ಕರ್ನಾಟಕ

karnataka

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತನಿಖಾ ವಿವರ ಬಹಿರಂಗಪಡಿಸಲು ಸಿಎಂ ನಕಾರ

By

Published : Aug 3, 2022, 3:06 PM IST

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಎನ್ಐಎಗೆ ಕೇಸ್​ ನೀಡುವ ಕುರಿತು ನಿರ್ಧಾರ - ತನಿಖೆ ವ್ಯಾಪ್ತಿಯಲ್ಲಿನ ಮಾಹಿತಿಯನ್ನ ಮಾಧ್ಯಮಗಳ ಮುಂದೆ ಹೇಳಲಾಗದು ಎಂದ ಸಿಎಂ

CM
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ತನಿಖಾ ವಿವರಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಎನ್ಐಎಗೆ ನೀಡುವ ನಿರ್ಧಾರ ಮಾಡಲಾಗಿದೆ. ತನಿಖೆ ಹಸ್ತಾಂತರ ಇನ್ನೂ ಆಗಿಲ್ಲ, ಆದರೂ ನಮ್ಮ ಪೊಲೀಸರೇ ತನಿಖೆಯನ್ನು ಮುಂದುವರೆಸಿದ್ದಾರೆ. ತನಿಖೆ ವ್ಯಾಪ್ತಿಯಲ್ಲಿನ ಮಾಹಿತಿಯನ್ನ ಮಾಧ್ಯಮಗಳ ಮುಂದೆ ಹೇಳಲಾಗದು ಎಂದರು.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಭೇಟಿ ನೀಡುತ್ತಿದ್ದೇನೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಮಾಡಿ, ಪರಿಹಾರ ಕಾರ್ಯದ ಬಗ್ಗೆ ಪರಿಶೀಲನೆ ನಡೆಸುತ್ತೇನೆ. ಎಲ್ಲ ರೀತಿಯ ಅಗತ್ಯ ಸೂಚನೆಯನ್ನ ಅಧಿಕಾರಿಗಳಿಗೆ ನೀಡಲಾಗುವುದು. ಇಂದು ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ. ನಾಳೆ ಸಂಕಲ್ಪ ಸಿದ್ದಿ ಸಮಾವೇಶದ ಮೂರನೇ ಆವೃತ್ತಿ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು, ನಾಳೆಯೇ ದೆಹಲಿಗೆ ವಾಪಸ್​ ಆಗಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಭಟ್ಕಳಕ್ಕೆ ಸಿಎಂ ಬೊಮ್ಮಾಯಿ ತುರ್ತು ಭೇಟಿ: ಮಳೆಹಾನಿ ಕುರಿತು ಅವಲೋಕನ

ABOUT THE AUTHOR

...view details