ಕರ್ನಾಟಕ

karnataka

ನಾಳೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

By

Published : May 7, 2023, 3:25 PM IST

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಾಳೆ ಎಸ್​ಎಸ್​ಎಲ್​ಸಿ ಫಲಿತಾಂಶವನ್ನು ಪ್ರಕಟಿಸಲಿದೆ.

sslc-result-will-be-declared-tomorrow-at-10-am
ಬೆಂಗಳೂರು: ನಾಳೆ ಬೆಳಗ್ಗೆ 10 ಗಂಟೆಗೆ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

ಬೆಂಗಳೂರು: ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿದ್ದ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಗೊಳ್ಳಲಿದ್ದು, 11 ಗಂಟೆ ನಂತರ ವೆಬ್ ಸೈಟ್ ಮೂಲಕ ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.

ಸೋಮವಾರ ಬೆಳಗ್ಗೆ 10 ಗಂಟೆಗೆ ಮಲ್ಲೇಶ್ವರದಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ಕರೆಯಲಾಗಿದ್ದು, ಎಸ್​ಎಸ್​ಎಲ್​ಸಿ ಫಲಿತಾಂಶವನ್ನು ಪ್ರಕಟಿಸಲಿದೆ. 11 ಗಂಟೆಯಿಂದ ಇಲಾಖೆಯ ಅಂತರ್ಜಾಲದಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಮಂಡಳಿ ತಿಳಿಸಿದೆ. ಫಲಿತಾಂಶಕ್ಕಾಗಿ www.karresults.nic.in ಅಂತರ್ಜಾಲ ಸಂಪರ್ಕಿಸಲು ತಿಳಿಸಿದೆ.

ಏಪ್ರಿಲ್ 24 ರಿಂದ ಮೌಲ್ಯಮಾಪನ ಕಾರ್ಯ ನಡೆದಿದ್ದು, ರಾಜ್ಯಾದ್ಯಂತ 236 ಕೇಂದ್ರಗಳಲ್ಲಿ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲಾಗಿದೆ. ಇದಕ್ಕಾಗಿ 73 ಸಾವಿರಕ್ಕೂ ಹೆಚ್ಚಿನ ಶಿಕ್ಷಕರನ್ನು ನಿಯೋಜನೆ ಮಾಡಲಾಗಿತ್ತು. ಮೌಲ್ಯಮಾಪಕ ಕಾರ್ಯ ಪೂರ್ಣಗೊಂಡಿದ್ದು, ಸೋಮವಾರ ಫಲಿತಾಂಶ ಪ್ರಕಟ ಮಾಡಲಾಗುತ್ತಿದೆ.

ರಾಜ್ಯಾದ್ಯಂತ ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೂ ಎಸ್ಎಸ್ಎಲ್​ಸಿ ಮುಖ್ಯ ಪರೀಕ್ಷೆ ನಡೆದಿತ್ತು, ಈ ಬಾರಿಯ ಪರೀಕ್ಷೆಗೆ ಒಟ್ಟು 15,498 ಶಾಲೆಗಳಿಂದ ವಿದ್ಯಾರ್ಥಿಗಳು ನೋಂದಾಯಿತರಾಗಿದ್ದರು. ಇದರಲ್ಲಿ 5833 ಸರ್ಕಾರಿ ಶಾಲೆಗಳು, 3605 ಅನುದಾನಿತ ಶಾಲೆಗಳು ಹಾಗು 6060 ಅನುದಾನಿರಹಿತ ಶಾಲೆಗಳಿಂದ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 7,94,611 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುವ ಶಾಲಾ ವಿದ್ಯಾರ್ಥಿಗಳಾಗಿದ್ದು, 20,750 ಪುನರಾವರ್ತಿತ ವಿದ್ಯಾರ್ಥಿಗಳು, 18,272 ಖಾಸಗಿ ಅಭ್ಯರ್ಥಿಗಳು, 8,862 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು, 2010ಕ್ಕಿಂತ ಹಿಂದಿನ ಸಾಲಿನ 301 ಪುನರಾವರ್ತಿತ ಅಭ್ಯರ್ಥಿಗಳು, 2010ಕ್ಕಿಂತ ಹಿಂದಿನ ಸಾಲಿನ 15 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಇದ್ದರು.

1845 ಕ್ಲಸ್ಟರ್ ಪರೀಕ್ಷಾ ಕೇಂದ್ರ, 1354 ನಾನ್ ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು, 106 ಖಾಸಗಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. 3,60,862 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು, 2,20,831 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು, 2,61,118 ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳಿದ್ದರು. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 3305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು.

ಇದನ್ನೂ ಓದಿ:SSLC ಪರೀಕ್ಷೆ ಕೀ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ

ABOUT THE AUTHOR

...view details