ಕರ್ನಾಟಕ

karnataka

ಸ್ಯಾಂಟ್ರೋ ರವಿ ಪ್ರಕರಣ..ಶೀಘ್ರದಲ್ಲೇ ನ್ಯಾಯಾಲಯಕ್ಕೆ ವರದಿ: ಪೊಲೀಸ್ ಕಮಿಷನರ್

By

Published : Jan 27, 2023, 12:14 PM IST

Updated : Jan 27, 2023, 3:01 PM IST

ಆರೋಗ್ಯದಲ್ಲಿ ಏರುಪೇರಾದ ಕಾರಣ ಸಿಐಡಿ ಕಸ್ಟಡಿಯಲ್ಲಿರುವ ಸ್ಯಾಂಟ್ರೋ ರವಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

Santro Ravi
ಸ್ಯಾಂಟ್ರೋ ರವಿ

ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿರುವುದು..

ಬೆಂಗಳೂರು:ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿಕೊಂಡಿದ್ದ ಆರೋಪ ಹಿನ್ನೆಲೆ ಅಮಾನತುಗೊಂಡಿರುವ ಕಾಟನ್ ಪೇಟೆ ಇನ್ಸ್​ಪೆಕ್ಟರ್​ ಆಗಿದ್ದ ಪ್ರವೀಣ್ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ತನಿಖೆ ಅಂತಿಮ ಹಂತದಲ್ಲಿದ್ದು ಶೀಘ್ರದಲ್ಲಿ ವರದಿ ಸಲ್ಲಿಸುವುದಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದರು.

ಅಪರಾಧ ಪ್ರಕರಣವೊಂದರಲ್ಲಿ ಬಂಧಿತನಾಗಿ ಸಿಐಡಿ ವಶದಲ್ಲಿರುವ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಕೇಸ್ ದಾಖಲಿಸಿಕೊಂಡಿರುವುದು ಮೇಲ್ನೋಟಕ್ಕೆ ತಿಳಿದು ಬಂದಿತ್ತು‌. ಈ ಹಿನ್ನೆಲೆ ತನಿಖೆ ನಡೆಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿತ್ತು.‌ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಸ್ಯಾಂಟ್ರೋ ರವಿ ಪತ್ನಿ ಹಾಗೂ ಅಮಾನತುಗೊಂಡಿರುವ ಇನ್ಸ್​​ಪೆಕ್ಟರ್​ ವಿಚಾರಣೆ ನಡೆಸಲಾಗಿದೆ. ಶೀಘ್ರದಲ್ಲೇ ಅಂತಿಮ ವರದಿ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು:ಅಪರಾಧ ತನಿಖಾ ವಿಭಾಗ (ಸಿಐಡಿ) ವಶದಲ್ಲಿರುವ ಸ್ಯಾಂಟ್ರೋ ರವಿಯ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧುಮೇಹದಿಂದ ಬಳಲುತ್ತಿರುವ ಆರೋಪಿಯ ಆರೋಗ್ಯದಲ್ಲಿ ನಿನ್ನೆ ಸಂಜೆ ವ್ಯತ್ಯಯ ಕಂಡುಬಂದಿತ್ತು. ತಕ್ಷಣ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಜ. 30ಕ್ಕೆ ಕಸ್ಟಡಿ ಅವಧಿ ಅಂತ್ಯ: ಪತ್ನಿಯ ವಿರುದ್ಧ ಸುಳ್ಳು ಪ್ರಕರಣ, ಮಾನಸಿಕ ಹಾಗೂ ದೈಹಿಕ‌ ಕಿರುಕುಳ ಪ್ರಕರಣದಲ್ಲಿ ಬಂಧಿತನಾಗಿರುವ ಸ್ಯಾಂಟ್ರೋ ರವಿ ಸದ್ಯ ಸಿಐಡಿ ವಶದಲ್ಲಿದ್ದಾರೆ. ಜನವರಿ 30ಕ್ಕೆ ಕಸ್ಟಡಿ ಅವಧಿ ಅಂತ್ಯವಾಗಲಿದೆ.

