ಕರ್ನಾಟಕ

karnataka

Organ Donation : ಧಾರ್ಮಿಕ ಕಟ್ಟುಪಾಡು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬ ಸನ್ಮಾನಿಸಿದ ಸಚಿವರು

By

Published : Jun 12, 2023, 10:47 PM IST

ಸಾವಿನಲ್ಲೂ ಸಾರ್ಥಕತೆ ಮೆರೆದು ಅಂಗಾಂಗ ದಾನ ಮಾಡಿದ್ದ ಫಾರ್ದಿನ್ ಖಾನ್ ಕುಟುಂಬಸ್ಥರ ಕಾರ್ಯಕ್ಕೆ ಸಚಿವ ದಿನೇಶ್ ಗುಂಡೂರಾವ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Etv Bhಮುಸ್ಲಿಂ ಕುಟುಂಬವನ್ನು ಸನ್ಮಾನಿಸಿದ ಸಚಿವ ದಿನೇಶ್ ಗುಂಡೂರಾವ್
ಮುಸ್ಲಿಂ ಕುಟುಂಬವನ್ನು ಸನ್ಮಾನಿಸಿದ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಸಾವಿನಲ್ಲೂ ಅಂಗಾಂಗ ದಾನ ಮಾಡಿದವರಿಗೆ ಸನ್ಮಾನಿಸುವ ಮೂಲಕ ಅಂಗಾಂಗ ದಾನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರೋತ್ಸಾಹ ನೀಡಿದ್ದಾರೆ. ಅಂಗಾಂಗ ದಾನ ನಿಜವಾಗಿ ಆತ್ಮ ಚೈತನ್ಯ ನೀಡುವ ಕಾರ್ಯ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿ ಸಾವಿನಲ್ಲೂ ಸಾರ್ಥಕತೆ ಎಂಬಂತೆ ಅಂಗಾಂಗ ದಾನ ಮಾಡಿದ ಫಾರ್ದಿನ್ ಖಾನ್ ಕುಟುಂಬದ ಕಾರ್ಯವನ್ನು ಗುಂಡೂರಾವ್ ಶ್ಲಾಘಿಸಿದ್ದಾರೆ.

ಇಂದು ಮೃತ ಫಾರ್ದಿನ್ ಖಾನ್ ಅವರ ನಿವಾಸಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ಗುಂಡೂರಾವ್, ಅಂಗಾಂಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದ ಫಾರ್ದಿನ್ ಖಾನ್ ಅವರ ಕುಟಂಬವನ್ನು ಸನ್ಮಾನಿಸಿದರು. 22 ವರ್ಷದ ಫಾರ್ದಿನ್ ಖಾನ್ ಜೂನ್ 4 ರಂದು ಮದುವೆ ಸಮಾರಂಭ‌ ಮುಗಿಸಿ ವಾಪಾಸ್ ಬರುತ್ತಿದ್ದಾಗ ತುಮಕೂರಿನ ಶಿರಾ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ರಸ್ತೆ ಅಪಘಾತ ಜರುಗಿತ್ತು. ಈ ಅಪಘಾತದಲ್ಲಿ ಫಾರ್ದಿನ್ ಖಾನ್ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಆಸ್ಪತ್ರೆಗೆ ದಾಖಲಿಸಿದರೂ, ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಫಾರ್ದಿಲ್ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು.

ಜೂನ್ 7 ರಂದು ಬೆಳಗ್ಗೆ 11.55 ಕ್ಕೆ ಫಾರ್ದಿನ್ ಖಾನ್ ಮೆದುಳು ನಿಷ್ಕ್ರೀಯಗೊಂಡಿರುವುದಾಗಿ ಆಸ್ಪತ್ರೆಯ ವೈದ್ಯರು ಘೋಷಿಸಿದ್ದರು. ಆದರೆ, ಮೆದುಳು ನಿಷ್ಕ್ರೀಯಗೊಂಡರೂ ಉಳಿದೆಲ್ಲಾ ಅಂಗಾಂಗಗಳು ವೆಂಟಿಲೇಟರ್ ಸಹಾಯದಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದವು. ಈ ದುಃಖದ ಸನ್ನಿವೇಶದಲ್ಲಿ ಫಾರ್ದಿನ್ ಕುಟುಂಬದವರು ತಮ್ಮ ಮಗನ ದೇಹದ ಅಂಗಾಂಗಳನ್ನು ದಾನ ಮಾಡುವ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಮೂಲಕ 6 ಜನರಿಗೆ ಜೀವ ತುಂಬಿದ್ದರು.

ಇದನ್ನೂ ಓದಿ :ಅಂಗಾಂಗ ದಾನ ಜಾಗೃತಿಯಿಂದ ಜೀವ ರಕ್ಷಣಾ ಪ್ರಕ್ರಿಯೆಗೆ ಯಶಸ್ಸು: ಡಾ. ಕುಮುದ್ ಧಿತಾಲ್

ಅಂಗಾಂಗ ಕಸಿ ಮಾಡಿದ ವೈದ್ಯರು ಫಾರ್ದಿನ್ ಖಾನ್ ಹೃದಯವನ್ನು ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದ 57 ವರ್ಷದ ವ್ಯಕ್ತಿಗೆ ಕಸಿ ಮಾಡಲಾಗಿದೆ. ಜೊತೆಗೆ ಪಿತ್ತಜನಕಾಂಗವನ್ನು ಯಶವಂತಪುರ ಸ್ಪರ್ಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 42 ವರ್ಷದ ರೋಗಿಗೆ ಕಸಿ ಮಾಡಲಾಗಿದೆ. ಎಡ ಮೂತ್ರಪಿಂಡ ಮತ್ತು ಫ್ಯಾಂಕ್ರಿಯಾಸ್‌ನ್ನು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗೆ ಬಹು ಅಂಗಾಂಗ ಕಸಿ ಮಾಡಲಾಗಿದೆ. ಬಲ ಮೂತ್ರಪಿಂಡವನ್ನು ಸ್ಪರ್ಶ್ ಆಸ್ಪತ್ರೆಯ ರೋಗಿಗೆ ಕಸಿ ಮಾಡಿದರೆ, ಕಣ್ಣಿನ ಕಾರ್ನಿಯಾವನ್ನು ನಾರಾಯಣ ನೇತ್ರಾಲಯಕ್ಕೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯದಲ್ಲಿ ಅಂಗಾಂಗ ದಾನಕ್ಕೆ ಧಾರ್ಮಿಕ ಕಟ್ಟುಪಾಡುಗಳಿವೆ. ಆದರೆ ಫಾರ್ದಿನ್ ಕುಟುಂಬ ಈ ಎಲ್ಲ ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿ ಅಂಗಾಂಗಳನ್ನು ದಾನ ಮಾಡುವ ಮೂಲಕ ಆರು ಜನರ ಬದುಕಿಗೆ ಮರುಜೀವ ನೀಡಿದ್ದಾರೆ. ಹಾಗು ಸಮಾಜದಲ್ಲಿ ಉಳಿದ ಮತ್ತಷ್ಟು ಜನರಿಗೆ ಮಾದರಿಯಾಗಿದ್ದಾರೆ ಎಂದು ದಿನೇಶ್ ಗುಂಡೂರಾವ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :ದೇಶದಲ್ಲಿ 10 ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಾದ ಅಂಗಾಂಗ ದಾನ

ABOUT THE AUTHOR

...view details