ಬೆಂಗಳೂರು:ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಇಬ್ಬರು ಪ್ರಮುಖ ಆರೋಪಿಗಳಾದ ಇರ್ಫಾನ್ ಪಾಷಾ ಮತ್ತು ಮೊಹಮದ್ ಮುಜೀಬುಲ್ಲಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.
ಹೈಕೋರ್ಟ್ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಹಾಗೂ ಶಿವಶಂಕರ ಅಮರಣ್ಣವರ ಅವರು ಮಂಗಳವಾರ ಇಬ್ಬರೂ ಆರೋಪಿಗಳು ಜಾಮೀನು ಮಂಜೂರು ಮಾಡುವಂತೆ ಕೋರಿದ್ದ ಅರ್ಜಿಗಳ ವಿಚಾರಣೆ ಅಂತಿಮಗೊಳಿಸಿದರು.