ಕರ್ನಾಟಕ

karnataka

ಮುರುಘಾ ಮಠ ಟ್ರಸ್ಟ್​ಗೆ ಆಡಳಿತಾಧಿಕಾರಿ ನೇಮಕ: ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ ಮಾಡಿ ಸರ್ಕಾರದ ಆದೇಶ

By

Published : Dec 13, 2022, 5:38 PM IST

ಚಿತ್ರದುರ್ಗ ಜಿಲ್ಲೆಯ ಜಗದ್ಗುರು ಮುರುಘರಾಜೇಂದ್ರ ಮಠದ ಟ್ರಸ್ಟಿಯಾಗಿರುವ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದು, ಮಠದ ಒಟ್ಟು ಸ್ಥಿರಾಸ್ತಿಗೆ ಮತ್ತು ಮಠದ ಹಣಕಾಸು ನಿರ್ವಹಣೆ ಕಷ್ಟಕರವಾಗಿದೆ. ಹೀಗಾಗಿ, ಟ್ರಸ್ಟ್ ಹಾಗೂ ಶಿಕ್ಷಣ ಸಂಸ್ಥೆಗೆ ಆಡಾಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮುರುಘಾ ಮಠ
ಮುರುಘಾ ಮಠ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಜಗದ್ಗುರು ಮುರುಘರಾಜೇಂದ್ರ ಮಠ ಟ್ರಸ್ಟ್ ಹಾಗೂ ಶಿಕ್ಷಣ ಸಂಸ್ಥೆಗೆ ಆಡಾಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ. ಎಸ್ ವಸ್ತ್ರದ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಠದ ಟ್ರಸ್ಟಿಯಾಗಿರುವ ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದು, ಮಠದ ಒಟ್ಟು ಸ್ಥಿರಾಸ್ತಿಗೆ ಮತ್ತು ಮಠದ ಹಣಕಾಸು ನಿರ್ವಹಣೆ ಕಷ್ಟಕರವಾಗಿದೆ. ಈ ಟ್ರಸ್ಟ್ ಸಾರ್ವಜನಿಕ ಟ್ರಸ್ಟ್‌ ಆಗಿರುವುದರಿಂದ ಆಸ್ತಿಗಳ ನಿರ್ವಹಣೆಯಲ್ಲಿ ತೊಡಕಾಗುವ ಹಾಗೂ ದುರಾಡಳಿತ ಹಾಗೂ ಹಣಕಾಸು ದುರುಪಯೋಗ ಆಗುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ ತಿಳಿಸಿದ್ದರು.

ಸಂಸ್ಥೆಗೆ ಶಿವಮೂರ್ತಿ ಮುರುಘಾ ಶರಣರು ಮಠದ ಅಜೀವ ಪೀಠಾಧಿಪತಿ ಹಾಗೂ ವಿದ್ಯಾ ಸಂಸ್ಥೆಗೆ ಅಜೀವ ಅಧ್ಯಕ್ಷರು ಆಗಿರುವುದರಿಂದ ಮಠದ ಹಾಗೂ ವಿದ್ಯಾ ಸಂಸ್ಥೆಗಳಾಗುವ ಅನಾನುಕೂಲಗಳನ್ನು ತಪ್ಪಿಸಲು ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ರೀತಿಯ ಕ್ರಮ ಕೈಗೊಳ್ಳುವುದು ಅವಶ್ಯಕತೆ ಇದೆ ಎಂದು ವರದಿಯಲ್ಲಿ ತಿಳಿಸಿದ್ದರು.

ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮತ್ತು ಎಸ್‌ ಜೆ ಎಂ ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶಿವಮೂರ್ತಿ ಮುರುಘಾ ಸ್ವಾಮೀ 1.9.2022 ರಿಂದ ನ್ಯಾಯಾಂಗ ಬಂಧನದಲ್ಲಿ ಇರುವುದರಿಂದ, ಸಂಸ್ಥೆಯ ನಿರ್ವಹಣೆಯಲ್ಲಿ ಈ ಸಂಸ್ಥೆಯ ದಿನನಿತ್ಯದ ಕಾರ್ಯಚಟುವಟಿಕೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಸಾರ್ವಜನಿಕ ಹಿತದೃಷ್ಟಿಯಿಂದ ಮಠದ ಚರಾ-ಸ್ಥಿರಾಸ್ತಿಗಳನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸುವ ಹಿತದೃಷ್ಟಿಯಿಂದ ಟ್ರಸ್ಟ್ ಹಾಗೂ ಶಿಕ್ಷಣ ಸಂಸ್ಥೆಗೆ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಓದಿ:ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ಡಿ.16ಕ್ಕೆ ಮುಂದೂಡಿದ ಹೈಕೋರ್ಟ್

ABOUT THE AUTHOR

...view details