ಪ್ರಕರಣದ ಹಿನ್ನೆಲೆ:ಅತ್ಯಾಚಾರ, ವೇಶ್ಯಾವಾಟಿಕೆ, ವಂಚನೆ, ಜಾತಿ ನಿಂದನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಮಂಜುನಾಥ್ ಕೆ‌.ಎಸ್.ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ. ಸ್ಯಾಂಟ್ರೋ ರವಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎರಡನೇ ಪತ್ನಿ ನೀಡಿರುವ ದೂರಿನ ಅನ್ವಯ ಜ. 2 ರಂದು ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಸ್ಯಾಂಟ್ರೋ ರವಿ ಪ್ರಕರಣ: ಸಿಐಡಿ ತನಿಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರ

ದೌರ್ಜನ್ಯದ ಬಗ್ಗೆ ಹೇಳಿಕೆ ನೀಡಿದ್ದ 2ನೇ ಪತ್ನಿ:ದೈಹಿಕ ದೌರ್ಜನ್ಯ ಹಾಗೂ ಮಾನಸಿಕ ಕಿರುಕುಳ ಪ್ರಕರಣದಲ್ಲಿ ಸಿಐಡಿ ತನಿಖಾಧಿಕಾರಿಗಳ ಮುಂದೆ ಸ್ಯಾಂಟ್ರೋ ರವಿ ಎರಡನೇ ಪತ್ನಿ ಹಾಜರಾಗಿದ್ದರು. ಸಿಐಡಿ ಡಿವೈಎಸ್​ಪಿ ನರಸಿಂಹಮೂರ್ತಿ ಮುಂದೆ ತನ್ನ ಮೇಲಾದ ದೌರ್ಜನ್ಯದ ಬಗ್ಗೆ ಇತ್ತೀಚೆಗೆ(ಜ.21) ಹೇಳಿಕೆ ನೀಡಿದ್ದರು. ಸಿಐಡಿ ಪೊಲೀಸರ ವಶದಲ್ಲಿರುವ ಸ್ಯಾಂಟ್ರೋ ರವಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಜ.21 ರಂದು ವೈದ್ಯಕೀಯ ತಪಾಸಣೆ ಮಾಡಿಸಲಾಗಿತ್ತು.

ಸಿಐಡಿ ತನಿಖೆಗೆ ವರ್ಗಾಯಿಸಿದ ಸರ್ಕಾರ:ಅತ್ಯಾಚಾರ, ವೇಶ್ಯಾವಾಟಿಕೆ, ವಂಚನೆ, ಜಾತಿ ನಿಂದನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಮಂಜುನಾಥ್ ಕೆ‌.ಎಸ್. ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ:ಸ್ಯಾಂಟ್ರೋ ರವಿ ಪ್ರಕರಣ: ಸಿಐಡಿ ತನಿಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರ

ಪ್ರಕರಣ ದಾಖಲಿಸಿದ್ದ 2ನೇ ಪತ್ನಿ: ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಹೊಸ ಕೇಸ್ ದಾಖಲಾಗಿತ್ತು. ಚೆಕ್ ಕಳ್ಳತನ ಸಂಬಂಧ ಮೈಸೂರಿನ ದೇವರಾಜ ಪೊಲೀಸ್ ಸ್ಟೇಷನ್​​ನಲ್ಲಿ ಆರೋಪಿ ವಿರುದ್ಧ ಅವರ ಎರಡನೇ ಪತ್ನಿ ದೂರು ನೀಡಿದ್ದಾರೆ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಸ್ಯಾಂಟ್ರೋ ರವಿ ವಿರುದ್ಧ ಐಪಿಸಿ 465, 468, 506, 420 ಹಾಗೂ 34 ಸೆಕ್ಷನ್​ ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ:ಸಿಐಡಿ ತನಿಖಾಧಿಕಾರಿಗಳ ಮುಂದೆ ಹಾಜರಾದ ಸ್ಯಾಂಟ್ರೋ ರವಿ 2ನೇ ಪತ್ನಿ

Last Updated :Jan 27, 2023, 3:01 PM IST

ABOUT THE AUTHOR

...view details