ಕರ್ನಾಟಕ

karnataka

SSLC ಪರೀಕ್ಷೆ ಫಲಿತಾಂಶಕ್ಕೆ ಕ್ಷಣಗಣನೆ: ನೀವು ರಿಸಲ್ಟ್‌ ನೋಡಬೇಕಾಗಿದ್ದು ಹೀಗೆ..

By

Published : Aug 9, 2021, 12:27 PM IST

ಜೂನ್ 19-22 ರಂದು ಪರೀಕ್ಷೆ ನಡೆದಿದ್ದು, 99.65% ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಹಿಂದೆಯೇ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟಿಸುವುದಾಗಿ ಈ ಹಿಂದಿನ ಸಚಿವರು ತಿಳಿಸಿದ್ದರು. ಹೀಗಾಗಿ ಇದರ ತಯಾರಿಯಲ್ಲಿರುವ ಶಿಕ್ಷಣ ಇಲಾಖೆ ಇಂದು ಫಲಿತಾಂಶ ಪ್ರಕಟ ಮಾಡುವುದಾಗಿ ತಿಳಿಸಿದೆ.

SSLC ಪರೀಕ್ಷೆ ಫಲಿತಾಂಶ ಪ್ರಕಟ
SSLC ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು:ಕೊರೊನಾ ಕಾರಣಕ್ಕೆ ರಾಜ್ಯದಲ್ಲಿ ಮೊದಲ ಬಾರಿಗೆ ಎಸ್ಎಸ್ಎಲ್​​ಸಿ ಪ್ರಶ್ನೆ ಪತ್ರಿಕೆ ಮಾದರಿಯನ್ನೇ ಬದಲಾಯಿಸುವ ಮೂಲಕ ಪರೀಕ್ಷೆ ನಡೆಸಲಾಗಿತ್ತು. ಇಂದು ಮಧ್ಯಾಹ್ನ 3.30ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ: ಫಲಿತಾಂಶ ಪ್ರಕಟಿಸುವ ವಿಚಾರ ಕುರಿತು ನಿನ್ನೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಇಂದು ಎಸ್‌ಎಸ್‌ಎಲ್‌ಸಿ​ ಫಲಿತಾಂಶ ಪ್ರಕಟಿಸುವ ನಿರ್ಧಾರಕ್ಕೆ ಬರಲಾಗಿತ್ತು. ಈ ಹಿಂದೆಯೇ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟಿಸುವುದಾಗಿ ಈ ಹಿಂದಿನ ಶಿಕ್ಷಣ ಸಚಿವರಾಗಿದ್ದ ಎಸ್‌.ಸುರೇಶ್ ಕುಮಾರ್‌ ತಿಳಿಸಿದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಕಟಿಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜೂನ್ 19-22 ರಂದು ಪರೀಕ್ಷೆ ನಡೆದಿದ್ದು, ಶೇ 99.65 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಆರು ವಿಷಯಗಳ ಪರೀಕ್ಷೆಯು ಕೇವಲ ಎರಡು ದಿನದಲ್ಲಿ ಪೂರ್ಣವಾಗಿದ್ದು ತಲಾ 40 ಅಂಕಗಳಂತೆ ಒಟ್ಟು 120 ಅಂಕಗಳಿಗೆ ಎರಡು ಪರೀಕ್ಷೆ ನಡೆಸಲಾಗಿತ್ತು. ವಿದ್ಯಾರ್ಥಿ ಪಡೆದ ಅಂಕಗಳನ್ನು ದ್ವಿಗುಣಗೊಳಿಸಿ ಒಟ್ಟು ಅಂಕಗಳ ಮೂಲಕ ಫಲಿತಾಂಶ ಪ್ರಕಟಿಸಲಾಗುತ್ತದೆ. ಪರೀಕ್ಷೆ ಬರೆದವರನ್ನು ಯಾರನ್ನೂ ಫೇಲ್ ಮಾಡದೇ ಎಲ್ಲರೂ ಪಾಸ್ ಅಂತ ಈಗಾಗಲೇ ಘೋಷಿಸಲಾಗಿದೆ‌. ಅಂಕ ತೃಪ್ತಿಕರವಾಗಿಲ್ಲದಿದ್ದರೆ ಪಿಯುಸಿ ಮಾದರಿಯಲ್ಲಿ ಮಕ್ಕಳು ಮತ್ತೊಮ್ಮೆ ಪರೀಕ್ಷೆ ಬರೆಯಬಹುದು ಎಂದು ಹೇಳಿದ್ದಾರೆ.

ಫಲಿತಾಂಶ ಹೀಗೆ ನೋಡಿ..

ಅಧಿಕೃತ ವೆಬ್‌ಸೈಟ್​​ನಲ್ಲಿ ಫಲಿತಾಂಶ: ಎಸ್ಎಸ್ಎಲ್‌ಸಿ ಫಲಿತಾಂಶವನ್ನು ವಿದ್ಯಾರ್ಥಿಗಳಿಗೆ ನೋಂದಾಯಿತ ಮೊಬೈಲ್ ನಂಬರ್‌ಗೆ ಎಸ್ಎಂಎಸ್ ಮೂಲಕ ಸಂದೇಶ ರವಾನೆಯಾಗಲಿದೆ.‌ ಹಾಗೆಯೇ ಬೋರ್ಡ್‌ನ ಅಧಿಕೃತ ವೆಬ್‌ಸೈಟ್ www.sslc.kar.nic.in ಅಥವಾ karresults.nic.in ಫಲಿತಾಂಶ ಲಭ್ಯವಿರಲಿದೆ.‌

ABOUT THE AUTHOR

...view details