ಕರ್ನಾಟಕ

karnataka

ಕಾಂಗ್ರೆಸ್​ನಿಂದ ಪೇಸಿಎಂ ಪೋಸ್ಟರ್ ಅಭಿಯಾನ: ಸಿಎಂ ನಿವಾಸಕ್ಕೆ ಹೆಚ್ಚಿದ ಪೊಲೀಸ್ ಭದ್ರತೆ

By

Published : Sep 23, 2022, 6:24 PM IST

Updated : Sep 23, 2022, 7:26 PM IST

ಪೇಸಿಎಂ ಪೋಸ್ಟರ್ ಅಂಟಿಸುವ ಅಭಿಯಾನ
ಪೇಸಿಎಂ ಪೋಸ್ಟರ್ ಅಂಟಿಸುವ ಅಭಿಯಾನ ()

ಕಾಂಗ್ರೆಸ್​​ನಿಂದ ಪೇಸಿಎಂ ಪೋಸ್ಟರ್ ಅಭಿಯಾನ. ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರಿ ನಿವಾಸ ಮತ್ತು ಕಚೇರಿಗೆ ಹೆಚ್ಚಿನ ಭದ್ರತೆ.

ಬೆಂಗಳೂರು: ಕಾಂಗ್ರೆಸ್​​ನಿಂದ ಪೇಸಿಎಂ ಪೋಸ್ಟರ್ ಅಂಟಿಸುವ ಅಭಿಯಾನದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ ಸರ್ಕಾರಿ‌ ನಿವಾಸ ಮತ್ತು ಕಚೇರಿಗೆ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಸರ್ಕಾರಿ ನಿವಾಸ ರೇಸ್ ವ್ಯೂ ಕಾಟೇಜ್ ಎದುರು ಹೆಚ್ಚು ಭದ್ರತೆ ಕಲ್ಪಿಸಲಾಗಿದ್ದು, ಯಾವುದೇ ರೀತಿಯಲ್ಲಿಯೂ ಪೋಸ್ಟರ್ ಅಂಟಿಸುವ ಚಟುವಟಿಕೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ಅದೇ ರೀತಿ ಸಿಎಂ ಗೃಹ ಕಚೇರಿ ಕೃಷ್ಣಾ ಬಳಿಯೂ ಕಟ್ಟೆಚ್ಚರ ವಹಿಸಿದ್ದು, ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ರೇಸ್ ಕೋರ್ಸ್ ರಸ್ತೆಯಲ್ಲಿನ ವೋಲ್ವೋ ಬಿಲ್ಡಿಂಗ್ ಎದುರಿನ ಕಾಂಪೌಂಡ್​​ಗೆ ಪೇಸಿಎಂ ಪೋಸ್ಟರ್ ಅಂಟಿಸುವ ಮೂಲಕ ಪೇಸಿಎಂ ಅಭಿಯಾನಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿರುವ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಪೇಸಿಎಂ ಪೋಸ್ಟರ್ ಅಭಿಯಾನ: ಸಿಎಂ ನಿವಾಸಕ್ಕೆ ಹೆಚ್ಚಿದ ಪೊಲೀಸ್ ಭದ್ರತೆ

ನಗರದ ರೇಸ್​ಕೋರ್ಸ್ ರಸ್ತೆಯಲ್ಲಿನ ಕಾಂಪೌಂಡ್ ಗೋಡೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಇತರ ಮುಖಂಡರು, ಶಾಸಕರು , ಕಾರ್ಯಕರ್ತರು ಪೇಸಿಎಂ ಪೋಸ್ಟರ್​ ಅಂಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

(ಇದನ್ನೂ ಓದಿ: ಕೈ ಕಲಿಗಳಿಂದ ಬೆಂಗಳೂರಿನಲ್ಲಿ ಪೇಸಿಎಂ ಪೋಸ್ಟರ್ ಅಭಿಯಾನ: ನಾಯಕರನ್ನು ವಶಕ್ಕೆ ಪಡೆದ ಪೊಲೀಸ್​)

Last Updated :Sep 23, 2022, 7:26 PM IST

ABOUT THE AUTHOR

...view details