ಕರ್ನಾಟಕ

karnataka

ನಾನು ಮೂಲತಃ ಕರ್ನಾಟಕದವನು; ಆಂಜನೇಯ ಹೇಳಿಕೆಗೆ ಸಚಿವ ಪ್ರಭು ಚವ್ಹಾಣ್ ತಿರುಗೇಟು

By

Published : Sep 24, 2020, 11:39 PM IST

ನಾನು ಮೂಲತಃ ಕರ್ನಾಟಕದವನು. ನಾನು ಅಪ್ಪಟ ಕನ್ನಡಿಗ. ಔರಾದ್ ತಾಲೂಕಿನ ಬೋಂತಿ ತಾಂಡಾ ನನ್ನ ಹುಟ್ಟೂರು. ನಾನು ಪರಿಶಿಷ್ಟ ಜಾತಿಯ(ಎಸ್.ಸಿ) ಲಂಬಾಣಿ ಜನಾಂಗಕ್ಕೆ ಸೇರಿದ್ದೇನೆ. ಆದರೆ, ಆಂಜನೇಯ ಅವರು ವಾಸ್ತವ ಅರಿಯದೆ ಹಾಗೂ ಯಾರೋ ಕುತಂತ್ರಿಗಳು ನೀಡಿದ ಸುಳ್ಳು ಮಾಹಿತಿಯನ್ನು ನಂಬಿ ನನ್ನ ಮೇಲೆ ಆರೋಪ ಮಾಡಿದ್ದು ಸರಿ ಅಲ್ಲ ಎಂದು ಮಾಜಿ ಸಚಿವ ಹೆಚ್​. ಆಂಜನೇಯ ಹೇಳಿಕೆಗೆ ಸಚಿವ ಪ್ರಭು ಚವ್ಹಾಣ್ ಪ್ರತಿಕ್ರಿಯೆ ನೀಡಿದ್ದಾರೆ.

Prabhu Chauhan Reaction About Anjaneya' Statement
ಸಚಿವ ಪ್ರಭು ಚವ್ಹಾಣ್

ಬೆಂಗಳೂರು : ನನ್ನ ಜಾತಿ ಮತ್ತು ಜನ್ಮ ಸ್ಥಳದ ಕುರಿತು ಸಮಾಜಕಲ್ಯಾಣ ಇಲಾಖೆಯ ಮಾಜಿ ಸಚಿವ ಹೆಚ್​. ಆಂಜನೇಯ ಚಿತ್ರದುರ್ಗದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನಿರಾಧಾರ ಹಾಗೂ ಸತ್ಯಕ್ಕೆ ದೂರವಾಗಿವೆ ಎಂದು ಪಶು ಸಂಗೋಪನೆ, ವಕ್ಫ್ ಮತ್ತು ಹಜ್ ಖಾತೆ ಸಚಿವ ಪ್ರಭು ಚವ್ಹಾಣ್ ಪತ್ರಿಕಾ ಹೇಳಿಕೆ ಮೂಲಕ ಸ್ಪಷ್ಟಪಡಿಸಿದ್ದಾರೆ.

ಆಂಜನೇಯ ಅವರಿಗೆ ನನ್ನ ಜಾತಿ, ಜನ್ಮ ಮೂಲದ ಬಗ್ಗೆ ತಿಳಿಯಬೇಕಿದ್ದರೆ ಒಮ್ಮೆ ನನ್ನ ಕ್ಷೇತ್ರಕ್ಕೆ ಬಂದು ಸ್ವತಃ ವಾಸ್ತವ ಏನೆಂಬುದು ತಿಳಿದುಕೊಳ್ಳಲಿ. ನಾನು ಸುಳ್ಳು, ಮೋಸದಿಂದ ಜಾತಿ, ಜನ್ಮ ಪ್ರಮಾಣಪತ್ರ ಪಡೆದಿರುವುದು ಸಾಬೀತಾದರೆ ಅದೇ ಕ್ಷಣ ರಾಜಕೀಯದಿಂದ ನಿವೃತ್ತಿ ಪಡೆಯುವೆ. ಒಂದು ವೇಳೆ ಇದು ಸುಳ್ಳು ಎಂದಾದರೆ ಅವರು ಬಹಿರಂಗವಾಗಿ ಕ್ಷಮೆ ಕೋರಲಿ ಎಂದು ಸವಾಲು ಹಾಕಿದ್ದಾರೆ.

ನಾನು ಮೂಲತಃ ಕರ್ನಾಟಕದವನು. ನಾನು ಅಪ್ಪಟ ಕನ್ನಡಿಗ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೋಂತಿ ತಾಂಡಾ ನನ್ನ ಹುಟ್ಟೂರು. ನಾನು ಪರಿಶಿಷ್ಟ ಜಾತಿಯ(ಎಸ್.ಸಿ) ಲಂಬಾಣಿ ಜನಾಂಗಕ್ಕೆ ಸೇರಿದ್ದೇನೆ. ಆದರೆ, ಆಂಜನೇಯ ಅವರು ವಾಸ್ತವ ಅರಿಯದೇ ಹಾಗೂ ಯಾರೋ ಕುತಂತ್ರಿಗಳು ನೀಡಿದ ಸುಳ್ಳು ಮಾಹಿತಿಯನ್ನು ನಂಬಿ ನನ್ನ ಮೇಲೆ ಆರೋಪ ಮಾಡಿದ್ದಾರೆ. ಪರಿಶಿಷ್ಟ ಸಮಾಜದ ಹಿರಿಯ ನಾಯಕರೆನಿಸಿಕೊಂಡ ಆಂಜನೇಯ ಅವರಿಂದ ಇಂತಹ ತಪ್ಪು ಹೇಳಿಕೆ ಬಂದಿರುವುದು ಅಚ್ಚರಿ ತಂದಿದೆ ಎಂದು ಸಚಿವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಚಿವ ಪ್ರಭು ಚವ್ಹಾಣ್ ಮಹಾರಾಷ್ಟ್ರದಲ್ಲಿ ಲಂಬಾಣಿ ಜನಾಂಗಕ್ಕೆ ಸೇರಿದವರು. ಅಲ್ಲಿ ಲಂಬಾಣಿ ಜನಾಂಗ ಪರಿಶಿಷ್ಟ ಪಂಗಡಕ್ಕೆ ಸೇರಿದೆ. ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಸೇರಿದೆ. ಹಾಗಾಗಿ ಇಲ್ಲಿ ಚುನಾವಣೆಗೆ ಎಸ್​ಸಿ ಮೀಸಲಾತಿ ಇದೆ ಎಂಬುದನ್ನ ತಿಳಿದು ನಕಲಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಮೋಸ ಮಾಡಿ ಬೀದರ್ ಜಿಲ್ಲೆಯ ಔರಾದ್ ಕ್ಷೇತ್ರದಿಂದ ವಿಧಾನ ಸಭೆಗೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆ ಆಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ABOUT THE AUTHOR

...view details