ಕರ್ನಾಟಕ

karnataka

ಕಸ್ಟಡಿ ಅವಧಿ ಮುಕ್ತಾಯಕ್ಕೂ ಮುನ್ನವೇ ಸ್ಯಾಂಟ್ರೋ ರವಿ ನ್ಯಾಯಾಂಗ ಬಂಧನಕ್ಕೆ

By

Published : Jan 30, 2023, 12:07 PM IST

ಸ್ಯಾಂಟ್ರೋ ರವಿ ಪ್ರಕರಣ. ಜನವರಿ 30ರ ತನಕ ತಮ್ಮ ಕಸ್ಟಡಿಗೆ ಪಡೆದಿದ್ದ ಸಿಐಡಿ, 2 ದಿನಗಳ ಮೊದಲೇ, ಅಂದರೆ ಜನವರಿ 28 ರಂದೇ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

santro ravi
ಸ್ಯಾಂಟ್ರೋ ರವಿ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಸ್ಯಾಂಟ್ರೋ ರವಿಯನ್ನು ಸಿಐಡಿ ತನಿಖಾಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಆರೋಪಿಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು ಗುರುವಾರ ರಾತ್ರಿ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದು ಶುಕ್ರವಾರ ರವಿಯನ್ನು ಸಿಐಡಿ ತನಿಖಾಧಿಕಾರಿಗಳು ವಶಕ್ಕೆ ಪಡೆದಿದ್ದರು. ಜ.30ರ ತನಕ ತಮ್ಮ ಕಸ್ಟಡಿಗೆ ಪಡೆದಿದ್ದ ಸಿಐಡಿ ಇದೀಗ ಎರಡು ದಿನ ಮೊದಲೇ, ಅಂದರೆ ಜ.28 ರಂದೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವುದಾಗಿ ಸಿಐಡಿ ಮೂಲಗಳು ತಿಳಿಸಿವೆ. 2ನೇ ಪತ್ನಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿರುವ ಆರೋಪದಡಿ ಮೈಸೂರಿನ‌ ವಿಜಯನಗರ ಠಾಣೆಯಲ್ಲಿ ಸ್ಯಾಂಟ್ರೋ ರವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಸಿಐಡಿಗೆ ವರ್ಗಾವಣೆಯಾಗಿತ್ತು.

ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿಕೊಂಡಿದ್ದ ಆರೋಪವಿದ್ದು ಅಮಾನತುಗೊಂಡಿರುವ ಕಾಟನ್‌ಪೇಟೆ ಇನ್ಸ್​ಪೆಕ್ಟರ್​ ಆಗಿದ್ದ ಪ್ರವೀಣ್ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ತನಿಖೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿ ವರದಿ ಸಲ್ಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಜ.27ರಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ:ಸ್ಯಾಂಟ್ರೋ ರವಿ ಪ್ರಕರಣ..ಶೀಘ್ರದಲ್ಲೇ ನ್ಯಾಯಾಲಯಕ್ಕೆ ವರದಿ: ಪೊಲೀಸ್ ಕಮಿಷನರ್

ಪ್ರಕರಣದ ಹಿನ್ನೆಲೆ:ಅತ್ಯಾಚಾರ, ವೇಶ್ಯಾವಾಟಿಕೆ, ವಂಚನೆ, ಜಾತಿ ನಿಂದನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಮಂಜುನಾಥ್ ಕೆ‌.ಎಸ್. ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಸ್ಯಾಂಟ್ರೋ ರವಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎರಡನೇ ಪತ್ನಿ ನೀಡಿರುವ ದೂರಿನ ಅನ್ವಯ ಜ.2 ರಂದು ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಸ್ಯಾಂಟ್ರೋ ರವಿ ಪ್ರಕರಣ: ಸಿಐಡಿ ತನಿಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರ

2ನೇ ಪತ್ನಿಯ ಆರೋಪ:ದೈಹಿಕ ದೌರ್ಜನ್ಯ ಹಾಗೂ ಮಾನಸಿಕ ಕಿರುಕುಳ ಪ್ರಕರಣದಲ್ಲಿ ಸಿಐಡಿ ತನಿಖಾಧಿಕಾರಿಗಳ ಮುಂದೆ ಸ್ಯಾಂಟ್ರೋ ರವಿ ಎರಡನೇ ಪತ್ನಿ ಹಾಜರಾಗಿದ್ದರು. ಸಿಐಡಿ ಡಿವೈಎಸ್​ಪಿ ನರಸಿಂಹಮೂರ್ತಿ ಮುಂದೆ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಇತ್ತೀಚೆಗೆ(ಜ.21) ಹೇಳಿಕೆ ನೀಡಿದ್ದರು. ಸಿಐಡಿ ಪೊಲೀಸರ ವಶದಲ್ಲಿರುವ ಸ್ಯಾಂಟ್ರೋ ರವಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಜ.21 ರಂದು ವೈದ್ಯಕೀಯ ತಪಾಸಣೆ ಮಾಡಿಸಲಾಗಿತ್ತು. ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ತನಿಖೆ ನಡೆಸಲು ಸರ್ಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ:ಸ್ಯಾಂಟ್ರೋ ರವಿ ಪ್ರಕರಣ: ಸಿಐಡಿ ತನಿಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರ

ABOUT THE AUTHOR

...view details