ಕರ್ನಾಟಕ

karnataka

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವು; ಪ್ರಧಾನಿ ಮೋದಿ ಅಭಿನಂದನೆ

By

Published : May 13, 2023, 5:42 PM IST

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದಾರೆ.

Etv Bharat
Etv Bharat

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಮೋಘ ವಿಜಯ ದಾಖಲಿಸಿದ ಕಾಂಗ್ರೆಸ್​ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಅವರಿಗೆ ಹಾರೈಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು ಎಂದು ಟ್ವೀಟ್​ನಲ್ಲಿ ಪ್ರಧಾನಿ ತಿಳಿಸಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಕಾಂಗ್ರೆಸ್​ ಗೆಲುವಿಗೆ ಈ ಅಂಶಗಳು ಕಾರಣವೇ?

ABOUT THE AUTHOR

...view details