ಕರ್ನಾಟಕ

karnataka

ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭಕೋರಿದ ರಾಜ್ಯ ಬಿಜೆಪಿ ನಾಯಕರು

By

Published : Sep 17, 2021, 9:07 AM IST

71ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ರಾಜ್ಯ ಬಿಜೆಪಿ ನಾಯಕರು ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.

Narendra Modi
ಪ್ರಧಾನಿ ಮೋದಿ

ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 71ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರು ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.

"ಆದರಣೀಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ 71ನೇ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ಸದೃಢ, ಸಶಕ್ತ, ಸಮರ್ಥ ನವಭಾರತ ನಿರ್ಮಾಣದೆಡೆಗೆ ದೇಶವನ್ನು ಮುನ್ನಡೆಸುತ್ತಿರುವ ತಮಗೆ, ದೇವರು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ತಮ್ಮ ನಾಯಕತ್ವಕ್ಕೆ ಮತ್ತಷ್ಟು ಶಕ್ತಿಯನ್ನು ಕರುಣಿಸಲಿ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

"ಕೋಟ್ಯಂತರ ಭಾರತೀಯರ ನೆಚ್ಚಿನ ಜನನಾಯಕ, ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನ ಪೂರ್ವಕ ಶುಭಕಾಮನೆಗಳು. ದೇವರ ಆನುಗ್ರಹ ಸದಾ ಇರಲಿ" ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ.

"ಭವ್ಯ ಭಾರತದ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟು, ಹಲವಾರು ಜನಪರ ಯೋಜನೆಗಳ ಮೂಲಕ ಮನೆ ಮಾತಾಗಿರುವ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ABOUT THE AUTHOR

...view details