುಜುಗರ ಉಂಟುಮಾಡಿತ್ತು.

ಅಲ್ಲದೇ ಇದೇ ಸಂದರ್ಭ ಕೆಲ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಮುಜುಗರ ಉಂಟುಮಾಡಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ವರದಿ ನೀಡುವಂತೆ ಸೂಚನೆ ಕೊಟ್ಟಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದವರ ಬಗ್ಗೆ ವರದಿ ನೀಡುವಂತೆ ಸೂಚನೆ ಕೊಟ್ಟಿದ್ದಾರೆ.

ಮೈಸೂರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಕಾರ್ಯ ನಿರ್ವಹಿಸುವಂತೆ ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್‌ರನ್ನು ಉಸ್ತುವಾರಿಯಾಗಿ ನೇಮಿಸಲಾಗಿತ್ತು. ಇವರು ಸಿದ್ದರಾಮಯ್ಯ ವಿರುದ್ಧವಾಗಿ ಕಾರ್ಯನಿರ್ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪಕ್ಷದ ಶಿಸ್ತು ಸಮಿತಿ ಕಾರ್ಯ ವಿಚಾರಣೆ ನಡೆಸಿದ ಸಂದರ್ಭ ಪಕ್ಷದ ನಿರ್ಧಾರದಂತೆ ಕೆಲಸ ಮಾಡಿದ್ದೇನೆಂದು ತನ್ವೀರ್ ಸೇಠ್ ಹೇಳಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೂಚನೆಯಂತೆ ಕೆಲಸ ಮಾಡಿದ್ದೇನೆಂದು ಹೇಳಿದ್ದರು.

ಆದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಕೆಲ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ತನಗೆ ಸೇಠ್ ಅವರು ಸಿದ್ದರಾಮಯ್ಯ ವಿರುದ್ಧ ಕಾರ್ಯನಿರ್ವಹಿಸಿದ್ದಾರೆ ಎಂದು ಆರೋಪಿಸಿದ್ದರು. ಇದೀಗ ಈ ಘಟನೆ ಸೇರಿದಂತೆ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ರುವ ಪ್ರಕರಣವನ್ನು ಸಹ ತನಿಖೆ ನಡೆಸಿ ವರದಿ ಒಪ್ಪಿಸುವಂತೆ ಡಿಕೆಶಿ ಸೂಚಿಸಿದ್ದಾರೆ.

ABOUT THE AUTHOR

...view details